• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಅ.26ಕ್ಕೆ ದಸರಾ ಜಂಬೂಸವಾರಿ; ಪೊಲೀಸ್‌ ಆಯುಕ್ತರ ಪರಿಶೀಲನೆ

By ಮೈಸೂರು ಪ್ರತಿನಿಧಿ
|

ಮೈಸೂರು, ಅಕ್ಟೋಬರ್ 24: ಸರಳ ದಸರಾ ಆಚರಣೆ ಹಿನ್ನೆಲೆಯಲ್ಲಿ ಈ ಬಾರಿ ಜಂಬೂಸವಾರಿಯ ಮೆರವಣಿಗೆಯನ್ನು 30 ರಿಂದ 40 ನಿಮಿಷಗಳಿಗೆ ಸೀಮಿತಗೊಳಿಸಲಾಗಿದೆ ಎಂದು ಪೊಲೀಸ್‌ ಆಯುಕ್ತ ಡಾ.ಚಂದ್ರಗುಪ್ತ ತಿಳಿಸಿದರು.

ಅರಮನೆ ಆವರಣದಲ್ಲಿ ಶನಿವಾರ ದಸರಾ ಅಂತಿಮ ಸಿದ್ಧತೆ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಬಲರಾಮ ಗೇಟ್​ನ‌ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ನಂತರ ಮಧ್ಯಾಹ್ನ ಮೆರವಣಿಗೆ ನಡೆಯಲಿದೆ. ಆಹ್ವಾನಿತರಿಗೆ ಮಾತ್ರ ಅರಮನೆ ಒಳಗೆ ಪ್ರವೇಶವಿದ್ದು, ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ ಎಂದು ಹೇಳಿದರು.

ಮೈಸೂರು ದಸರಾ; 30 ನಿಮಿಷದಲ್ಲಿ ಮುಗಿಯಲಿದೆ ಜಂಬೂಸವಾರಿ ಮೆರವಣಿಗೆ

30 ರಿಂದ 40 ನಿಮಿಷಕ್ಕೆ ಜಂಬೂಸವಾರಿ ಅವಧಿಯನ್ನು ಸೀಮಿತಗೊಳಿಸಲಾಗಿದೆ. ಜಂಬೂಸವಾರಿ ದಿನ ಅರಮನೆ ಸುತ್ತ ಇರುವ ಎಲ್ಲ ರಸ್ತೆಗಳಲ್ಲಿ ಸಂಚಾರಕ್ಕೆ ನಿರ್ಬಂಧ ಇರುತ್ತದೆ. ಕೇವಲ 300 ಜನರಿಗೆ ಅರಮನೆಯಲ್ಲಿ ಜಂಬೂಸವಾರಿ ಮೆರವಣಿಗೆ ವೀಕ್ಷಿಸಲು ಅವಕಾಶ ಇದ್ದು, ದೂರದರ್ಶನದಲ್ಲಿ ನೇರ ಪ್ರಸಾರ ಇರಲಿದೆ. ಆದ್ದರಿಂದ ಕೋವಿಡ್ ಸಂದರ್ಭದಲ್ಲಿ ಜನರು ಮನೆಯಿಂದಲೇ ಸರಳ ದಸರಾವನ್ನು ವೀಕ್ಷಣೆ ಮಾಡಬೇಕೆಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದರು.

English summary
Police Commissioner Chandragupta examined Dasara's final preparation today at the Palace premises and said that this time the Jambusavari parade is limited to 30 to 40 minutes
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X