ಸಂತ್ರಸ್ತರ ಹೆಸರಿನಲ್ಲಿ ಅನಧಿಕೃತವಾಗಿ ಹಣ ವಸೂಲಿ ಮಾಡಿದರೆ ಹುಷಾರ್ !

ಮೈಸೂರು, ಆಗಸ್ಟ್ 13 : ಉತ್ತರ ಕರ್ನಾಟಕ ಹಾಗೂ ಕೊಡಗು ಜಿಲ್ಲೆಗಳ ನೆರೆ ಸಂತ್ರಸ್ತರಿಗಾಗಿ ಯಾವುದೇ ಅನಧಿಕೃತ ವ್ಯಕ್ತಿಗಳಿಗೆ ಹಣ ಅಥವಾ ಸಾಮಗ್ರಿಗಳನ್ನು ನೀಡಬಾರದೆಂದು ನಗರ ಪೊಲೀಸ್ ಆಯುಕ್ತ ಕೆ.ಟಿ. ಬಾಲಕೃಷ್ಣ ಅವರು ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ.

ಸಂತ್ರಸ್ತರ ನೆರವಿಗಾಗಿ ಹಲವು ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರಿಂದ ವಿವಿಧ ಸಾಮಗ್ರಿಗಳು ಹಾಗೂ ಹಣ ಸಂಗ್ರಹಿಸಲಾಗುತ್ತಿದೆ. ಆದರೆ ಕೆಲವು ಅನಧಿಕೃತ ವ್ಯಕ್ತಿಗಳೂ ದೇಣಿಗೆ ಹಣ ಸಂಗ್ರಹಿಸುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಸಹಾಯ ಮಾಡಬಯಸುವವರು ನೇರ ಮುಖ್ಯಮಂತ್ರಿಗಳ ನಿಧಿಗೆ ವರ್ಗಾವಣೆ ಮಾಡಿ ಎಂದು ಕೋರಿದ್ದಾರೆ.

Police Commissioner gives warning who will collect money in the name of flood
ಮೈಸೂರಿನ ಪುರಭವನದಲ್ಲಿ ತೆರೆಯಲಾಗಿರುವ ಜಿಲ್ಲಾಡಳಿತ ಕೇಂದ್ರಕ್ಕೆ ಅಗತ್ಯ ಸಾಮಗ್ರಿಗಳನ್ನು ನೀಡಿ ರಶೀದಿ ಪಡೆಯುವಂತೆ ಪೊಲೀಸ್ ಕಮೀಷನರ್ ತಿಳಿಸಿದ್ದಾರೆ.

ಅನಧಿಕೃತವಾಗಿ ದೇಣಿಗೆ ಹಣ ಮತ್ತು ಸಾಮಗ್ರಿ ಸಂಗ್ರಹಿಸಿ ದುರ್ಬಳಕೆ ಮಾಡುವುದು ಕಂಡುಬಂದಲ್ಲಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅಂತಹ ವ್ಯಕ್ತಿಗಳು ಹಣ ಸಂಗ್ರಹಣೆ ಮಾಡುತ್ತಿದ್ದಲ್ಲಿ ಹತ್ತಿರದ ಪೊಲೀಸ್ ಠಾಣೆ ಅಥವಾ ನಗರ ಪೊಲೀಸ್ ಕಂಟ್ರೋಲ್ ರೂಂಗೆ ದೂರು ನೀಡುವಂತೆಯೂ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+