ಹಣವಿದ್ದ ಪರ್ಸ್ ಒಪ್ಪಿಸಿ ಪ್ರಾಮಾಣಿಕತೆ ಮೆರೆದ ಮೈಸೂರಿನ ಕಾನ್ಸ್ಟೆಬಲ್
ಮೈಸೂರು, ಜುಲೈ 8: ಈ ಜಗತ್ತಿನಲ್ಲಿ ಹಣವನ್ನು ಸುಲಭ ಮಾರ್ಗದಲ್ಲಿ ಪಡೆಯುವುದಕ್ಕೆ ಹಾತೊರೆಯುವವರೇ ಸುಮಾರು ಮಂದಿ. ಆದರೆ ತಮಗೆ ರಸ್ತೆಯಲ್ಲಿ ಸಿಕ್ಕ ಪರ್ಸ್ ಅನ್ನು ಪೊಲೀಸ್ ಠಾಣೆಗೆ ನೀಡುವ ಮೂಲಕ ಇಲ್ಲಿನ ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ಪ್ರಾಮಾಣಿಕತೆ ಮೆರೆದಿದ್ದಾರೆ.
Recommended Video
ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪೊಲೀಸ್ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸಿದ್ದ ವಿ. ಶ್ರೀನಿವಾಸ್ ಎಂಬುವವರೇ ಪ್ರಾಮಾಣಿಕತೆ ಮೆರೆದ ಕಾನ್ಸ್ಟೆಬಲ್. ಇವರು ಮಂಗಳವಾರ ಮಧ್ಯಾಹ್ನ ಜಿಲ್ಲಾ ನ್ಯಾಯಾಲಯದ ಕಡೆಯಿಂದ ಆರ್ಟಿಒ ಕಚೇರಿ ಕಡೆ ಬರುತ್ತಿರುವಾಗ ರಸ್ತೆಯಲ್ಲಿ ಹಸಿರು ಬಣ್ಣದ ಪರ್ಸ್ ಬಿದ್ದಿರುವುದು ಕಂಡುಬಂತು. ಅದನ್ನು ನೋಡಿ ಪರ್ಸ್ ತೆಗೆದುಕೊಳ್ಳಲು ಹೋದಾಗ ವಾಹನವೊಂದು ಪರ್ಸ್ ಮೇಲೆ ಹರಿದ ಪರಿಣಾಮ ನೋಟುಗಳು ಚೆಲ್ಲಾಪಿಲ್ಲಿಯಾದವು.

ನೋಟುಗಳನ್ನು ಆಯ್ದುಕೊಂಡು ಪರ್ಸ್ ನೋಡಿದಾಗ ಅದರಲ್ಲಿ 3 ವಿದೇಶಿ ನೋಟುಗಳು ಇರುವುದು ಕಂಡುಬಂದಿವೆ. ತಕ್ಷಣ ಆ ಪರ್ಸ್ ಮತ್ತು ಹಣವನ್ನು ಲಕ್ಷ್ಮಿಪುರಂ ಠಾಣೆಗೆ ಕೊಟ್ಟು ಕಾನ್ಸ್ಟೆಬಲ್ ಕರ್ತವ್ಯಕ್ಕೆ ಮರಳಿದ್ದಾರೆ. ಇವರ ಪ್ರಾಮಾಣಿಕತೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದ್ದು, ಈ ಪರ್ಸ್ ಕಳೆದುಕೊಂಡವರು ಬಂದು ಪರ್ಸ್ ಪಡೆಯಬಹುದೆಂದು ಲಕ್ಷ್ಮೀಪುರಂ ಪೊಲೀಸರು ತಿಳಿಸಿದ್ದಾರೆ.
-
Money Saving Vastu Tips: ವಾಸ್ತು ಪ್ರಕಾರ ಹಣ ಉಳಿಯುತ್ತಿಲ್ಲವೇ? ಈ ಸರಳ ಉಪಾಯಗಳನ್ನು ಅನುಸರಿಸಿ -
Mysuru-Nanjangud special train: ನಂಜನಗೂಡು ದೊಡ್ಡ ಜಾತ್ರೆಗೆ ಮೈಸೂರಿನಿಂದ ವಿಶೇಷ ರೈಲು ಸೇವೆ: ಸಚಿವ ವಿ.ಸೋಮಣ್ಣ ಮಾಹಿತಿ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
ಆಂಧ್ರಪ್ರದೇಶದಲ್ಲಿ ಕಲಬೆರಕೆ ಹಾಲು ಸೇವಿಸಿ 16 ಮಂದಿ ಸಾವು: ಹಲವು ರಾಜ್ಯಗಳಲ್ಲಿ ಅಧಿಕಾರಿಗಳಿಂದ ದಾಳಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು?












Click it and Unblock the Notifications