ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾದ ಪೊಲೀಸ್ ಜೀಪ್
ಮೈಸೂರು, ಜುಲೈ 28 : ಚಾಲಕನ ನಿಯಂತ್ರಣ ತಪ್ಪಿ ಪೊಲೀಸ್ ಜೀಪ್ ಅಪಘಾತಗೊಂಡು ಸಿಪಿಐ ಸೇರಿ ಮೂವರಿಗೆ ಗಾಯಗಳಾಗಿರುವ ಘಟನೆ ಇಂದು ಬೆಳಗ್ಗೆ ಮೈಸೂರು ಜಿಲ್ಲೆ ಹೆಚ್.ಡಿ ಕೋಟೆ ತಾಲೂಕಿನಲ್ಲಿ ನಡೆದಿದೆ.
ಎಚ್.ಡಿ.ಕೋಟೆ ತಾಲೂಕಿನ ಮಾದಾಪುರ ಗ್ರಾಮದ ಬಳಿ ಈ ಘಟನೆ ಸಂಭವಿಸಿದೆ. ಹೆಚ್.ಡಿ.ಕೋಟೆ ಪೊಲೀಸ್ ಠಾಣೆಗೆ ಸೇರಿದ ಜೀಪ್ ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ.
ಜೀಪ್‌ನಲ್ಲಿ ಪ್ರಯಾಣಿಸುತ್ತಿದ್ದ ಸರ್ಕಲ್ ಇನ್ಸ್ಪೆಕ್ಟರ್ ಹರೀಶ್ ಕುಮಾರ್ ಮತ್ತು ಚಾಲಕ ಗುರುಗೆ ಗಂಭೀರ ಗಾಯಗಳಾಗಿದ್ದು ಜಿಲ್ಲಾಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ.

ಮತ್ತೊಬ್ಬ ಚಾಲಕ ಪುಟ್ಟಸ್ವಾಮಿಗೂ ಗಾಯಗಳಾಗಿದ್ದು ಜೀಪ್ ಬ್ಯಾಲೆನ್ಸ್ ರಾಡ್ ಕಟ್ಟಾಗಿ ನಿಯಂತ್ರಣ ಕಳೆದುಕೊಂಡು ಈ ಘಟನೆ ಸಂಭವಿಸಿದೆ. ಸದ್ಯ ಪ್ರಾಣಾಪಾಯದಿಂದ ಮೂವರು ಪಾರಾಗಿದ್ದಾರೆ.












Click it and Unblock the Notifications