ಅಪಘಾತದಿಂದ ಪಾರಾದ ಪೊಲೀಸ್ ಅಧಿಕಾರಿ ಹೃದಯಾಘಾತದಿಂದ ಸಾವು
ಮೈಸೂರು, ಜನವರಿ 10: ಶ್ರೀರಂಗಪಟ್ಟಣ ತಾಲೂಕಿನ ಗೌಡಹಳ್ಳಿ ಬಳಿಯ ಹೆದ್ದಾರಿಯಲ್ಲಿ ನಡೆದಿದ್ದ ಸರಣಿ ಅಪಘಾತದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಎಸ್ಕಾರ್ಟ್ ಕಾರು ಜಖಂಗೊಂಡಿತ್ತು. ಆಗ ಆ ಎಸ್ಕಾರ್ಟ್ ವಾಹನದಲ್ಲಿದ್ದ ಪೊಲೀಸ್ ಅಧಿಕಾರಿ ಇದೀಗ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಪೊಲೀಸ್ ಅಧಿಕಾರಿ ಮರೀಗೌಡ (56) ಮಂಡ್ಯ ಪೊಲೀಸ್ ನಿವಾಸದಲ್ಲಿ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ್ದಾರೆ. ಮರೀಗೌಡ ನಿನ್ನೆ ಬೆಳಗ್ಗೆ ಟಿ.ಎಂ.ಹೊಸೂರು ಗೇಟ್ ಬಳಿ ನಡೆದಿದ್ದ ಸರಣಿ ಅಪಘಾತ ಪ್ರಕರಣದಲ್ಲಿ ದೂರುದಾರರಾಗಿದ್ದರು.

ಸರಣಿ ಅಪಘಾತದಲ್ಲಿ 3 ಪೊಲೀಸ್ ವಾಹನಗಳು, 2 ಖಾಸಗಿ ವಾಹನಗಳು ಜಖಂಗೊಂಡಿದ್ದವು. ಅದರಲ್ಲಿ ಮರೀಗೌಡ ಕೆಎ-11 ಜಿ-591 ಸಂಖ್ಯೆಯ ವಾಹನದಲ್ಲಿದ್ದರು ಎಂದು ತಿಳಿದುಬಂದಿದೆ. ಬೆಂಗಳೂರಿನಿಂದ ಮೈಸೂರಿಗೆ ಬೆಂಗಾವಲು ವಾಹನದೊಂದಿಗೆ ಸಿದ್ದರಾಮಯ್ಯ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಶ್ರೀರಂಗಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.












Click it and Unblock the Notifications