ಮಹಿಷಾ ದಸರಾ, ಚಲೋ ಚಾಮುಂಡಿ ಬೆಟ್ಟ ಕಾರ್ಯಕ್ರಮಕ್ಕೆ ಬ್ರೇಕ್ ಹಾಕಿದ ಪೊಲೀಸ್ ಇಲಾಖೆ
ಮೈಸೂರು, ಅಕ್ಟೋಬರ್ 10: ದಿನಕ್ಕೊಂದು ಸ್ವರೂಪ ಪಡೆದುಕೊಂಡಿದ್ದ ಮಹಿಷಾ ಆಚರಣೆಗೆ ಪೊಲೀಸರು ಬ್ರೇಕ್ ಹಾಕಿದ್ದು, ಅನುಮತಿ ನಿರಾಕರಿಸಿದ್ದಾರೆ. ಅ.13ರಂದು ಹಮ್ಮಿಕೊಂಡಿದ್ದ ಮಹಿಷ ದಸರಾ ಆಚರಣೆ ಹಾಗೂ ಬಿಜೆಪಿ ಪಕ್ಷದ ಚಲೋ ಚಾಮಂಡಿಬೆಟ್ಟ ನಡೆಸಲು ಅವಕಾಶ ನೀಡುವುದಿಲ್ಲ ಎಂದು ಪೊಲೀಸ್ ಆಯುಕ್ತ ರಮೇಶ್.ಬಿ ಆದೇಶ ಹೊರಡಿಸಿದ್ದಾರೆ.
ಸಾಂಸ್ಕೃತಿಕ ನಗರಿ ಮೈಸೂರು ದಸರಾ ಹಿನ್ನೆಲೆಯಲ್ಲಿ ಮಧುವಣಗಿತ್ತಿಯಂತೆ ಸಿಂಗಾರಗೊಳ್ಳುತ್ತಿದೆ. ರಸ್ತೆಗಳ ಗುಂಡಿ ಮುಚ್ಚಿಸಲಾಗುತ್ತಿದೆ. ಅರಮನೆ ಕಟ್ಟಡಗ ಬಲ್ಬ್ ಗಳನ್ನು ಬದಲಾಯಿಸಲಾಗುತ್ತಿದೆ. ಸರ್ಕಾರಿ ಕಟ್ಟಡಗಳಿಗೆ ಸುಣ್ಣಬಣ್ಣ ಬಳಿಯಲಾಗುತ್ತಿದೆ. ಆದರೆ, ಈ ನಡುವೆ ಮಹಿಷಾ ದಸರಾ ಹೆಚ್ಚು ಸದ್ದು ಮಾಡುತ್ತಿತ್ತು.

ಕಳೆದ ಎರಡು ವಾರದಿಂದ ಮಹಿಷಾ ದಸರಾ ಆಚರಣೆ ಸಂಬಂಧ ಮೈಸೂರು ನಗರದಲ್ಲಿ ಪರ-ವಿರೋಧ ಚರ್ಚೆ ಶುರುವಾಗಿತ್ತು. ಬಿಜೆಪಿ ಸಂಸದ ಪ್ರತಾಪಸಿಂಹ, ಮೇಯರ್ ಶಿವಕುಮಾರ್ ಹಾಗೂ ಶಾಸಕ ಟಿ.ಎಸ್.ಶ್ರೀವತ್ಸ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಮಹಿಷಾ ಆಚರಣೆಗೆ ವಿರೋಧ ವ್ಯಕ್ತಪಡಿಸಿದ್ದರು.
"ನಾವು ಸಂಷರ್ಷಕ್ಕೂ ಸಿದ್ದರಿದ್ದೇವೆ. ಮಹಿಷಾ ದಸರಾ ಆಚರಿಸಲು ಬಿಡುವುದಿಲ್ಲ" ಎಂದು ಪ್ರತಾಪಸಿಂಹ ಗುಡುಗಿದ್ದರು. ಜೊತೆಗೆ ಅ.13ರಂದು ಚಲೋ ಚಾಮುಂಡಿಬೆಟ್ಟ ನಡೆಸುವ ನಿರ್ಧಾರ ಪ್ರಕಟಿಸಿದ್ದರು. ಇತ್ತ ಮಹಿಷ ದಸರಾ ಆಚರಣೆ ಸಮಿತಿ ''ಇದು ನಮ್ಮ ಪೂರ್ವಿಕರ ಹಬ್ಬ. ಮಹಿಷನ ಪ್ರತಿಮೆಗೆ ಪುರ್ಷಾಚಣೆ ಮಾಡುತ್ತೇವೆ,'' ಎಂದಿದ್ದರು. ಇದೀಗ ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಎರಡು ಕಾರ್ಯಕ್ರಮವನ್ನು ಪೊಲೀಸ್ ಇಲಾಖೆ ಅನುಮತಿ ನಿರಾಕರಿಸಿದೆ.
"ಮಹಿಷ ದಸರಾ ಆಚರಣೆ ಅವಕಾಶ ನೀಡಲಾಗುವುದೋ ಇಲ್ಲವೋ ಎಂದು ಗಮನಿಸುತ್ತೇನೆ. ಅವಕಾಶ ನೀಡದೇ ಇದ್ದರೆ ಜಿಲ್ಲಾಡಳಿತಕ್ಕೆ ಧನ್ಯವಾದ ಸಲ್ಲಿಸುತ್ತೇನೆ. ಒಂದು ವೇಳೆ ಮಹಿಷ ದಸರಾ ನಡೆಸಿದರೆ ದಸರಾ ಉದ್ಘಾಟನೆಯ ಕಾರ್ಯಕ್ರಮದಲ್ಲಿ ಪ್ರತಿಭಟನೆ ನಡೆಸಲಾಗುವುದು,'' ಎಂದು ಸಂಸದ ಪ್ರತಾಪಸಿಂಹ ತಿಳಿಸಿದ್ದಾರೆ.

ಮಹಿಷ ದಸರಾ ಆಚರಣೆ ವಿರೋಧಿಸಿ ಮೈಸೂರಿನ 8ನೇ ಹೆಚ್ಚುವರಿ ನ್ಯಾಯಾಲಯಕ್ಕೆ ಸ್ನೇಹಮಹಿ ಕೃಷ್ಣ ಎಂಬುವರು ಅರ್ಜಿ ಸಲ್ಲಿಸಿದ್ದಾರೆ. ವಿಚಾರಣೆ ನಡೆಸಿದ ನ್ಯಾಯಾಲಯ ಮಹಿಷ ದಸರಾ ಆಚರಣಾ ಸಮಿತಿ ಅಧ್ಯಕ್ಷರಿಗೆ ನೋಟಿಸ್ ಜಾರಿ ಮಾಡಿದ್ದು, ಅಕ್ಟೋಬರ್ 11ಕ್ಕೆ ಅರ್ಜಿ ವಿಚಾರಣೆ ನಿಗದಿಪಡಿಸಿದೆ.
ಮಹಿಷ ದಸರಾ ಆಚರಣೆಗೆ ನಾನಾ ಸಂಘಟನೆಗಳಿ ಬೆಂಬಲ ವ್ಯಕ್ತಪಡಿಸಿದರ ನಡುವೆ, ಬಿಜೆಪಿ ಕಾರ್ಯಕರ್ತರು, ನಗರದ ಕೆಲ ವಾರ್ಡ್‌ಗಳಲ್ಲಿ ಸಭೆ ನಡೆಸಿ ಮಹಿಷ ದಸರಾ ಆಚರಣೆಗೆ ವಿರೋಧ ವ್ಯಕ್ತಪಡಿಸುವುದರೊಂದಿಗೆ ಚಲೋ- ಚಾಮುಂಡಿ ಬೆಟ್ಟ ಕಾರ್ಯಕ್ರಮಕ್ಕೆ ಆಗಮಿಸುವಂತೆ ಸಾರ್ವಜನಿಕರನ್ನು ಮನವಿ ಮಾಡಿದ್ದರು.
ಏನಿದು ವಿವಾದ..?
2015 ರಿಂದ ದಲಿತ ಪರ ಸಂಘಟನೆಗಳು, ಪ್ರಗತಿಪರರು ಮೈಸೂರಿನಲ್ಲಿ ಮಹಿಷಾ ದಸರಾ ಆಚರಿಸಿಕೊಂಡು ಬರುತ್ತಿದ್ದಾರೆ. ಆದರೆ, ಬಿಜೆಪಿ ಸರ್ಕಾರ ಬಂದ ಮೇಲೆ ಮಹಿಷಾ ದಸರಾಕ್ಕೆ ಅವಕಾಶ ಸಿಕ್ಕಿರಲಿಲ್ಲ. ಇದೀಗ ನೂತನ ಸರ್ಕಾರ ಬಂದ ಮೇಲೆ ಮತ್ತೆ ಮಹಿಷಾ ದಸರಾ ಆಚರಣೆ ಮುನ್ನಲೆಗೆ ಬಂದಿದೆ.
ಇತ್ತ ಸಂಸದ ಪ್ರತಾಪಸಿಂಹ ಸೇರಿದಂತೆ ಇತರರು ಮಹಿಷಾ ದಸರಾ ಆಚರಣೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಸಂಘರ್ಷವಾದರೂ ನಾವು ಮಹಿಷ ದಸರಾ ನಡೆಯಲು ಬಿಡುವುದಿಲ್ಲ ಎಂದು ಸವಾಲು ಹಾಕಿದ್ದಾರೆ. ಇತ್ತ ಮಹಿಷ ಸಮಿತಿಯವರು ಇದು ದಸರಾ ಆಗಲಿ ಅಥವಾ ಚಾಮುಂಡೇಶ್ವರಿ ಗಾಗಲಿ ವಿರೋಧಿ ಮಾಡುತ್ತಿರುವುದ್ದಲ್ಲ. ಕೇವಲ ಮಹಿಷಾ ಪ್ರತಿಮೆಗೆ ಪುಷ್ಪಾರ್ಚನೆ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದೆ.
ಪೋಸ್ಟರ್ ಬಿಡುಗಡೆ
2015ರಲ್ಲಿ ಆರಂಭವಾದ ಮಹಿಷ ದಸರಾ ಆಚರಣೆಗೆ ದಿಢೀರ್ 50 ವರ್ಷದ ಇತಿಹಾಸ ಸೃಷ್ಟಿಯಾಗಿದೆ. ಈ ಬಾರಿ 50ನೇ ವರ್ಷದ ಮಹಿಷ ದಸರಾ ಆಚರಣೆ ನಡೆಸಲಾಗುತ್ತಿದೆ ಎಂದು ಮಹಿಷ ದಸರಾ ಆಚರಣೆ ಸಮಿತಿಯಿಂದ ಪೋಸ್ಟರ್ ಬಿಡುಗಡೆ ಮಾಡಲಾಗಿತ್ತು. ಅ.13ರಂದು ಮಹಿಷ ದಸರಾ ಆಚರಣೆ ಸಮಿತಿ ಹಾಗೂ ಮೈಸೂರು ವಿಶ್ವವಿದ್ಯಾಲಯ ಸಂಶೋಧಕರ ಸಂಘ ಮಹಿಷ ದಸರಾ ಆಚರಿಸಲು ನಿರ್ಧರಿಸಿತ್ತು. ಆಹ್ವಾನ ಪತ್ರಿಕೆಯನ್ನೂ ಬಿಡುಗಡೆ ಮಾಡಲಾಗಿದ್ದು, ಅದರಲ್ಲಿ ಚಾಮುಂಡಿ ಬೆಟ್ಟಕ್ಕೆ ಮಹಿಷ ಬೆಟ್ಟ ಅಂತಾ ನಮೂದು ಮಾಡಲಾಗಿದೆ. ಹಾಗಾಗಿ ಈ ಬಾರಿ ಮಹಿಷಾ ದಸರಾ ವಿವಾದದ ಸ್ವರೂಪ ಪಡೆದುಕೊಂಡಿತ್ತು.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications