ಮೈಸೂರು : ಮತ್ತೆ ಬ್ಯೂಟಿ ಪಾರ್ಲರ್ ಮೇಲೆ ದಾಳಿ, ಯುವತಿಯರ ರಕ್ಷಣೆ
ಮೈಸೂರು, ಜುಲೈ 29 : ಮೈಸೂರಿನಲ್ಲಿ ಬ್ಯೂಟಿ ಪಾರ್ಲರ್‌ಗಳ ಮೇಲೆ ಪೊಲೀಸರು ಮತ್ತೊಮ್ಮೆ ದಾಳಿ ಮಾಡಿದ್ದಾರೆ. ವೇಶ್ಯಾವಾಟಿಕೆ ನಡೆಯುತ್ತಿದ್ದ ಆರೋಪದ ಹಿನ್ನಲೆಯಲ್ಲಿ 2 ಬ್ಯೂಟಿ ಪಾರ್ಲರ್ ಮೇಲೆ ದಾಳಿ ನಡೆಸಲಾಗಿದೆ.
ಹೂಟಗಳ್ಳಿಯ ಮುಖ್ಯ ರಸ್ತೆಯಲ್ಲಿರುವ ಪಾರ್ಲರ್ ಮೇಲೆ ದಾಳಿ ನಡೆಸಿದ ಪೊಲೀಸರು ನಾಲ್ವರು ಯುತಿಯರನ್ನು ರಕ್ಷಣೆ ಮಾಡಿದ್ದು, ಇಬ್ಬರು ಪುರುಷರನ್ನು ಬಂಧಿಸಿದ್ದಾರೆ. ವಿಜಯನಗರ ವಾಟರ್ ಟ್ಯಾಂಕ್ ಬಳಿಯ ಚಂದನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ ಮಾಡಿದ್ದು ಮೂವರು ಯುವತಿಯರನ್ನು ರಕ್ಷಣೆ ಮಾಡಲಾಗಿದೆ.
ಯುವತಿಯರನ್ನಿಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಹೇಮಾವತಿ ಎನ್ನುವವರು ಯುವತಿರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದರು. ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ.

ಒಟ್ಟು ಎರಡು ಕಡೆ ದಾಳಿಯಿಂದ ಏಳು ಯುವತಿಯರನ್ನು ರಕ್ಷಣೆ ಮಾಡಲಾಗಿದ್ದು, ಇಬ್ಬರು ಪುರುಷರನ್ನು ವಶಕ್ಕೆ ಪಡೆಯಲಾಗಿದೆ. ಪಾರ್ಲರ್ ಓನರ್ ಹೇಮಾವತಿ ಹಾಗೂ ಸಿದ್ದು ಎಂಬಾತನನ್ನ ಪೊಲೀಸರು ಬಂಧಿಸಿದ್ದಾರೆ.
ಒಡನಾಡಿ ಸಂಸ್ಥೆಯು ನೀಡಿದ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದೆ. ಕಳೆದ ಕೆಲ ದಿನಗಳ ಹಿಂದೆಯಷ್ಟೇ ನಗರದ ಹೃದಯ ಭಾಗದ ಯೋಗ ಸೆಂಟರ್ ಮೇಲೆ ದಾಳಿ ಮಾಡಲಾಗಿತ್ತು.
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಎಗ್ಗಿಲ್ಲಿದೆ ನಡೆಯುತ್ತಿದೆಯೇ ಅಕ್ರಮ ದಂಧೆ? ಎಂದು ಸಾರ್ವಜನಿಕರು ಮೂಗು ಮುರಿಯುತ್ತಿದ್ದಾರೆ. ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.












Click it and Unblock the Notifications