ಕಳುವಾದ ಚಿನ್ನ ಪತ್ತೆಗೆ ಮನೆ ಕೆಲಸದಾಕೆಗೆ ಪೊಲೀಸರ ಹಿಂಸೆ; ಆರೋಪ
ಮೈಸೂರು, ಫೆಬ್ರವರಿ 12: ಮನೆಯೊಂದರಿಂದ ಕಳುವಾಗಿದ್ದ ಚಿನ್ನವನ್ನು ಪತ್ತೆ ಹಚ್ಚಲು ಪೊಲೀಸರು ಮನೆ ಕೆಲಸದಾಕೆಗೆ ಹಿಂಸೆ ನೀಡಿದ ಕುರಿತು ವರದಿಯಾಗಿದೆ.
ಮೈಸೂರು ನಗರದ ಹಿನಕಲ್‌ನ ಸೌಪರ್ಣಿಕಾ ಅಪಾರ್ಟ್‌ಮೆಂಟ್‌ನಲ್ಲಿ ಲಕ್ಷ್ಮಿ ಕೆಲಸ ಮಾಡುತ್ತಿದ್ದಳು. ಹದಿನೈದು ದಿನಗಳ ಹಿಂದೆ ಮನೆ ಮಾಲೀಕ ಸುನಿತಾ ಕೃಷ್ಣಪ್ಪ ಮನೆಯಲ್ಲಿ ಕಾರ್ಯಕ್ರಮ ನಡೆದಿತ್ತು. ಆ ವೇಳೆ ಆಭರಣ ಧರಿಸಿ ನಂತರ ಕಬೋರ್ಡ್‌ನಲ್ಲಿ ಇಟ್ಟಿದ್ದರು. ಅಲ್ಲಿದ್ದ 75 ಗ್ರಾಂ ಚಿನ್ನ ಕಾಣೆಯಾದ ಹಿನ್ನೆಲೆ ವಿಜಯನಗರ ಪೊಲೀಸರಿಗೆ ದೂರು ನೀಡಲಾಗಿತ್ತು.
ಚಿನ್ನ ಪತ್ತೆ ಮಾಡಲು ವಿಚಾರಣೆಗೆಂದು ಲಕ್ಷ್ಮಿಯನ್ನು ವಿಜಯನಗರ ಪೊಲೀಸ್ ಠಾಣೆಗೆ ಕರೆಸಿಕೊಂಡ ಪೊಲೀಸರು, ದೈಹಿಕ ಹಲ್ಲೆ ಮಾಡಿದ್ದಾರೆಂದು ಲಕ್ಷ್ಮಿ ಆಪಾದಿಸಿದ್ದಾಳೆ. ""ನನ್ನ ಮೇಲೆ ಹಲ್ಲೆ ನಡೆಸಿದ ನಂತರ ಪೊಲೀಸರು ಈಗ ಮನೆಗೆ ಕಳುಹಿಸಿದ್ದಾರೆ. ಕೂಡಲೇ ಚಿನ್ನ ಮತ್ತು ಒಡವೆ ನೀಡುವಂತೆ ಪೊಲೀಸರು ತಾಕೀತು ಮಾಡಿದ್ದಾರೆ'' ಎಂದಿದ್ದಾರೆ.

""ಪೊಲೀಸರು ಠಾಣೆಯಲ್ಲಿ ಮೈ ಕೈ ಬಾಸುಂಡೆ ಬರುವಂತೆ ಹೊಡೆದಿದ್ದಾರೆ. ಪುರುಷ ಪೊಲೀಸರು ಥಳಿಸಿರೆಂದೂ ಸಂತ್ರಸ್ಥೆ ಆರೋಪಿಸಿದ್ದಾಳೆ. ಲಾಠಿಯಿಂದ ಹೊಡೆದು, ಶೂ ಕಾಲಲ್ಲಿ ಪೊಲೀಸರು ಒದ್ದಿದ್ದಾರೆ. ವಿಜಯನಗರ ಪೊಲೀಸರ ವಿರುದ್ಧ ಲಕ್ಷ್ಮಿ ಆರೋಪ ಮಾಡಿದ್ದಾಳೆ.
ವಿಚಾರಣೆ ಹೆಸರಿನಲ್ಲಿ ಪೊಲೀಸರು ದೈಹಿಕ ಹಲ್ಲೆ ಮಾಡಿದ್ದಾರೆಂದು ಲಕ್ಷ್ಮಿ ಆಪಾದಿಸಿದ್ದು, ಈಗ 5 ಗ್ರಾಂ ಚಿನ್ನ ಅಥವಾ 3,80,000 ಹಣ ಕೊಡುವಂತೆ ತಾಕೀತು ಮಾಡಿ ಕಳುಹಿಸಿದ್ದಾರೆ. ಅಷ್ಟೊಂದು ಹಣ ಎಲ್ಲಿಂದ ತರಲಿ ಎಂದು ಲಕ್ಷ್ಮಿ ಕಣ್ಣೀರು ಹಾಕುತ್ತಿದ್ದಾಳೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು












Click it and Unblock the Notifications