• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಚಾಮುಂಡಿಗೆ ವಿಶೇಷ ಪೂಜೆ ಸಲ್ಲಿಸುತ್ತಿರುವ ಚುನಾವಣಾ ಕಣದ ಹುರಿಯಾಳುಗಳು

|

ಮೈಸೂರು, ಮಾರ್ಚ್ 25:ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಮಂಡ್ಯ ಕ್ಷೇತ್ರದಿಂದ ಇಂದು ನಿಖಿಲ್ ಸ್ಪರ್ಧಿಸುತ್ತಿದ್ದು, ನಾಮಪತ್ರ ಸಲ್ಲಿಸಲಿದ್ದಾರೆ. ಈ ಹಿನ್ನಲೆಯಲ್ಲಿ ಮಗನ ಗೆಲುವಿಗಾಗಿ ಸಿಎಂ ಕುಮಾರಸ್ವಾಮಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಲಿದ್ದಾರೆ.

ಇಂದು ಚಾಮುಂಡಿ ಬೆಟ್ಟಕ್ಕೆ ತೆರಳಲಿರುವ ಸಿಎಂ ಕುಮಾರಸ್ವಾಮಿ, ಚಾಮುಂಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿ ಮಗನ ಗೆಲುವಿಗಾಗಿ ಪ್ರಾರ್ಥಿಸಲಿದ್ದಾರೆ. ನಂತರ ಮಂಡ್ಯಕ್ಕೆ ತೆರಳಿ ಮೆರವಣಿಗೆ ಮೂಲಕ ಮಂಡ್ಯ ಚುನಾವಣಾಧಿಕಾರಿಗೆ ಕಚೇರಿಗೆ ತೆರಳಲಿದ್ದಾರೆ. ಇದೇ ಸಂದರ್ಭದಲ್ಲಿ ಕುಟುಂಬದ ಸದಸ್ಯರು, ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗಿಯಾಗಲಿದ್ದಾರೆ.

ಲೋಕಸಮರ LIVE: ತುಮಕೂರಿನಲ್ಲಿಂದು ದೇವೇಗೌಡರಿಂದ ನಾಮಪತ್ರ ಸಲ್ಲಿಕೆ

ಇನ್ನು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾಕರಂದ್ಲಾಜೆ ಭಾನುವಾರ ಮೈಸೂರಿಗೆ ಆಗಮಿಸಿ ಚಾಮುಂಡೇಶ್ವರಿ ತಾಯಿ ದರ್ಶನ ಪಡೆದರು. ಅಲ್ಲದೇ ತಾಯಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.

ಕರ್ನಾಟಕ ಲೋಕಸಭಾ ಕ್ಷೇತ್ರಗಳ 'ಎ ಟು ಜೆಡ್' ಮಾಹಿತಿ

ಇದೇ ಸಂದರ್ಭದಲ್ಲಿ ಚಾಮರಾಜ ಕ್ಷೇತ್ರದ ಶಾಸಕ ಎಲ್,ನಾಗೇಂದ್ರ, ಎಚ್.ವಿ.ರಾಜೀವ್, ಸಂದೇಶ್ ಸ್ವಾಮಿ ಸೇರಿದಂತೆ ಮತ್ತಿತರ ಬಿಜೆಪಿ ಕಾರ್ಯಕರ್ತರು ಹಾಜರಿದ್ದರು.

English summary
CM Kumaraswamy will visit Chamundi hills for special pooja on the reason of Nikhil Kumarswamy nomination.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X