ಭಾರತ್ ಬಂದ್ ಗೆ ಮೈಸೂರು ಅಂಚೆ ನೌಕರರ ಸಹಮತ

ಮೈಸೂರು, ಜನವರಿ 7: ಕೇಂದ್ರ ಕಾರ್ಮಿಕ ಸಂಘಟನೆ ಕರೆ ನೀಡಿರುವ ರಾಷ್ಟ್ರವ್ಯಾಪಿ ಬಂದ್ ಗೆ ಮೈಸೂರು ವಿಭಾಗದ ಅಂಚೆ ನೌಕರರ ಜಂಟಿ ಕ್ರಿಯಾ ಸಮಿತಿ ಬೆಂಬಲಿಸಿ ಪಾಲ್ಗೊಳ್ಳಲಿದೆ. ಇದರಿಂದ ಎರಡು ದಿನಗಳ ಕಾಲ ಅಂಚೆ ಕಚೇರಿಗಳು ಕಾರ್ಯ ನಿರ್ವಹಿಸುವುದಿಲ್ಲ ಎಂದು ವಿಭಾಗದ ಕಾರ್ಯದರ್ಶಿ ಸುಂದರಯ್ಯ ತಿಳಿಸಿದರು.

ನಾಳೆ ( ಜ. 7 ) ಹಾಗೂ ನಾಡಿದ್ದು (ಜ.9) ನಡೆಯುವ ಪ್ರತಿಭಟನೆಗೆ ಅಖಿಲ ಭಾರತ ಅಂಚೆ ನೌಕರರ ಸಂಘ, ರಾಷ್ಟ್ರೀಯ ಅಂಚೆ ನೌಕರರ ಸಂಘವೂ ಬೆಂಬಲಿಸಿದ್ದು, ಈ ನಿಟ್ಟಿನಲ್ಲಿ ನಾಳೆ ಲಷ್ಕರ್ ಮೊಹಲ್ಲಾದಲ್ಲಿರುವ ಪ್ರಧಾನ ಅಂಚೆ ಕಚೇರಿ ಬಳಿ ಪ್ರತಿಭಟನೆ ನಡೆಸಿ ಅಲ್ಲಿಂದ ಪುರಭವನದವರೆಗೆ ಮೆರವಣಿಗೆ ನಡೆಸಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮೈಸೂರು ವಿಭಾಗದಲ್ಲಿ 65 ಅಂಚೆ ಕಚೇರಿಗಳಿದ್ದು, 15 ಸಾವಿರಕ್ಕೂ ಅಧಿಕ ನೌಕರರು ಕಾರ್ಯನಿರ್ವಹಿಸುತ್ತಿದ್ದಾರೆ. ತಾವುಗಳು ಈ ಮುಷ್ಕರದಲ್ಲಿ ಪಾಲ್ಗೊಳ್ಳುವ ನಿಮಿತ್ತ ಕಚೇರಿ ಕಾರ್ಯವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಮನವಿ ಮಾಡಿದರು.

Postal employees supports to the Bharat Bandh

ಸಂಘದ ರಾಜ್ಯಾಧ್ಯಕ್ಷ ಧೀನಬಂದು ಮಾತನಾಡಿ, ಹಳೆ ಪಿಂಚಣಿ ನೀತಿ ಜಾರಿಯಾಗಬೇಕು. ಕಮಲೇಶ್ ಚಂದ್ರ ವರದಿಯ ಧನಾತ್ಮಕ ಅಂಶಗಳನ್ನು ಬಲಪಡಿಸಬೇಕು. ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಕಾಲಮಿತಿಯೊಳಗೆ ಭರ್ತಿಗೊಳಿಸಬೇಕು. ಸಿಎಸ್ಐ ಮತ್ತು ಆರ್ ಐ ಸಿಟಿಯಲ್ಲಿ ಆಗಿರುವ ಲೋಪಗಳನ್ನು ಸರಿಪಡಿಸಬೇಕು. ವಾರಕ್ಕೆ ಐದು ದಿನಗಳ ಕೆಲಸದ ಪದ್ಧತಿ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಈ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+