• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ನಾಡಹಬ್ಬಕ್ಕೆ ಕೆಲವೇ ದಿನ ಬಾಕಿ: ದಸರಾ ಮಹೋತ್ಸವದ ಭಿತ್ತಿಚಿತ್ರ ಬಿಡುಗಡೆ

|

ಮೈಸೂರು, ಸೆಪ್ಟೆಂಬರ್. 26 : ಅಕ್ಟೋಬರ್ 10 ರಿಂದ 19ರವರೆಗೆ ನಡೆಯಲಿರುವ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು ಬುಧವಾರ ಜಿಲ್ಲಾಧಿಕಾರಿ ಕಛೇರಿಯಲ್ಲಿ ವಿವಿಧ ಸಮಿತಿಗಳ ಭಿತ್ತಿಚಿತ್ರ ಬಿಡುಗಡೆ ಮಾಡಲಾಯಿತು.

ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ, ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ನೇತೃತ್ವದಲ್ಲಿ ಭಿತ್ತಿಚಿತ್ರಗಳನ್ನು ಬಿಡುಗಡೆ ಮಾಡಲಾಯಿತು. ನಂತರ ಮಾತನಾಡಿದ ಸಚಿವ ಜಿ.ಟಿ ದೇವೇಗೌಡ, ಸೆ.29, 30ರಂದು ಲಲಿತ ಮಹಲ್ ಹೆಲಿಪ್ಯಾಡ್ ಮೈದಾನದಲ್ಲಿ ಗಾಳಿಪಟ ಉತ್ಸವ, ಸೆ.30, ಅ.6ವರೆಗೆ ಯುವ ಸಂಭ್ರಮವನ್ನು ಮಾನಸ‌ ಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಆಯೋಜನೆ ಮಾಡಲಾಗಿದೆ ಎಂದು ತಿಳಿಸಿದರು.

ಹಿಂದೆಂದಿಗಿಂತಲೂ ರಂಗೇರಲಿದೆ ಯುವ ದಸರಾ: ಯಾರೆಲ್ಲಾ ಬರ್ತಾರೆ ಗೊತ್ತಾ?

ಜೊತೆಗೆ ಅ.11 ರಿಂದ 17 ರವರೆಗೆ ಯುವ ದಸರಾ‌ವನ್ನು ಮಹಾರಾಜ ಮೈದಾನದಲ್ಲಿ ಆಯೋಜಿಸಲಾಗಿದ್ದು, ಪ್ರವಾಸೋದ್ಯಮ ಇಲಾಖೆ ವತಿಯಿಂದ ನಡೆಯುವ ಈ ಕಾರ್ಯಕ್ರಮಕ್ಕೆ ಹಣ ಬಿಡುಗಡೆಯಾಗಿದೆ ಎಂಬ ಮಾಹಿತಿ ನೀಡಿದರು.

ದಸರೆಗೂ ಮುನ್ನ ಪ್ರಮೋದಾದೇವಿ ಒಡೆಯರ್ ಭೇಟಿ ಮಾಡಿದ ಮೈಸೂರಿನ ಉಭಯ ಸಚಿವರು

ಈ ಬಾರಿಯ ದಸರೆಗೆ ಸರ್ಕಾರ ಮುಂದಿನ ದಿನಗಳಲ್ಲಿ ಹಣ ಬಿಡುಗಡೆ ಮಾಡುತ್ತದೆ. ದಸರಾ ಹಿನ್ನೆಲೆ ರಸ್ತೆಗಳಿಗೆ ಡಾಂಬರ್ ಹಾಕುವ ವಿಚಾರಕ್ಕೆ ಸಂಬಂಧಿಸಿದಂತೆ ಆಯಾ ಇಲಾಖೆಗಳು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿವೆ.

ಈ ಬಾರಿ ದಸರಾಕ್ಕೆ ಐಷಾರಾಮಿ ಗೋಲ್ಡನ್ ಚಾರಿಯಟ್ ರೈಲು ಸೇವೆ ಲಭ್ಯವಿಲ್ಲ

ಸುಮಾರು 216 ಕೋಟಿಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಇನ್ನೆರಡು ದಿನದಲ್ಲಿ ಹಣ ಬಿಡುಗಡೆಯಾಗಲಿದ್ದು, ಕಳಪೆ ಕಾಮಗಾರಿ ಮಾಡುವಂತಿಲ್ಲ. ಕಳಪೆ ಕಾಮಗಾರಿ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

English summary
Countdown begins for Mysore Dasara Festival. Poster of various committees was released in the Deputy Commissioner's office on Wednesday. Posters were released under the supervision of Minister GT Deve Gowda, Tourism minister SA RA Mahesh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X