Power Cut: ಈ ಭಾಗಗಳಲ್ಲಿ ನವೆಂಬರ್ 8ರಂದು ಸಂಜೆ ಗಂಟೆವರೆಗೂ ಕರೆಂಟ್ ಕಟ್
Power Cut: ವಿದ್ಯುತ್‌ಗೆ ಸಂಬಂಧಿಸಿದ ಕಾಮಗಾರಿ ನಡೆಯುವ ಸ್ಥಳಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಮಾಡಲಾಗುತ್ತದೆ. ಹಾಗೆಯೇ ಇದೀಗ ನವೆಂಬರ್ 8ರಂದು ಮೈಸೂರಿನ ಈ ಭಾಗಗಳಲ್ಲಿ ಕರೆಂಟ್ ಕಟ್ ಆಗಲಿದೆ ಎಂದು ಚೆಸ್ಕಾಂ ಮಾಹಿತಿ ನೀಡಿದೆ. ಹಾಗಾದ್ರೆ, ಎಲ್ಲೆಲ್ಲಿ ಹಾಗೂ ಕಾರಣ ಏನು ಎಂದು ತಿಳಿಯಿರಿ.
ತುರ್ತುನಿರ್ವಹಣಾ ಕಾರ್ಯ ಕೈಗೊಳ್ಳುವ ಹಿನ್ನೆಲೆ ನವೆಂಬರ್ 8ರಂದು ಮೈಸೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ. ಹಾಗಾದ್ರೆ, ಎಲ್ಲೆಲ್ಲಿ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ತಿಳಿಯಿರಿ.

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (Chescom) ವತಿಯಿಂದ ನಗರದಲ್ಲಿ ವಿದ್ಯುತ್ ತುರ್ತುನಿರ್ವಹಣಾ ಕಾರ್ಯ ಕೈಗೊಳ್ಳುವ ಹಿನ್ನೆಲೆ ನವೆಂಬರ್ 8ರಂದು ಮೈಸೂರು ವಿ.ವಿ.ಮೊಹಲ್ಲಾ ಉಪವಿಭಾಗ ವ್ಯಾಪ್ತಿಯ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಚೆಸ್ಕಾಂ ತಿಳಿಸಿದೆ.
ವಿ.ವಿ.ಮೊಹಲ್ಲಾ ಉಪವಿಭಾಗದ 66/11 ಕೆ.ವಿ ಕಲಾಮಂದಿರ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ 11 ಕೆ.ವಿ ಪಡುವಾರಹಳ್ಳಿ ವಿದ್ಯುತ್ ಮಾರ್ಗದಲ್ಲಿ ಭೂಗತ ಕೇಬಲ್ ಅಳವಡಿಸುವ ಕಾರ್ಯ ನಡೆಯಲಿದೆ. ಈ ಹಿನ್ನೆಲೆ ಶನಿವಾರ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಚೆಸ್ಕಾಂ ಮಾಹಿತಿ ನೀಡಿದೆ.
ಪಡುವಾರಹಳ್ಳಿ, ಒಂಟಿಕೊಪ್ಪಲು, ವಾಲ್ಮೀಕಿರಸ್ತೆ, ಟೆಂಪಲ್‍ರಸ್ತೆ, ಆದಿಪಂಪಾ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಕಟ್ ಆಗಲಿದೆ. ಈ ಅವಧಿಯಲ್ಲಿ ಸಾರ್ವಜನಿಕರು ಸಹಕರಿಸಬೇಕು ಅಂತಲೂ ಮನವಿ ಮಾಡಿದೆ. ಭೂಗತ ಕೇಬಲ್ ಅಳವಡಿಸುವ ಕಾಮಗಾರಿಯು ನಗರದ ವಿದ್ಯುತ್ ಪೂರೈಕೆ ವ್ಯವಸ್ಥೆಯನ್ನು ಇನ್ನಷ್ಟು ಸುರಕ್ಷಿತ ಮತ್ತು ದೀರ್ಘಕಾಲಿಕಗೊಳಿಸುವ ಉದ್ದೇಶ ಹೊಂದಿದೆ. ಹಳೆಯ ವೈರ್ ಸಂಪರ್ಕಗಳಲ್ಲಿ ದೋಷಗಳು ಹಾಗೂ ಮಳೆಗಾಲದಲ್ಲಿ ಉಂಟಾಗುವ ತಾಂತ್ರಿಕ ಸಮಸ್ಯೆಗಳನ್ನು ನಿವಾರಣೆ ಮಾಡಲು ಇದು ಸಹಾಯಕ ಆಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಕಾಮಗಾರಿಯು ಸಮಯಕ್ಕೆ ಮುಂಚಿತವಾಗಿ ಪೂರ್ಣಗೊಂಡರೆ ನಿಗದಿತ ಸಮಯಕ್ಕಿಂತ ಮುಂಚಿತವಾಗಿ ವಿದ್ಯುತ್ ಅನ್ನು ಪುನಃಸ್ಥಾಪಿಸಲಾಗುವುದು ಎಂದು ಗ್ರಾಹಕರಿಗೆ ಭರವಸೆ ನೀಡಿದೆ. ಇತ್ತೀಚಿನ ತಿಂಗಳುಗಳಲ್ಲಿ, ವಿಶೇಷವಾಗಿ ವಾರಾಂತ್ಯಗಳಲ್ಲಿ ನಗರದಲ್ಲಿ ಆಗಾಗ ವಿದ್ಯುತ್ ಕಡಿತ ಆಗುತ್ತಲಿದೆ. ವಿದ್ಯುತ್ ಸಂಬಂಧಿತ ಕಾರ್ಯನಿರ್ವಹಣ ಕಾರ್ಯಗಳ ಹಿನ್ನೆಲೆ ವಿದ್ಯುತ್ ಪೂರೈಕೆಯಲ್ಲಿ ಕಡಿತವನ್ನು ಮಾಡಲಾಗುತ್ತಿದೆ ಎಂದು ತಿಳಿಸಿದೆ.
ಅಲ್ಲದೆ, ಯಾವ್ಯಾವ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಆಗಲಿದೆಯೋ ಅಂತಹ ಪ್ರದೇಶಗಳ ಜನರು ಮುಂಚಿತವಾಗಿ ಮೊಬೈಲ್, ಬ್ಯಾಟರಿ, ಲ್ಯಾಪಟ್ಯಾಪ್ ಸೇರಿದಂತೆ ಹಲವು ವಿದ್ಯುತ್ ಉಪಕರಣಗಳನ್ನು ಮುಂಜಾಗ್ರತಾ ಕ್ರಮವಾಗಿ ಮುಂಚಿತವಾಗಿ ಚಾರ್ಜ್ ಮಾಡಿಟ್ಟುಕೊಳ್ಳುವುದು ಉತ್ತಮ ಎಂದು ಸಲಹೆ ನೀಡಿದೆ.












Click it and Unblock the Notifications