Prahlad Modi : ಮೈಸೂರಿನಲ್ಲಿ ಭೀಕರ ಅಪಘಾತ: ಪ್ರಧಾನಿ ಸಹೋದರ ಪ್ರಹ್ಲಾದ್ ಮೋದಿ ಸ್ಥಿತಿ ಗಂಭೀರ
ಮೈಸೂರು, ಡಿಸೆಂಬರ್ 27: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಅವರ ಕಾರು ಮೈಸೂರಿನಲ್ಲಿ ಅಪಘಾತಕ್ಕೀಡಾಗಿದ್ದು, ಕಾರಿನಲ್ಲಿದ್ದವರು ಗಂಭೀರ ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಘಟನೆಯಲ್ಲಿ ಪ್ರಹ್ಲಾದ್ ಮೋದಿ, ಅವರ ಪುತ್ರ ಹಾಗೂ ಸೊಸೆ ಗಂಭೀರವಾಗಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಬೆಂಗಳೂರಿನಿಂದ ಬಂಡೀಪುರಕ್ಕೆ ತೆರಳುವಾಗ ಮೈಸೂರಿನ ಕಡಕೋಡ ಸಮೀಪ ಪ್ರಹ್ಲಾದ್ ಮೋದಿ ಅವರ ಬೆಂಜ್ ಕಾರು ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ. ಘಟನಾ ಸ್ಥಳಕ್ಕೆ ಮೈಸೂರು ಎಸ್‌ಪಿ ಸೇರಿದಂತೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ್ದ ಮೈಸೂರು ಎಸ್‌ಪಿ ಸೀಮಾ ಲಾಟ್ಕರ್, ಗಾಯಾಳುಗಳನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ರವಾನಿಸಿ, ಮುಖ್ಯಮಂತ್ರಿ ಕಾರ್ಯಾಲಯಕ್ಕೆ ಮಾಹಿತಿ ನೀಡಿದ್ದಾರೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.
ಪ್ರಹ್ಲಾದ್ ಮೋದಿ ಅವರ ಕಾರು ಅಪಘಾತದ ಬಗ್ಗೆ ಸಂಸದ ಪ್ರತಾಪ್ ಸಿಂಹ ಮಾಹಿತಿ ನೀಡಿದ್ದು, 'ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಅವರ ಕಾರು ಅಪಘಾತ ಮೈಸೂರಿನ ಕಡಕೊಳದ ಬಳಿ ಅಪಘಾತಕ್ಕೀಡಾಗಿದೆ. ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪ್ರಹ್ಲಾದ್ ಮೋದಿ ಅವರ ಮೊಮ್ಮಗನ ಎಡಗಾಲು ಮುರಿದಿದೆ. ಯಾರು ಭಯಪಡುವ ಅಗತ್ಯ ಇಲ್ಲ' ಎಂದಿದ್ದಾರೆ.












Click it and Unblock the Notifications