ಪ್ರಜ್ವಲ್‌ರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯನ್ನು ಅಪಹರಣ ಮಾಡಿಸಿದರೇ ರೇವಣ್ಣ? ದಾಖಲಾದ ದೂರಿನಲ್ಲೇನಿದೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ ಇದೀಗ ಮೈಸೂರಿಗೂ ವ್ಯಾಪಿಸಿದೆ. ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಆರೋಪವಿರುವ ಮಹಿಳೆ ಅಪಹರಣ ಮಾಡಲಾಗಿದೆ ಎಂದು ಆರೋಪಿಸಿ ಸ್ವತಃ ಮಹಿಳೆಯ ಪುತ್ರ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪ್ರಜ್ವಲ್ ರೇವಣ್ಣ ಪ್ರಕರಣ ಸಂಬಂಧ ಈಗಾಗಲೇ ಮಾಜಿ ಸಚಿವ, ಹೊಳೆನರಸೀಪುರ ಶಾಸಕ ಎಚ್.ಡಿ.ರೇವಣ್ಣ ವಿರುದ್ಧ ಎರಡು ಪ್ರಕರಣ ದಾಖಲಾಗಿದೆ. ಜೊತೆಗೆ ಎಚ್.ಡಿ.ರೇವಣ್ಣ ಅವರು ನಿರೀಕ್ಷಣಾ ಜಮೀನು ಪಡೆದುಕೊಳ್ಳಲು ಕೋರ್ಟ್ ಮೊರೆ ಹೋಗಿದ್ದಾರೆ. ಈ ನಡುವೆ ತನ್ನ ತಾಯಿ ಅಪಹರಣವಾಗಿದೆ ಎಂದು ಪುತ್ರನೊಬ್ಬ ಆರೋಪಿಸಿ ದೂರು ದಾಖಲಿಸಿದ್ದಾನೆ.

Prajwal Revanna Case Alleged Victim Abducted Son Files Complaint in Mysuru

ದೂರಿನಲ್ಲಿ ಏನಿದೆ?

ಕೆ.ಆರ್.ನಗರ ತಾಲೂಕಿನ ಮಹಿಳೆ ಅಪಹರಣಕ್ಕೆ ಒಳಗಾಗಿದ್ದಾರೆ ಎಂದು ಆರೋಪಿಸಿದ್ದು, ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಫೋಟೋಗಳು ಬಹಿರಂಗ ಆದ ಬಳಿಕ ನನ್ನ ತಾಯಿ ನಾಪತ್ತೆ ಆಗಿದ್ದಾರೆ ಎಂದು ಪುತ್ರ ದೂರಿದ್ದಾರೆ.

ಏಪ್ರಿಲ್ 29 ರಂದು ಘಟನೆ ನಡೆದಿದೆ ಎಂದು ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ಯಲ್ಲಿ ಹೇಳಲಾಗಿದೆ. ಮಹಿಳೆ ಈ ಹಿಂದೆ ಹೊಳೆನರಸೀಪುರದಲ್ಲಿರುವ ರೇವಣ್ಣ ಅವರ ನಿವಾಸ ಮತ್ತು ಫಾರ್ಮ್‌ಹೌಸ್‌ನಲ್ಲಿ ಆರು ವರ್ಷಗಳ ಕಾಲ ಕೆಲಸ ಮಾಡಿದ್ದರು. ಮೂರು ವರ್ಷಗಳ ಹಿಂದೆ, ಕೆಲಸ ಮಾಡುವುದನ್ನು ಬಿಟ್ಟು ಮನೆಗೆ ಮರಳಿದ್ದರು ಎಂದು ದೂರಿನಲ್ಲಿ ದಾಖಲಿಸಲಾಗಿದೆ.

ಶಾಸಕ ಎಚ್.ಡಿ.ರೇವಣ್ಣ, ಪತ್ನಿ ಭವಾನಿ ರೇವಣ್ಣ ಸೂಚನೆ ಮೇರೆಗೆ ಸತೀಶ್ ಬಾಬು ಎಂಬುವರು ಕರದೊಯ್ದಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.ಎಫ್‌ಐಆರ್ ಪ್ರಕಾರ, ಬಾಬಣ್ಣ ಅವರು ತಮ್ಮ ನಿವಾಸಕ್ಕೆ ಭೇಟಿ ನೀಡಿ ಪೊಲೀಸರೊಂದಿಗೆ ಮಾತನಾಡಬೇಡಿ ಎಂದು ಕುಟುಂಬದವರಿಗೆ ಹೇಳಿದ್ದಾರೆ ಎಂದು ದೂರಿನಲ್ಲಿ ದಾಖಲಾಗಿದೆ.

ಏಪ್ರಿಲ್ 29 ರಂದು ಬೆಳಿಗ್ಗೆ 9 ಗಂಟೆ ಸುಮಾರಿಗೆ ಬಾಬಣ್ಣ ಅವರು ಮನೆಯವರ ಬಳಿಗೆ ಬಂದರು, ಮಹಿಳೆ ಪೊಲೀಸರಿಗೆ ಸಿಕ್ಕಿಬಿದ್ದರೆ ಪ್ರಕರಣ ಎದುರಿಸಬೇಕಾಗುತ್ತದೆ ಎಂದು ಹೇಳಿದ್ದು, ರೇವಣ್ಣ ತನಗೆ ಕರೆ ಮಾಡಿದ್ದಾರೆ ಎಂದು ತಿಳಿಸಿ ಅವರ ಜೊತೆ ಕರೆದೊಯ್ದರು ಎಂದು ಮಹಿಳೆಯ ಮಗ ಎಫ್‌ಐಆರ್‌ನಲ್ಲಿ ತಿಳಿಸಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಮಹಿಳೆಯ ಪತ್ತೆಗೆ ಮುಂದಾಗಿದ್ದಾರೆ.

ಈಗಾಗಲೇ ಪ್ರಜ್ವಲ್ ರೇವಣ್ಣ ಹಾಗೂ ಎಚ್.ಡಿ.ರೇವಣ್ಣ ವಿರುದ್ದ ಎರಡು ಪ್ರಕರಣ ದಾಖಲಾಗಿದೆ. ಇದೀಗ ಮತ್ತೊಂದು ಪ್ರಕರಣ ದಾಖಲಾಗಿರುವುದು ಮತ್ತಷ್ಟು ಸಂಕಷ್ಟವನ್ನು ತಂದೊಡ್ಡುವ ಸಾಧ್ಯತೆ ಇದೆ.

ಎಸ್‌ಐಟಿ ತಂಡ ತನಿಖೆ ಬಳಿಕ ಮತ್ತಷ್ಟು ಆಘಾತಕಾರಿ ವಿಚಾರಗಳು ಬಹಿರಂಗವಾಗುವ ಸಾಧ್ಯತೆ ಕೂಡ ಇದೆ ಎನ್ನಲಾಗಿದೆ. ಆರೋಪಗಳ ನಡುವೆ ಪ್ರಜ್ವಲ್ ರೇವಣ್ಣ ಜರ್ಮನಿಗೆ ತೆರಳಿದ್ದು, ಎಸ್‌ಐಟಿ ಲುಕೌಟ್ ನೋಟಿಸ್ ಜಾರಿ ಮಾಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+