ಪ್ರಮೋದಾದೇವಿ ಒಡೆಯರ್ ಅವರ ತಾಯಿ ವಿಧಿವಶ
ಬೆಂಗಳೂರು, ಅಕ್ಟೋಬರ್ 19:ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರ ತಾಯಿ ಪುಟ್ಟ ಚಿನ್ನಮ್ಮಣ್ಣಿ (98) ಅವರು ವಿಜಯದಶಮಿದಿನವಾದ ಇಂದು ನಿಧನರಾಗಿದ್ದಾರೆ.
ಮೈಸೂರಿನ ಶಾಂತವೇರಿ ಗೋಪಾಲಗೌಡ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಚಿನ್ನಮ್ಮಣ್ಣಿ ಅವರ ನಿಧನದಿಂದಾಗಿ ಖಾಸಗಿ ದರ್ಬಾರ್ ಸಂಭ್ರಮದ ಮೇಲೆ ಸೂತಕದ ನೆರಳು ಬಿದ್ದಿದೆ.

ಜಯಚಾಮರಾಜೇಂದ್ರ ಒಡೆಯರ್ ಅವರ ಕೊನೆಯ ಪುತ್ರಿ ಅನಾರೋಗ್ಯ ಪೀಡಿತರಾಗಿದ್ದಾರೆ, ಬೆಂಗಳೂರಿನಲ್ಲಿ ವಿಜಯಲಕ್ಷ್ಮಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ವಿಜಯಲಕ್ಷ್ಮಿ ಅವರ ಆರೋಗ್ಯ ವಿಚಾರಿಸಲು ಪ್ರಮೋದಾ ದೇವಿ ಅವರು ಗುರುವಾರದಂದು ಬೆಂಗಳೂರಿಗೆ ಬಂದಿದ್ದರು. ಹೀಗಾಗಿ, ಅಯುಧ ಪೂಜೆ ಕೈಂಕರ್ಯಗಳಲ್ಲಿ ಪಾಲ್ಗೊಂಡಿರಲಿಲ್ಲ.
ಆದರೆ, ಯದುವೀರ್ ಶ್ರೀಕಂಠದತ್ತ ಒಡೆಯರ್ ಅವರು ತಮ್ಮ ಖಾಸಗಿ ದರ್ಬಾರ್, ಪೂಜೆ ಪುನಸ್ಕಾರ ಮುಂದುವರೆಸಿದ್ದರು. ಆದರೆ, ಈಗ ಅಜ್ಜಿಯನ್ನು ಕಳೆದುಕೊಂಡಿರುವ ಯದುವೀರ್ ಅವರು ತಮ್ಮ ಕಂಕಣ ಕಳಚಿ, ಬೇರೊಂದು ದಿನ ದಶಮಿ ಪೂಜೆ ಮಾಡುವರೇ ಅಥವಾ ಇಂದೇ ತಡವಾಗಿ ಪೂಜೆ ಪೂರೈಸುವರೇ ಕಾದು ನೋಡಬೇಕಿದೆ.
ಮೈಸೂರಿನ ಜಂಬೂಸವಾರಿಗೆ ಅಡ್ಡಿಯಿಲ್ಲ: ಮೈಸೂರಿನ ಇತಿಹಾಸ ಪ್ರಸಿದ್ಧ ಜಂಬೂ ಸವಾರಿ ಉತ್ಸವ ಇಂದು ಮಧ್ಯಾಹ್ನ 2.30ಕ್ಕೆ ಆರಂಭವಾಗಲಿದ್ದು, ಬೆಳಗ್ಗೆ ಮುಖ್ಯಮಂತ್ರಿಗಳು ನಂದಿಧ್ವಜ ಪೂಜೆ ಸಲ್ಲಿಸಲಿದ್ದಾರೆ. ಇದು ಸರ್ಕಾರದ ಆಯೋಜನೆಯ ಉತ್ಸವವಾಗಿದ್ದು, ಈ ಆಚರಣೆಗೆ ಯಾವುದೇ ಅಡ್ಡಿ ಇರುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications