ಪಾರಂಪರಿಕ ಕಟ್ಟಡಗಳ ಬಗ್ಗೆ ಪ್ರಮೋದಾದೇವಿ ಒಡೆಯರ್ ಹೇಳಿದ್ದೇನು?
ಮೈಸೂರು, ಜನವರಿ 9: ಮೈಸೂರು ಮಹಾನಗರ ಪಾಲಿಕೆ ಮಹಾಪೌರರಾದ ಪುಷ್ಪಲತಾ ಜಗನ್ನಾಥ್ ನೇತೃತ್ವದ ನಿಯೋಗ ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಅವರನ್ನು ಭೇಟಿ ಮಾಡಿ ಸ್ವಚ್ಛ ಸರ್ವೇಕ್ಷಣೆಗೆ ಸಹಕರಿಸುವಂತೆ ಮನವಿ ಮಾಡಿದರು.
ಪಾರಂಪರಿಕ ಕಟ್ಟಡಗಳನ್ನು ಉಳಿಸಿಕೊಳ್ಳುವ ಸಂಬಂಧ ಮಹಾಪೌರರ ಜತೆ ಚರ್ಚಿಸಿದ ಪ್ರಮೋದಾ ದೇವಿ ಅವರು, ಪಾರಂಪರಿಕ ನಗರದಲ್ಲಿ ಪಾರಂಪರಿಕ ಕಟ್ಟಡಗಳು ಇಲ್ಲ ಅಂದರೆ ಹೇಗೆ? ಮೈಸೂರಿನಲ್ಲಿ ಲ್ಯಾನ್ಸ್ ಡೌನ್ ಬಿಲ್ಡಿಂಗ್, ದೇವರಾಜ ಮಾರುಕಟ್ಟೆ ಸೇರಿದಂತೆ ಹಲವು ಪಾರಂಪರಿಕ ಕಟ್ಟಡಗಳಿವೆ. ಅವುಗಳನ್ನು ಉಳಿಸಿಕೊಳ್ಳಲು ಸರ್ಕಾರ ಹಾಗೂ ಪಾಲಿಕೆ ಮುಂದಾಗಲಿ ಎಂದರು.

ಇದೇ ವೇಳೆ ಮಹಾಪೌರರಾದ ಪುಷ್ಪಲತಾ ಜಗನ್ನಾಥ್ ಮಾತನಾಡಿ, ಮೈಸೂರಿನಲ್ಲಿರುವ ಎಲ್ಲಾ ಪಾರಂಪರಿಕ ಕಟ್ಟಡಗಳನ್ನು ಉಳಿಸಿಕೊಳ್ಳುವ ಸಂಬಂಧ ಕೌನ್ಸಿಲ್ ಸಭೆಯಲ್ಲಿ ಚರ್ಚೆ ಮಾಡಲಾ ಗುವುದು. ಕಟ್ಟಡಗಳ ಉಳಿವಿಗಾಗಿ ನಗರಪಾಲಿಕೆ ಸದಾ ಸಿದ್ಧವಿದೆ ಎಂದು ಭರವಸೆ ನೀಡಿದರು.
ಈ ಬಾರಿ ಸ್ವಚ್ಛ ಸರ್ವೇಕ್ಷಣಾದಲ್ಲಿ ಮೈಸೂರು ಮೊದಲ ಸ್ಥಾನಕ್ಕೇರಲಿ ಎಂದು ಪ್ರಮೋದಾದೇವಿ ಆಶಯ ವ್ಯಕ್ತಪಡಿಸಿದರು.












Click it and Unblock the Notifications