ಮೈಸೂರು ಜಿ.ಪಂ. ಸಿಇಒ ಆಗಿ ಪ್ರಶಾಂತ ಕುಮಾರ್ ನೇಮಕ
ಮೈಸೂರು, ಏಪ್ರಿಲ್ 02: ಮೈಸೂರು ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಆಗಿ ಪ್ರಶಾಂತ ಕುಮಾರ್ ಮಿಶ್ರಾ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರವ ಈ ಮೊದಲು ಎಂ.ಆರ್ ರವಿಕುಮಾರ್ ಅವರನ್ನು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯನ್ನಾಗಿ ನೇಮಕ ಮಾಡಿ ನಂತರ ಆ ಆದೇಶವನ್ನು ರದ್ದು ಮಾಡಿದೆ.
ಪ್ರಶಾಂತ ಕುಮಾರ್ ಮಿಶ್ರಾ ಅವರು ಈ ಹಿಂದೆ ಬೆಂಗಳೂರಿನಲ್ಲಿ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಪ್ರಶಾಂತ್ ಕುಮಾರ್ ಅದಕ್ಕೂ ಮೊದಲು ಕೊಡಗು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆಗಿಯೂ ಕೆಲಸ ಮಾಡಿದ್ದರು.
ಮೈಸೂರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಕೆ.ಜ್ಯೋತಿ ಅವರು ರಜೆಯ ಮೇಲೆ ತೆರಳಿರುವುದರಿಂದ, ಅವರಿಗಿನ್ನೂ ಸ್ಥಳ ನಿಗದಿಪಡಿಸಲಾಗಿಲ್ಲ ಎಂದು ತಿಳಿದು ಬಂದಿದೆ.
English summary
Prashant Kumar Mishra has been appointed as the Chief Executive Officer of Mysore Zilla Panchayat.