ವಿಜಯೇಂದ್ರಗೆ ವರುಣಾ ಟಿಕೆಟ್ ನೀಡುವಂತೆ ಪ್ರತಾಪ್ ಸಿಂಹ ಬ್ಯಾಟಿಂಗ್
Recommended Video

ಮೈಸೂರು, ಏಪ್ರಿಲ್ 23 : ವಿಜಯೇಂದ್ರಗೆ ಟಿಕೆಟ್ ಇಲ್ಲ ಎಂದು ಘೋಷಿಸಿರುವುದರಿಂದ ನಮಗೆ ಹಿನ್ನಡೆಯಾಗಿದೆ. ರಾಜ್ಯ, ಕೇಂದ್ರ ನಾಯಕರು ಈ ಕುರಿತಾಗಿ ಮೊದಲು ಗಮನ ಹರಿಸಿ, ನಮ್ಮ ಭಾವನೆ ಅರ್ಥ ಮಾಡಿಕೊಂಡು ಟಿಕೆಟ್ ನೀಡಲಿ ಎಂದು ಮೈಸೂರು- ಕೊಡಗು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಇಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ನಮ್ಮ ಪ್ರಶ್ನಾತೀತ ನಾಯಕರು. ಕಾರ್ಯಕರ್ತರ ಭಾವನೆ ಅರ್ಥ ಮಾಡಿಕೊಂಡು ಟಿಕೆಟ್ ಘೋಷಣೆ ಮಾಡಬೇಕು. ಇದು ವರುಣಾ ಕ್ಷೇತ್ರವೊಂದಕ್ಕೆ ಸಂಬಂಧಿಸಿದ ವಿಚಾರವಲ್ಲ. ಇಡೀ ಮೈಸೂರು ಜಿಲ್ಲೆಗೆ ಸಂಬಂಧಿಸಿದ ವಿಚಾರ ಎಂದರು.

ವಿಜಯೇಂದ್ರ ಹೊರತಾಗಿ ಬೇರೆ ಯಾರನ್ನೂ ಕಣಕ್ಕಿಳಿಸದಂತೆ ಕಾರ್ಯಕರ್ತರು ಪಟ್ಟು ಹಿಡಿದಿದ್ದಾರೆ. ಬಿ.ವೈ. ವಿಜಯೇಂದ್ರಗೆ ಟಿಕೆಟ್ ಸಿಗುತ್ತದೆ ಎಂಬ ವಿಶ್ವಾಸ ಇದೆ. ಇದೀಗ ವರುಣಾ ಕ್ಷೇತ್ರದಲ್ಲಿ ಟಿಕೆಟ್ ವಿಚಾರದಲ್ಲಿ ಅನಗತ್ಯ ಗೊಂದಲ ಸೃಷ್ಟಿಯಾಗಿದೆ. ಸದ್ಯಕ್ಕೆ ಟಿಕೆಟ್ ಇನ್ನೂ ಘೋಷಣೆಯಾಗಿಲ್ಲ. ನಾಳೆ ಘೋಷಣೆ ಮಾಡಲಾಗುತ್ತದೆ ಎಂದರು.
ಸಿದ್ದರಾಮಯ್ಯ ಅವರ ಕ್ಷೇತ್ರದಲ್ಲಿ ಕಣಕ್ಕಿಳಿಯಲು ವಿಜಯೇಂದ್ರ ಸಮರ್ಥ ಅಭ್ಯರ್ಥಿ. ಅವರಿಗೆ ಟಿಕೆಟ್ ಕೊಡಬೇಕು ಎಂದು ವರಿಷ್ಠರಲ್ಲಿ ವಿನಮ್ರವಾಗಿ ಕೇಳಿಕೊಳ್ಳುತ್ತೇವೆ ಎಂದು ಪ್ರತಾಪ್ ಸಿಂಹ ಹೇಳಿದರು.












Click it and Unblock the Notifications