ಮೈಸೂರಿನಲ್ಲಿ ವಿಮಾನಯಾನ ಆರಂಭಿಸಲು ಪ್ರತಾಪ್ ಸಿಂಹ ಮನವಿ
ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಸೋಮವಾರ ಕೇಂದ್ರ ವಿಮಾನಯಾನ ರಾಜ್ಯ ಖಾತೆ ಸಚಿವ ಜಯಂತ್ ಸಿನ್ಹಾ ಅವರನ್ನು ಭೇಟಿಯಾಗಿ ಮೈಸೂರಿಗೆ ಶೀಘ್ರದಲ್ಲೇ ವಿಮಾನಯಾನವನ್ನು ಪುನರಾರಂಭಿಸುವಂತೆ ಮನವಿ ಸಲ್ಲಿಸಿದರು.
ಮೈಸೂರು, ಏಪ್ರಿಲ್ 10: ಮೈಸೂರಿನಲ್ಲಿ ಶೀಘ್ರದಲ್ಲೇ ವಿಮಾನಯಾನ ಪುನರಾರಂಭಿಸುವಂತೆ ಕೇಂದ್ರ ವಿಮಾನಯಾನ ರಾಜ್ಯ ಖಾತೆ ಸಚಿವರಿಗೆ ಸಂಸದ ಪ್ರತಾಪ್ ಸಿಂಹ ಮನವಿ ಸಲ್ಲಿಸಿದ್ದಾರೆ.
ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಸೋಮವಾರ ಕೇಂದ್ರ ವಿಮಾನಯಾನ ರಾಜ್ಯ ಖಾತೆ ಸಚಿವ ಜಯಂತ್ ಸಿನ್ಹಾ ಅವರನ್ನು ಭೇಟಿಯಾಗಿ ಮೈಸೂರಿಗೆ ಶೀಘ್ರದಲ್ಲೇ ವಿಮಾನಯಾನವನ್ನು ಪುನರಾರಂಭಿಸುವಂತೆ ಮನವಿ ಸಲ್ಲಿಸಿದರು.[ಅಪ್ರಾಪ್ತನನ್ನು ವರಿಸಿದ 24ರ ಯುವತಿ : ಠಾಣೆಯ ಮೆಟ್ಟಿಲೇರಿದ ಪ್ರಕರಣ]

ಅಷ್ಟೇ ಅಲ್ಲದೇ ಮೈಸೂರಿನ ಪ್ರವಾಸೋದ್ಯಮ ಮತ್ತು ಉದ್ದಿಮೆಯನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ವಿಮಾನಯಾನ ಸಂಚಾರ ಅವಶ್ಯಕತೆಯ ಬಗ್ಗೆ ಸಚಿವರಿಗೆ ಮನವರಿಕೆ ಮಾಡಿಕೊಟ್ಟರು. ಇದಕ್ಕೆ ಸ್ಪಂದಿಸಿರುವ ಸಚಿವರು ಮೈಸೂರಿಗೆ ಶೀಘ್ರದಲ್ಲೇ ವಿಮಾನಯಾನವನ್ನು ಪುನರಾರಂಭಿಸುವುದಾಗಿ ಭರವಸೆ ನೀಡಿದ್ದಾರೆ.[ನಂಜನಗೂಡು ಉಪಚುನಾವಣೆ: ದಾಖಲೆಯ ಶೇ.77 ಮತದಾನ]












Click it and Unblock the Notifications