ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಾಮಪತ್ರ ಸಲ್ಲಿಕೆಗೂ ಮುನ್ನ ಪ್ರತಾಪ್ ಸಿಂಹ ಹೇಳಿದ್ದೇನು?

|
Google Oneindia Kannada News

Recommended Video

Lok Sabha Election 2019 : ಮೈಸೂರು ಕೊಡಗು ಕ್ಷೇತ್ರದ ಮೂಲಕ ಚುನಾವಣಾ ಕಣಕ್ಕೆ ಸಿಂಹ | Oneindia Kannada

ಮೈಸೂರು, ಮಾರ್ಚ್ 25:ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಂಸದ ಪ್ರತಾಪ್ ಸಿಂಹ ಸಹ ಕುಟುಂಬ ಸಮೇತ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ಚಾಮುಂಡಿಗೆ ವಿಶೇಷ ಪೂಜೆ ಸಲ್ಲಿಸಿ ಗೆಲುವಿಗಾಗಿ ಪ್ರಾರ್ಥಿಸಿದರು.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಇದೇ ವೇಳೆ ಮಾತನಾಡಿದ ಅವರು, ಮೈಸೂರು ಹುಲಿಗಳಿಗೆ ಪ್ರಸಿದ್ಧಿ.ಚಾಮುಂಡೇಶ್ವರಿ ಕುಳಿತಿರುವುದು ಸಹ ಸಿಂಹದ ಮೇಲೆ. ಆದ್ದರಿಂದ ಚಾಮುಂಡೇಶ್ವರಿ ತನ್ನ ವಾಹನವನ್ನ ಕೈ ಬಿಡೋದಿಲ್ಲ ಎಂಬ ನಂಬಿಕೆ ಇದೆ. ಮೈಸೂರಿಗೆ ಮೋದಿ ಪ್ರಚಾರಕ್ಕಾಗಿ ಆಗಮಿಸಲಿದ್ದಾರೆ. ಆದರೆ ಇನ್ನು ದಿನಾಂಕ ನಿಗದಿಯಾಗಿಲ್ಲ. ಮೈಸೂರು ಪ್ರವಾಸ ಖಚಿತ. ಇಂದು ಸಂಜೆ ವೇಳೆಗೆ ಮೈಸೂರು ಪ್ರವಾಸದ ಬಗ್ಗೆ ಖಚಿತ ಮಾಹಿತಿ ಸಿಗಲಿದೆ ಎಂದು ತಿಳಿಸಿದರು. ಇದಕ್ಕೂ ಮುನ್ನ ಸುತ್ತೂರಿ ಮಠಕ್ಕೆ ಮಠಕ್ಕೆ ತೆರಳಿ ಶ್ರೀಗಳ ಆಶೀರ್ವಾದ ಪಡೆದುಕೊಂಡರು.

 ಬಿಜೆಪಿ ಹಿಂದುಳಿದ ವರ್ಗದವರಿಗೆ ಲೋಕಸಭಾ ಟಿಕೆಟ್ ಕೊಟ್ಟಿಲ್ಲ:ವಿಜಯ್ ಶಂಕರ್ ಬಿಜೆಪಿ ಹಿಂದುಳಿದ ವರ್ಗದವರಿಗೆ ಲೋಕಸಭಾ ಟಿಕೆಟ್ ಕೊಟ್ಟಿಲ್ಲ:ವಿಜಯ್ ಶಂಕರ್

ಒಟ್ಟಾರೆ ಇಂದು ಪ್ರತಾಪಸಿಂಹ ಮತ್ತು ವಿಜಯಶಂಕರ್‌ ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆ ಸಮಯದಲ್ಲಿ ಎರಡೂ ಅಭ್ಯರ್ಥಿಗಳು ತಮ್ಮ ಬಲ ಪ್ರದರ್ಶನಕ್ಕೆ ಸಿದ್ಧತೆ ನಡೆಸಿಕೊಂಡಿದ್ದಾರೆ. ಇಬ್ಬರೂ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿಯಿಂದ ಜಿಲ್ಲಾಧಿಕಾರಿ ಕಚೇರಿಗೆ ಬೆಂಬಲಿಗರ ಜತೆ ಮೆರವಣಿಗೆ ಮೂಲಕ ಸಾಗಿ ಉಮೇದುವಾರಿಕೆ ಸಲ್ಲಿಸಲಿದ್ದಾರೆ.

Pratap Simha visited Chamundi hills before filing the nomination

ಆರ್‌.ಅಶೋಕ, ಶ್ರೀರಾಮುಲು ಅಲ್ಲದೆ ಬಿಜೆಪಿಯ ಸ್ಥಳೀಯ ಶಾಸಕರು, ಮುಖಂಡರು ಮತ್ತು ಕಾರ್ಯಕರ್ತರು ಪ್ರತಾಪಸಿಂಹ ಅವರಿಗೆ ಸಾಥ್ ನೀಡಲಿದ್ದಾರೆ.

ಕರ್ನಾಟಕ ಲೋಕಸಭಾ ಕ್ಷೇತ್ರಗಳ 'ಎ ಟು ಜೆಡ್' ಮಾಹಿತಿ

ಮೈತ್ರಿ ಅಭ್ಯರ್ಥಿಯ ಜತೆ ಕಾಂಗ್ರೆಸ್‌ ಮತ್ತು ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸುವರು. ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರೂ ಪಾಲ್ಗೊಳ್ಳಲಿದ್ದಾರೆ. ಜೆಡಿಎಸ್‌ನ ಯಾವೆಲ್ಲಾ ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲ.

English summary
BJP Candidate Pratap Simha visited chamundi hills for special pooja on the reason of nomination.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X