ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೆಆರ್ ಎಸ್ ಉಳಿವಿಗಾಗಿ ಡಿ.8ರಂದು ಪೂರ್ವಭಾವಿ ಸಮಾಲೋಚನಾ ಸಭೆ

|
Google Oneindia Kannada News

ಮೈಸೂರು, ಡಿಸೆಂಬರ್ 7: ಬೇಬಿ ಬೆಟ್ಟದಲ್ಲಿ ನಡೆಯುತ್ತಿರುವ ಗಣಿಗಾರಿಕೆಯಿಂದಾಗಿ ಕೆಆರ್ಎಸ್ ಅಣೆಕಟ್ಟೆಗೆ ಅಪಾಯ ಬಂದೊದಗಿದೆ. ಈ ಹಿನ್ನೆಲೆಯಲ್ಲಿ ಕೆಆರ್ಎಸ್ ಉಳಿವಿಗಾಗಿ ಪೂರ್ವಭಾವಿ ಸಮಾಲೋಚನಾ ಸಭೆಯನ್ನು ಡಿ.8ರಂದು ಬೆಳಿಗ್ಗೆ 11ಕ್ಕೆ ಹುಣಸೂರು ರಸ್ತೆಯಲ್ಲಿರುವ ಕೃಷಿ ಮಾರುಕಟ್ಟೆ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ಹಿರಿಯ ಸಮಾಜವಾದಿ ಪ.ಮಲ್ಲೇಶ್ ತಿಳಿಸಿದರು.

ಕೆಆರ್ ಎಸ್ ಡಿಸ್ನಿಲ್ಯಾಂಡ್ ಮಾದರಿ ಉದ್ಯಾನ: ಆತಂಕ ಬೇಡ ಎಂದ ಎಚ್‌ಡಿಕೆಕೆಆರ್ ಎಸ್ ಡಿಸ್ನಿಲ್ಯಾಂಡ್ ಮಾದರಿ ಉದ್ಯಾನ: ಆತಂಕ ಬೇಡ ಎಂದ ಎಚ್‌ಡಿಕೆ

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಡ್ಯ ಜಿಲ್ಲೆಯ ಕೃಷ್ಣರಾಜ ಸಾಗರ ಅಣೆಕಟ್ಟೆ ಸಮೀಪದಲ್ಲಿರುವ ಬೇಬಿ ಬೆಟ್ಟದಲ್ಲಿ ನಡೆಯುತ್ತಿರುವ ಗಣಿಗಾರಿಕೆಯಲ್ಲಿ ರಾಜಕಾರಣಿಗಳು ಹಾಗೂ ಅಧಿಕಾರಿಗಳೇ ಶಾಮೀಲಾಗಿರುವುದರಿಂದ ಗಣಿಗಾರಿಕೆಗೆ ಶಾಶ್ವತ ಪರಿಹಾರ ದೊರೆಯುತ್ತಿಲ್ಲ.

 'ಕೆಆರ್ ಎಸ್‌ನಲ್ಲಿ ಕಾವೇರಿ ಪ್ರತಿಮೆ ನಿರ್ಮಾಣ ಮಾಡಿದರೆ ಜಲಾಶಯಕ್ಕೆ ಸಂಚಕಾರ' 'ಕೆಆರ್ ಎಸ್‌ನಲ್ಲಿ ಕಾವೇರಿ ಪ್ರತಿಮೆ ನಿರ್ಮಾಣ ಮಾಡಿದರೆ ಜಲಾಶಯಕ್ಕೆ ಸಂಚಕಾರ'

ಹಾಗಾಗಿ ಜನಾಂದೋಲನ ನಡೆಸಿ ಇಡೀ ಸಮಾಜವೇ ಇದರ ವಿರುದ್ಧ ಧ್ವನಿ ಎತ್ತುವಂತೆ ಮಾಡಲು ಮೈಸೂರಿನಲ್ಲಿ ಕೆಆರ್ಎಸ್ ಉಳಿವಿಗಾಗಿ ಸಮಾಲೋಚನಾ ಸಮಿತಿ ಅಸ್ತಿತ್ವಕ್ಕೆ ಬಂದಿದೆ ಎಂದರು. ಮಂಡ್ಯದ ಯುವಕನೊಬ್ಬ ಗಣಿಗಾರಿಕೆ ನಡೆಸದಂತೆ ನ್ಯಾಯಾಲಯದಿಂದ ತಡೆ ಆಜ್ಞೆ ತಂದಿದ್ದರೂ ಗಣಿಗಾರಿಕೆ ನಡೆಸಲು ಸರ್ಕಾರ ಪರವಾನಗಿ ನೀಡುತ್ತಿದೆ.

Preliminary meeting was held on December 8 for the KRS survival

ಪರಿಸರವಾದಿಗಳು, ದಲಿತ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು, ಕನ್ನಡಪರ ಸಂಘಟನೆಗಳು, ಮಹಿಳಾ ಮತ್ತು ಸಾಂಸ್ಖತಿಕ ಸಂಘಟನೆಗಳು, ವಿದ್ಯಾರ್ಥಿಗಳು ಹಾಗೂ ಯುವ ಜನರು ಸಭೆಯಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದರು.

English summary
Preliminary meeting was held on December 8 for the KRS survival at the Agricultural Market Hall in Hunasur Road, Mysuru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X