ಇಂದು ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ; ಮಡಿಕೇರಿ ದಸರಾಗೆ ಸಿದ್ಧತೆ

ಮಡಿಕೇರಿ, ಸೆಪ್ಟೆಂಬರ್ 23: ವಸತಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಇಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.

ಇಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಾರ್ವಜನಿಕರ ಭೇಟಿ ಮಾಡಲಿದ್ದಾರೆ. ನಂತರ ಪ್ರಕೃತಿ ವಿಕೋಪದಿಂದಾದ ಹಾನಿ ಹಾಗೂ ಕೈಗೊಂಡ ಪರಿಹಾರ ಕಾರ್ಯಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಲಿದ್ದಾರೆ.

ಮಧ್ಯಾಹ್ನ 12 ಗಂಟೆಗೆ ಕಾವೇರಿ ತುಲಾ ಸಂಕ್ರಮಣ ಜಾತ್ರೆಗೆ ಸಂಬಂಧಪಟ್ಟಂತೆ ಪೂರ್ವ ಸಿದ್ಧತಾ ಸಭೆ ನಡೆಸೊ ಬಳಿಕ ಮಡಿಕೇರಿ ದಸರಾ ಜನೋತ್ಸವ ಸಂಬಂಧಪಟ್ಟಂತೆ ಪೂರ್ವ ಸಿದ್ಧತಾ ಸಭೆ ನಡೆಸಲಿದ್ದಾರೆ.

Preparation For Madikeri Dasara V Somanna Visiting Madikeri

ಮಧ್ಯಾಹ್ನ 2 ರಿಂದ 5 ಗಂಟೆವರೆಗೆ ಮಡಿಕೇರಿ ಹಾಗೂ ಸೋಮವಾರಪೇಟೆ ತಾಲ್ಲೂಕು ವ್ಯಾಪ್ತಿಯ ಮದೆ, ಕರ್ಣಂಗೇರಿ, ಜಂಬೂರು ಗ್ರಾಮಗಳಲ್ಲಿ ಪ್ರಕೃತಿ ವಿಕೋಪ ಸಂತ್ರಸ್ತರಿಗೆ ನಿರ್ಮಿಸಲಾಗುತ್ತಿರುವ ಮನೆಗಳ ನಿರ್ಮಾಣ ಕಾಮಗಾರಿಗಳಿಗೆ ಸಂಬಂಧಪಟ್ಟಂತೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಅವರು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+