• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಸರಳ ದಸರಾ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ: ಮೈಸೂರು ಉಸ್ತುವಾರಿ ಸಚಿವ

By ಮೈಸೂರು ಪ್ರತಿನಿಧಿ
|

ಮೈಸೂರು, ಸೆಪ್ಟೆಂಬರ್ 18: ನಾಡಹಬ್ಬ ಮೈಸೂರು ದಸರಾವನ್ನು ಸರಳವಾಗಿ ಆಚರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿರುವ ಹಿನ್ನೆಲೆಯಲ್ಲಿ ದುಂದು ವೆಚ್ಚದ ಪ್ರಶ್ನೆಯೇ ಇಲ್ಲ. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆ ನಡೆಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ ಸೋಮಶೇಖರ್ ಹೇಳಿದರು.

ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ 3.10 ಕೋಟಿ ರೂ. ವೆಚ್ಚದ ಕಾಂಕ್ರೀಟ್ ಚರಂಡಿ ರಸ್ತೆ ಪುನರ್ ನಿರ್ಮಾಣ ಹಾಗೂ ಡಾಂಬರೀಕರಣ ಕಾಮಗಾರಿಗೆ ಶುಕ್ರವಾರ ಚಾಲನೆ ನೀಡಿ ಅವರು ಮಾತನಾಡಿದರು.

ಮೈಸೂರು ದಸರಾ 2020: ಅರಮನೆಯಲ್ಲಿ ಸಿಂಹಾಸನ ಜೋಡಣಾ ಕಾರ್ಯಕ್ಕೆ ಚಾಲನೆ

ದಸರಾ ಹತ್ತು ದಿನದ ಕಾರ್ಯಕ್ರಮವಾಗಿದ್ದು, ಹಾಗಾಗಿ ಖರ್ಚು ವೆಚ್ಚಗಳು ಇರುತ್ತವೆ. ಇಷ್ಟಾದರೂ ಸಭೆಯಲ್ಲಿ ಸರಳ ಆಚರಣೆಗೆ ಒತ್ತು ನೀಡಿ ತೀರ್ಮಾನ ಕೈಗೊಳ್ಳುತ್ತೇವೆ. 5 ಕೋಟಿ ರೂ. ಅನ್ನು ಮೂಡಾದವರು ಬಿಡುಗಡೆ ಮಾಡಿದ್ದಾರೆ. ಕಳೆದ ಬಾರಿಯ ದಸರಾ ಅನುದಾನದಲ್ಲೇ 8 ಕೋಟಿ ರೂ. ಅನುದಾನ ಬಾಕಿ ಇದೆ ಎಂದು ಸಚಿವರು ತಿಳಿಸಿದರು.

ಇಂದು ಸಂಜೆ ದಸರಾ ಕಮಿಟಿಗಳಿಗೆ ಸಂಬಂಧಪಟ್ಟಂತೆ ಸಭೆ ಕರೆಯಲಾಗಿದೆ. ಆಶಾ ಕಾರ್ಯಕರ್ತೆಯರು, ಪೌರ ಕಾರ್ಮಿಕರು ಸೇರಿದಂತೆ ಆಹ್ವಾನಿತರಾಗುತ್ತಿರುವ ಆಯಾ ಇಲಾಖೆಯ ತಲಾ ಒಬ್ಬರು ಉದ್ಘಾಟಕರ ಹೆಸರನ್ನು ಆಯ್ಕೆ ಮಾಡಿ ಕಳುಹಿಸುವಂತೆ ಸಂಬಂಧಪಟ್ಟ ಇಲಾಖೆಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಮೈಸೂರು ನಗರಕ್ಕೆ ಎಲ್ಇಡಿ ಬೀದಿ ದೀಪ ಅಳವಡಿಸುವ ಸಂಬಂಧ ಬಹು ವರ್ಷಗಳ ಬೇಡಿಕೆ ಇದೆ ಎಂದು ಶಾಸಕರಾದ ಎಲ್.ನಾಗೇಂದ್ರ, ಎಸ್.ಎ ರಾಮದಾಸ್, ಸಂಸದರಾದ ಪ್ರತಾಪ್ ಸಿಂಹ ಸೇರಿದಂತೆ ಹಲವು ನಾಯಕರು ನನ್ನ ಬಳಿ ಚರ್ಚೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಸಂಪುಟದಲ್ಲಿ ಒಪ್ಪಿಗೆ ಪಡೆದು ಅನುಮೋದನೆ ಕೊಡಿಸಿದ್ದೇನೆ. ಇನ್ನು ಮುಂದೂ ಸಹ ಮೈಸೂರು ಅಭಿವೃದ್ಧಿಗೆ ಬೇಕಾದ ಕೆಲಸ ಹಾಗೂ ಸಹಕಾರವನ್ನು ಖಂಡಿತವಾಗಿ ಕೊಡುತ್ತೇನೆ ಎಂದು ಸಚಿವರು ತಿಳಿಸಿದರು.

ರೈತರಿಗೆ, ಸಣ್ಣ ಉದ್ಯಮಿಗಳಿಗೆ 39 ಸಾವಿರ ಕೋಟಿ ರುಪಾಯಿ ಸಾಲ ನೀಡಲು ಯೋಜನೆ ಹಾಕಿಕೊಂಡಿದ್ದೇವೆ. ಅದರಲ್ಲಿ 15,300 ಕೋಟಿ ರೂ. ಕೊಡಲು ಈಗಾಗಲೇ ಚಾಲನೆ ಕೊಟ್ಟಿದ್ದೇವೆ. ಇದರಲ್ಲಿ ಈಗಾಗಲೇ 12 ಲಕ್ಷ ರೈತರಿಗೆ 7 ಸಾವಿರ ಕೋಟಿಗೂ ಅಧಿಕ ಸಾಲವನ್ನು ನೀಡಿದ್ದೇವೆ ಎಂದರು.

ಈಗಾಗಲೇ ಬೆಂಗಳೂರು ವಿಭಾಗದಲ್ಲಿ ಮೊನ್ನೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಾಲ ವಿತರಣೆಗೆ ಚಾಲನೆ ನೀಡಲಾಗಿದ್ದು, ಉಳಿದಂತೆ ಮೈಸೂರು, ಕಲಬುರಗಿ ಹಾಗೂ ಬೆಳಗಾವಿ ವಿಭಾಗಗಳಲ್ಲಿ ಶೀಘ್ರವಾಗಿ ಪ್ರಾರಂಭಿಸಲಾಗುವುದು ಎಂದು ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು.

English summary
Mysuru District Incharge Minister ST Somashekhar said the being prepared for the simple Dasara celebration.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X