ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಶ್ವ ವಿಖ್ಯಾತ ಮೈಸೂರು ದಸರಾಗೆ ಚಾಲನೆ ನೀಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಸೆಪ್ಟೆಂಬರ್ 26 : ಸಾಂಸ್ಕೃತಿಕ ನಗರಿ ಮೈಸೂರು ಸೋಮವಾರ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು. ವಿಶ್ವವಿಖ್ಯಾತವಾಗಿರುವ ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2022ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬೆಳ್ಳಿ ಪಲ್ಲಕ್ಕಿಯಲ್ಲಿ ಪವಡಿಸಿರುವ ನಾಡದೇವಿ ತಾಯಿ ಶ್ರೀ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಆರತಿ ಬೆಳಗಿ, ಪುಷ್ಪಾರ್ಚನೆಗೈದು ನಮಿಸಿ, ದೀಪ ಬೆಳಗುವ ಮೂಲಕ ವಿದ್ಯುಕ್ತ ಚಾಲನೆ ನೀಡಿದರು. ಬೆಳಗ್ಗೆ 9.45 ರಿಂದ‌10.05ರ ವೃಶ್ಚಿಕ ಲಗ್ನದಲ್ಲಿ ಸಾಂಪ್ರದಾಯಿಕ, ವೈಭವಯುತವಾದ ದಸರಾ ಮಹೋತ್ಸವಕ್ಕೆ ಚಾಲನೆ ಲಭಿಸಿತು. ಬಳಿಕ ನಾಡಗೀತೆ ಮೊಳಗಿತು.

ಚಾಮುಂಡಿಬೆಟ್ಟಕ್ಕೆ ಆಗಮಿಸುತ್ತಿದ್ದಂತೆಯೇ ಮೊದಲು ತಾಯಿ ಚಾಮುಂಡೇಶ್ವರಿಯ ದರ್ಶನಕ್ಕೆ ತೆರಳಿದ ರಾಷ್ಟ್ರಪತಿಗಳು ತಾಯಿಯ ದರ್ಶನ ಪಡೆದರು. ದೇವಸ್ಥಾನವನ್ನು ವೀಕ್ಷಿಸಿದರು. ದೇವಸ್ಥಾನದ ಕುರಿತು ಮಾಹಿತಿ ಪಡೆದುಕೊಂಡರು. ಬಳಿಕ ಅವರು ವೇದಿಕೆಗೆ ಆಗಮಿಸುತ್ತಿದ್ದಂತೆಯೇ ಪೊಲೀಸ್ ಬ್ಯಾಂಡ್ ವತಿಯಿಂದ ರಾಷ್ಟ್ರಗೀತೆ ಮೊಳಗಿತು. ಸಭೆಯಲ್ಲಿ ಸೂಜಿ ಬಿದ್ದರೂ ಸದ್ದಾಗುವಷ್ಟು ಶಾಂತತೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಚಿಣ್ಣರು ಆಗಮಿಸಿದ್ದರೂ ಕೂಡ ಶಾಂತಚಿತ್ತರಾಗಿ ಕುಳಿತು ಕಾರ್ಯಕ್ರಮವನ್ನು ತದೇಕಚಿತ್ತರಾಗಿ ವೀಕ್ಷಿಸಿ ಭಾರತದ ಪ್ರಥಮ ಪ್ರಜೆಯನ್ನು ಕಣ್ತುಂಬಿಸಿಕೊಂಡು ಪುಳಕಿತರಾದರು.

ಹುಬ್ಬಳ್ಳಿ: ರಾಷ್ಟ್ರಪತಿ ಕಾರ್ಯಕ್ರಮ ಬಹಿಷ್ಕರಿಸಲು ಕಾಂಗ್ರೆಸ್ ನಿರ್ಧಾರಹುಬ್ಬಳ್ಳಿ: ರಾಷ್ಟ್ರಪತಿ ಕಾರ್ಯಕ್ರಮ ಬಹಿಷ್ಕರಿಸಲು ಕಾಂಗ್ರೆಸ್ ನಿರ್ಧಾರ

ಚಾಮುಂಡೇಶ್ವರಿ ಉತ್ಸವ ಮೂರ್ತಿ ಸಿಂಗಾರಗೊಂಡಿತ್ತು. ಹಚ್ಚ ಹಸಿರು ಜರತಾರಿ ಸೀರೆ ತೊಡಿಸಿ ದೇವಿಗೆ ಸಿಂಗರಿಸಲಾಗಿತ್ತು. ಬಂಗಾರದ ಒಡವೆಗಳು, ತಾಳಿ, ವಿವಿಧ ಬಗೆಯ ಹೂವುಗಳಿಂದ ತಾಯಿ ಚಾಮುಂಡಿಯ ಉತ್ಸವ ಮೂರ್ತಿಯನ್ನು ಅಲಂಕಾರಿಸಲಾಗಿತ್ತು. ಬೆಳ್ಳಿ ಪಲ್ಲಕ್ಕಿಯಲ್ಲಿ ಮಹಿಷ ಮರ್ದಿನಿ‌ ಅವತಾರದ ದೇವಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ದಸರಾಗೆ ವಿದ್ಯುಕ್ತ ಚಾಲನೆ ದೊರೆಯಿತು.

President Draupadi Murma Inaugurates Mysuru Dasara

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ಈ ಬಾರಿ ದಸರಾ ಬಹಳ ವಿಶೇಷತೆಗಳಿಂದ ಕೂಡಿದೆ. ಕಳೆದ ಎರಡು ಬಾರಿ ಕೋವಿಡ್‌ ಕಾರಣಗಳಿಂದ ಅರಮನೆಗಷ್ಟೇ ಸೀಮಿತವಾಗಿದ್ದ ದಸರಾ ಹಬ್ಬವನ್ನು ಗತವೈಭವ ನೆನಪಿಸಿಕೊಳ್ಳುವಂತೆ ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿದೆ. ದುಡಿಯುವ ರೈತರು, ಕಾರ್ಮಿಕರು, ಸಾಮಾನ್ಯ ಜನರು ಮನೆಮನೆಗಳಲ್ಲಿ ನಾಡಹಬ್ಬ ಆಚರಿಸುತ್ತಿದ್ದಾರೆ ಎಂದರು.

ನಾಡನ್ನು ಸಮೃದ್ಧಿಯಾಗಿಡಲು ತಾಯಿ ಚಾಮುಂಡೇಶ್ವರಿಗೆ ಪ್ರಾರ್ಥನೆ ಸಲ್ಲಿಸಿದ್ದೇನೆ. ದೇವಿ ನಮ್ಮ ಪ್ರಾರ್ಥನೆಗೆ ಓಗೊಟ್ಟು ನಮಗೆ ಆಶೀರ್ವಾದ, ಶಕ್ತಿ ಕೊಡುತ್ತಾಳೆ. ಇದು ನಮ್ಮ ಸೌಭಾಗ್ಯ. ಮೈಸೂರು ಮಹಾರಾಜರ ಕಾಲದಿಂದ ದೇವಿಯ ಪೂಜೆಯನ್ನು ಪ್ರಜಾಪ್ರಭುತ್ವ ಬಂದ ಮೇಲೆ ಮುಂದುವರಿಸಿಕೊಂಡು ಹೋಗಿದ್ದೇವೆ. ಗತಕಾಲದ ವೈಭವದ ಜೊತೆಗೆ ಇಂದಿನ ಪ್ರಸ್ತುತ ಕಾಲದ ಸಮಗ್ರ ಕನ್ನಡ ನಾಡಿನ ಶ್ರೇಯೋಭಿವೃದ್ಧಿಯೂ ಮುಖ್ಯ. ಹತ್ತು ಹಲವು ನೈಸರ್ಗಿಕ ಸವಾಲುಗಳನ್ನು ಎದುರಿಸಿ ಜನಕಲ್ಯಾಣದ ಕಡೆಗೆ ದಾಪುಗಾಲು ಹಾಕುತ್ತಿದ್ದೇವೆ ಎಂದು ತಿಳಿಸಿದರು.

ಉದ್ಘಾಟಕರ ಭಾಷಣ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮಿ, "ದಸರಾ ಉದ್ಘಾಟನೆಗಾಗಿ ನನ್ನನ್ನು ಕರೆದಿರುವುದು ತುಂಬಾ ಸಂತೋಷ ತಂದಿದೆ. ತಾಯಿ ಚಾಮುಂಡೇಶ್ವರಿ ದೇವಿಯ ಆಶೀರ್ವಾದ ಎಲ್ಲರ ಮೇಲಿರಲಿ. ಆಧ್ಯಾತ್ಮಿಕ, ಪರಂಪರೆಯಲ್ಲಿ ಚಾಮುಂಡಿ ದೇವಿಗೆ ವಿಶೇಷ ಸ್ಥಾನವಿದೆ. ಇಲ್ಲಿ ದೇವಿ ಮಹಿಷಾಸುರನ್ನು ವಧೆ ಮಾಡಿರುವ ಇತಿಹಾಸದ ಬಗ್ಗೆ ಕೇಳಿದ್ದೇನೆ. ಇಲ್ಲಿನ ದಸರಾವನ್ನು ದೇಶದ ನಾನಾ ಭಾಗಗಳಿಂದ ವೀಕ್ಷಣೆಗೆ ಆಗಮಿಸುತ್ತಾರೆ. ಮೈಸೂರು ದಸರಾ ಭಾರತೀಯ ಸಂಸ್ಕೃತಿಯ ಗೌರವ ಪ್ರತೀಕವಾಗಿದೆ" ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ತಿಳಿಸಿದರು.

President Draupadi Murma Inaugurates Mysuru Dasara

ವೇದಿಕೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಖಾತೆ ಸಚಿವ ಪ್ರಹ್ಲಾದ್ ಜೋಶಿ, ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಶಾಸಕ ಜಿ.ಟಿ.ದೇವೇಗೌಡ ಸೇರಿದಂತೆ ಮೈಸೂರಿನ ಶಾಸಕರು ಹಾಜರಿದ್ದರು.

English summary
President Draupadi Murma on Mondya inaugurated the mysuru Dasara. Dasara is celebrated for nine days and on the tenth day of Vijaya Dashami, a grand procession is held on october 5
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X