ಮೈಸೂರಿಗೆ ಇಂದು ಪ್ರಧಾನಿ ಮೋದಿ ಆಗಮನ
ಮೈಸೂರು, ಫೆಬ್ರವರಿ 18 : ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ರಾತ್ರಿ ಮೈಸೂರಿಗೆ ಆಗಮಿಸಲಿದ್ದಾರೆ. ಸೋಮವಾರ ಮೈಸೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ.
ಭಾನುವಾರ ರಾತ್ರಿ 11 ಗಂಟೆಗೆ ನರೇಂದ್ರ ಮೋದಿ ಅವರು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನರೇಂದ್ರ ಮೋದಿ ಅವರನ್ನು ಸ್ವಾಗತಿಸಲಿದ್ದಾರೆ.
ಮಹಾತ್ಮ ಗಾಂಧಿ ರಸ್ತೆಯಲ್ಲಿರುವ ರ್ಯಾಡಿಸನ್ ಬ್ಲೂ ಹೋಟೆಲ್ ನಲ್ಲಿ ಮೋದಿ ವಾಸ್ತವ್ಯ ಹೂಡಲಿದ್ದಾರೆ. ಪ್ರಧಾನಿ ಆಗಮನದ ಹಿನ್ನಲೆಯಲ್ಲಿ ಭವ್ಯ ಸ್ವಾಗತಕ್ಕೆ ಬಿಜೆಪಿ ತಯಾರಿ ಮಾಡಿಕೊಂಡಿದೆ.

ಪ್ರಧಾನಿ ಹಾದು ಹೋಗುವ ರಸ್ತೆಯಲ್ಲಿ ಐದು ಸಾವಿರಕ್ಕೂ ಅಧಿಕ ಕಾರ್ಯಕರ್ತರನ್ನು ನಿಲ್ಲಿಸಿ ಬಿಜೆಪಿ ಬಾವುಟ ತೋರಿಸಿ ಸ್ವಾಗತಿಸುವುದಕ್ಕೆ ಬಿಜೆಪಿ ಸಿದ್ಧತೆ ಮಾಡಿಕೊಂಡಿದೆ.
ಸೋಮವಾರ ಬೆಳಗ್ಗೆ ನರೇಂದ್ರ ಮೋದಿ ಅವರು ಹಾಸನ ಜಿಲ್ಲೆಯ ಶ್ರವಣಬೆಳಗೊಳಕ್ಕೆ ತೆರಳಲಿದ್ದಾರೆ. ಮಹಾಮಸ್ತಕಾಭಿಷೇಕದಲ್ಲಿ ಭಾಗಿಯಾಗಲಿದ್ದಾರೆ.
ಮಧ್ಯಾಹ್ನ ಮೈಸೂರಿಗೆ ವಾಪಸ್ ಆಗಲಿದ್ದು, ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ.
ಬೆಂಗಳೂರು ಬಳಿಕ ಮೈಸೂರಿನಲ್ಲಿ ಬೃಹತ್ ಸಮಾವೇಶ ಉದ್ದೇಶಿಸಿ ಮೋದಿ ಮಾತನಾಡಲಿದ್ದು 2018ರ ಚುನಾವಣಾ ಪ್ರಚಾರ ನಡೆಸಲಿದ್ದಾರೆ.












Click it and Unblock the Notifications