ದೇಗುಲಗಳಲ್ಲಿ ಪ್ರಸಾದ ವಿತರಣೆಗೆ ಅನುಮತಿ ಕಡ್ಡಾಯ:ಧಾರ್ಮಿಕ ದತ್ತಿ ಇಲಾಖೆ ಆದೇಶ

ಮೈಸೂರು, ಡಿಸೆಂಬರ್ 17: ಇನ್ನುಮುಂದೆ ದೇವಸ್ಥಾನಗಳಲ್ಲಿ ಪ್ರಸಾದ ವಿತರಣೆಗೆ ಕಡ್ಡಾಯವಾಗಿ ಅನುಮತಿ ಪಡೆಯಲೇಬೇಕು ಎಂದು ಧಾರ್ಮಿಕ ದತ್ತಿ ಇಲಾಖೆ ಆದೇಶ ಹೊರಡಿಸಿದೆ.

ಚಾಮರಾಜನಗರದ ಕಿಚ್ಚುಗುತ್ತಿಯ ಮಾರಮ್ಮ ದೇವಾಲಯದಲ್ಲಿ ವಿಷ ಪ್ರಸಾದ ಸೇವಿಸಿ ನೂರಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದು, 14 ಮಂದಿ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಧಾರ್ಮಿಕ ದತ್ತಿ ಇಲಾಖೆ ಈ ಆದೇಶ ಹೊರಡಿಸಿದೆ. ದೇವಸ್ಥಾನಗಳಲ್ಲಿ ಅನ್ನದಾಸೋಹ, ನೈವೇದ್ಯ, ಪ್ರಸಾದ ವಿತರಣೆಗೆ ಅನುಮತಿ ಪಡೆಯಲೇಬೇಕು, ಇಷ್ಟೇ ಅಲ್ಲದೆ ಸ್ಥಳೀಯ ಅಧಿಕಾರಿಗಳಿಂದಲೈ ಅನುಮತಿ ಪಡೆಯಬೇಕಿದೆ., ಅನುಮತಿ ಪಡೆಯದೆ ಅನ್ನದಾಸೋಹ ಮಾಡುವಂತಿಲ್ಲ.

ದಾಸೋಹ ತಯಾರಿಸಿಉವ ಕೋಣೆಯಲ್ಲಿ ಸಿಸಿಟಿವಿಯನ್ನು ಕಡ್ಡಾಯವಾಗಿ ಅಳವಡಿಸಬೇಕು, ದೇವರಿಗೆ ನೈವೇದ್ಯ ನೀಡುವ ಮುನ್ನ ಪರಿಶೀಲನೆ ನಡೆಸಬೇಕು ಎಂದು ಧಾರ್ಮಿಕ ದತ್ತಿ ಇಲಾಖೆ ಆದೇಶದಲ್ಲಿ ತಿಳಿಸಿದೆ.

Prior permission is needed for Distributing Prasadam

ಈಗಾಗಲೇ ಮಾರಮ್ಮ ದೇವಸ್ಥಾನದಲ್ಲಿ ಪ್ರಸಾದ ತಯಾರಿಸುವ ನೀರಿನಲ್ಲಿ ಬೆಳೆಗಳಿಗೆ ಹಾಕುವ ಕೀಟ ನಾಶಕ ಮಿಶ್ರಣ ಮಾಡಿದ್ದರು ಎಂಬ ಮಾಹಿತಿ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಯಿಂದ ಬಹಿರಂಗಗೊಂಡಿದೆ. ಇದೀಗ ಇದೆಲ್ಲಾ ಘಟನೆಗಳನ್ನು ಗಮನದಲ್ಲಿಟ್ಟುಕೊಂಡು ಧಾರ್ಮಿಕ ದತ್ತಿ ಇಲಾಖೆ ಆದೇಶ ಹೊರಡಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+