ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದೇಗುಲಗಳಲ್ಲಿ ಪ್ರಸಾದ ವಿತರಣೆಗೆ ಅನುಮತಿ ಕಡ್ಡಾಯ:ಧಾರ್ಮಿಕ ದತ್ತಿ ಇಲಾಖೆ ಆದೇಶ

|
Google Oneindia Kannada News

ಮೈಸೂರು, ಡಿಸೆಂಬರ್ 17: ಇನ್ನುಮುಂದೆ ದೇವಸ್ಥಾನಗಳಲ್ಲಿ ಪ್ರಸಾದ ವಿತರಣೆಗೆ ಕಡ್ಡಾಯವಾಗಿ ಅನುಮತಿ ಪಡೆಯಲೇಬೇಕು ಎಂದು ಧಾರ್ಮಿಕ ದತ್ತಿ ಇಲಾಖೆ ಆದೇಶ ಹೊರಡಿಸಿದೆ.

ಚಾಮರಾಜನಗರದ ಕಿಚ್ಚುಗುತ್ತಿಯ ಮಾರಮ್ಮ ದೇವಾಲಯದಲ್ಲಿ ವಿಷ ಪ್ರಸಾದ ಸೇವಿಸಿ ನೂರಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದು, 14 ಮಂದಿ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಧಾರ್ಮಿಕ ದತ್ತಿ ಇಲಾಖೆ ಈ ಆದೇಶ ಹೊರಡಿಸಿದೆ. ದೇವಸ್ಥಾನಗಳಲ್ಲಿ ಅನ್ನದಾಸೋಹ, ನೈವೇದ್ಯ, ಪ್ರಸಾದ ವಿತರಣೆಗೆ ಅನುಮತಿ ಪಡೆಯಲೇಬೇಕು, ಇಷ್ಟೇ ಅಲ್ಲದೆ ಸ್ಥಳೀಯ ಅಧಿಕಾರಿಗಳಿಂದಲೈ ಅನುಮತಿ ಪಡೆಯಬೇಕಿದೆ., ಅನುಮತಿ ಪಡೆಯದೆ ಅನ್ನದಾಸೋಹ ಮಾಡುವಂತಿಲ್ಲ.

ಪ್ರಸಾದಕ್ಕೆ ಬಳಸುವ ನೀರಿಗೆ ಕೀಟನಾಶಕ ಬೆರೆಸಲಾಗಿತ್ತು: ಐಜಿಪಿ ಮಾಹಿತಿಪ್ರಸಾದಕ್ಕೆ ಬಳಸುವ ನೀರಿಗೆ ಕೀಟನಾಶಕ ಬೆರೆಸಲಾಗಿತ್ತು: ಐಜಿಪಿ ಮಾಹಿತಿ

ದಾಸೋಹ ತಯಾರಿಸಿಉವ ಕೋಣೆಯಲ್ಲಿ ಸಿಸಿಟಿವಿಯನ್ನು ಕಡ್ಡಾಯವಾಗಿ ಅಳವಡಿಸಬೇಕು, ದೇವರಿಗೆ ನೈವೇದ್ಯ ನೀಡುವ ಮುನ್ನ ಪರಿಶೀಲನೆ ನಡೆಸಬೇಕು ಎಂದು ಧಾರ್ಮಿಕ ದತ್ತಿ ಇಲಾಖೆ ಆದೇಶದಲ್ಲಿ ತಿಳಿಸಿದೆ.

Prior permission is needed for Distributing Prasadam

ಮೂವರು ಮಕ್ಕಳನ್ನು ಅನಾಥರನ್ನಾಗಿ ಮಾಡಿದ ಮಾರಮ್ಮನ ಪ್ರಸಾದಮೂವರು ಮಕ್ಕಳನ್ನು ಅನಾಥರನ್ನಾಗಿ ಮಾಡಿದ ಮಾರಮ್ಮನ ಪ್ರಸಾದ

ಈಗಾಗಲೇ ಮಾರಮ್ಮ ದೇವಸ್ಥಾನದಲ್ಲಿ ಪ್ರಸಾದ ತಯಾರಿಸುವ ನೀರಿನಲ್ಲಿ ಬೆಳೆಗಳಿಗೆ ಹಾಕುವ ಕೀಟ ನಾಶಕ ಮಿಶ್ರಣ ಮಾಡಿದ್ದರು ಎಂಬ ಮಾಹಿತಿ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಯಿಂದ ಬಹಿರಂಗಗೊಂಡಿದೆ. ಇದೀಗ ಇದೆಲ್ಲಾ ಘಟನೆಗಳನ್ನು ಗಮನದಲ್ಲಿಟ್ಟುಕೊಂಡು ಧಾರ್ಮಿಕ ದತ್ತಿ ಇಲಾಖೆ ಆದೇಶ ಹೊರಡಿಸಿದೆ.

English summary
Religious endowment Department ordered that Temples get permission before distributing Prasadam.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X