ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅ.17 ರಿಂದ ಮೈಸೂರು ರಾಜವಂಶಸ್ಥರ ಖಾಸಗಿ ದರ್ಬಾರ್ ಆರಂಭ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಅಕ್ಟೋಬರ್ 16: ಮೈಸೂರು ಅರಮನೆಯಲ್ಲಿ ರಾಜವಂಶಸ್ಥರ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಅ.17 ರಿಂದ ಆರಂಭವಾಗಲಿದೆ. ಶನಿವಾರವೇ ಕಂಕಣಧಾರಿಗಳಾಗುವ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಸಿಂಹಾಸರೋಹಣ ಮಾಡುವ ಮೂಲಕ ಖಾಸಗಿ ದರ್ಬಾರ್ ಆರಂಭವಾಗಲಿದೆ.

ಕೊರೊನಾ ವೈರಸ್ ಆತಂಕ ಇರುವ ಕಾರಣ ರಾಜ್ಯ ಸರ್ಕಾರ ನಡೆಸುವ ದಸರಾದಂತೆ ಮೈಸೂರು ರಾಜವಂಶಸ್ಥರು ನಡೆಸುವ ದಸರಾ ಕೂಡ ಸರಳ ಮತ್ತು ಸಾಂಪ್ರದಾಯಿಕವಾಗಿ ನಡೆಯಲಿದೆ.

ದಸರಾ ಆನೆಗಳಿಗೆ ಕಬ್ಬು, ಬೆಲ್ಲ ತಿನ್ನಿಸಿದ ಸಚಿವ ಎಸ್.ಟಿ ಸೋಮಶೇಖರ್‌ದಸರಾ ಆನೆಗಳಿಗೆ ಕಬ್ಬು, ಬೆಲ್ಲ ತಿನ್ನಿಸಿದ ಸಚಿವ ಎಸ್.ಟಿ ಸೋಮಶೇಖರ್‌

ನಾಳೆ ಶನಿವಾರ ಬೆಳಿಗ್ಗೆ ಕಂಕಣಧಾರಿಗಳಾಗುವ ಯದುವೀರ್ ಅವರು, ಹೋಮ ಹವನದಲ್ಲಿ ಭಾಗಿಯಾಗಲಿದ್ದಾರೆ. ತರುವಾಯ ಶನಿವಾರ ಬೆಳಿಗ್ಗೆ 7 ಗಂಟೆ 45 ನಿಮಿಷದಿಂದ 8 ಗಂಟೆ 15 ನಿಮಿಷದೊಳಗೆ ಸಲ್ಲುವ ಶುಭ ಲಗ್ನದಲ್ಲಿ ಯದುವೀರ್ ಅವರು ಸಿಂಹಾಸನರೋಹಣ ಮಾಡಲಿದ್ದಾರೆ. ಈ ಮೂಲಕ ಅ.17 ರಿಂದ 9 ದಿನಗಳ ಕಾಲ ಖಾಸಗಿ ದರ್ಬಾರ್ ನಡೆಲಿದೆ.

Private Darbar Begins From Tomorrow By Mysuru Dynasty

ಕೊರೊನಾ ಸೋಂಕು ಹೆಚ್ಚುತ್ತಿರುವ ಇರುವ ಕಾರಣ ಕೇವಲ ಬೆರಳಣಿಕೆಯಷ್ಟು ಜನರಿಗೆ ಮಾತ್ರ ಅರಮನೆಯೊಳಗೆ ಪ್ರವೇಶವಿರುತ್ತದೆ ಎಂದು ರಾಜ ಮನೆತನದವರು ಈಗಾಗಲೇ ತಿಳಿಸಿದ್ದಾರೆ.

ಜನ ಜಗುಂಳಿಯಿಂದ ಕೊರೊನಾ ಹರಡದಂತೆ ತಡೆಗಟ್ಟಲು ಈ ಬಾರಿ ಜಟ್ಟಿ ಕಾಳಗ ಕೂಡ ಇರುವುದಿಲ್ಲ. ಒಟ್ಟಾರೆ ಸರಳವಾದರೂ ಮೈಸೂರಿನಲ್ಲಿ ದಸರಾ ಮಹೋತ್ಸವದ ಸಂಭ್ರಮ ಮನೆ ಮಾಡಲಿದೆ.

English summary
The world famous Mysuru Dasara Mahotsava will begin tomorrow at the Mysuru Palace.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X