ಪಾಕ್ ಪರ ಘೋಷಣೆ; ಎಸ್‌ಡಿಪಿಐ ಕಾರ್ಯಕರ್ತರ ವಿರುದ್ಧ ದೂರು

ಮೈಸೂರು, ಡಿಸೆಂಬರ್ 31; ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆ‌ಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಎಸ್‌ಡಿಪಿಐ ಕಾರ್ಯಕರ್ತರ ವಿರುದ್ಧ ದೂರು ದಾಖಲಾಗಿದೆ.

ಬುಧವಾರ ಮೈಸೂರಿನಲ್ಲಿ ರಾಷ್ಟ್ರೀಯ ಹಿಂದೂ ಸಮಿತಿಯವರು ಅಶೋಕಪುರಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬುಧುವಾರ ಗ್ರಾಮ ಪಂಚಾಯಿತಿ ಚುನಾವಣೆ ಮತ ಎಣಿಕೆ ಸಂದರ್ಭದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದರು.

ಎಸ್‌ಡಿಪಿಐ ಕಾರ್ಯಕರ್ತರು ಸಂಭ್ರಮಾಚರಣೆ ವೇಳೆ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಕುರಿತು ದೂರ ದಾಖಲು ಮಾಡಲಾಗಿದೆ.

Pro Pakistan Slogan Complaint Against SDPI Members

ಮೈಸೂರಿನಲ್ಲಿ ರಾಷ್ಟ್ರೀಯ ಹಿಂದೂ ಸಮಿತಿಯ ರಾಷ್ಟ್ರಧ್ಯಕ್ಷ ವಿಕಾಸ್ ಶಾಸ್ತ್ರಿ ಅವರ ನೇತೃತ್ವದಲ್ಲಿ ಅಶೋಕಪುರಂ ಠಾಣೆಯಲ್ಲಿ ಎಸ್‌ಡಿಪಿಐ ಕಾರ್ಯಕರ್ತರ ವಿರುದ್ದ ದೂರು ದಾಖಲಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮ ಪಂಚಾಯಿತಿ ಚುನಾವಣ ಫಲಿತಾಂಶದ ಸಂಭ್ರಮಾಚರಣೆ ವೇಳೆ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ ಕಾರಣ ಭಾರತ ದೇಶದ ಅಖಂಡತೆಗೆ ತೇಜೊವಧೆ ಮಾಡಲು ಮುಂದಾಗಿದ್ದಾರೆ ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.

ಬುಧವಾರ ಮಧ್ಯಾಹ್ನ ಬೆಳ್ತಂಗಡಿ ತಾಲೂಕಿನ ಉಜಿರೆಯ ಮತ ಎಣಿಕೆ ಕೇಂದ್ರದ ಹೊರಗೆ ಪಾಕಿಸ್ತಾನ ಪರವಾದ ಘೋಷಣೆ ಕೂಗಲಾಗಿದೆ. ಪೊಲೀಸರು ಸಹ ಈ ಸಮಯದಲ್ಲಿ ಅಲ್ಲಿಯೇ ಇದ್ದರು.

ಬಿಜೆಪಿ ಮತ್ತು ಎಸ್‌ಡಿಪಿಐ ಕಾರ್ಯಕರ್ತರು ಮತ ಕೇಂದ್ರದ ಹೊರಗೆ ನೂರಾರು ಸಂಖ್ಯೆಯಲ್ಲಿ ಜಮಾವಣೆಗೊಂಡಿದ್ದರು. ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+