ಮೈಸೂರಿನಲ್ಲಿ ಪ್ರೊ.ಕೆಎಸ್ ಭಗವಾನ್ ವಿರುದ್ಧ ಎಫ್ ಐಆರ್ ದಾಖಲು
ಮೈಸೂರು, ಜನವರಿ 1: ಪ್ರಗತಿಪರ ಚಿಂತಕ ಪ್ರೊ .ಕೆ.ಎಸ್. ಭಗವಾನ್ ಅವರ ವಿರುದ್ಧ ಪೊಲಿಸರು 295(ಎ) ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು, ರಾಮ ಮಂದಿರ ಏಕೆ ಬೇಕು?' ಪುಸ್ತಕಗಳನ್ನು ವಶಕ್ಕೆ ಪಡೆದು ತನಿಖೆಯನ್ನು ತೀವ್ರಗೊಳಿಸಿದ್ದಾರೆ.
ಪ್ರೊ.ಭಗವಾನ್ ಅವರು ಈ ಹಿಂದೆಯೇ ರಾಮ ಮಂದಿರ ಏಕೆ ಬೇಕು?' ಎಂಬ ಪುಸ್ತಕವನ್ನು ಬರೆದಿದ್ದರು. ಇದೀಗ ಅದು ಎರಡನೇ ಮುದ್ರಣ ಕಂಡಿದೆ. ಈ ಪುಸ್ತಕದಲ್ಲಿ ವಾಲ್ಮೀಕಿ ಅವರು ಕಂಡಂತೆ ಶ್ರೀರಾಮನು ದೇವರಲ್ಲ, ಆತ ಮಾಂಸ ಭಕ್ಷಣೆ ಮಾಡುತ್ತಿದ್ದ, ಮದ್ಯ ಸೇವಿಸುತ್ತಿದ್ದ. ಸ್ತ್ರೀಯರ ನೃತ್ಯವನ್ನು ವೀಕ್ಷಿಸುತ್ತಿದ್ದ ಎಂಬ ಸಾಲುಗಳನ್ನು ಬರೆದಿದ್ದರು. ಇದು ವಿವಾದಕ್ಕೆ ಕಾರಣವಾಗಿತ್ತು.
ಈ ಹಿನ್ನೆಲೆಯಲ್ಲಿ ಮೂರು ದಿನಗಳ ಹಿಂದೆ ಹಿಂದೂಪರ ಸಂಘಟನೆಗಳು ಪ್ರೊ. ಕೆ.ಎಸ್. ಭಗವಾನ್ ಅವರ ನಿವಾಸದ ಮುಂಭಾಗ ಪ್ರತಿಭಟನೆ ನಡೆಸಿದ್ದರು.

ಕುವೆಂಪುನಗರ, ನಜರ್ ಬಾದ್, ವಿದ್ಯಾರಣ್ಯಪುರಂ ಸೇರಿದಂತೆ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಭಗವಾನ್ ಅವರ ವಿರುದ್ಧ ದೂರು ದಾಖಲಿಸಿದ್ದರು. ಅದರಂತೆ ಕುವೆಂಪುನಗರ ಪೊಲೀಸ್ ಠಾಣೆ ಯಲ್ಲಿ ಕೂಡ ದೂರು ದಾಖಲಾಗಿದ್ದು, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಡಿ 295(ಎ) ಸೆಕ್ಷನ್ ಅಡಿ ಎಫ್‍ಐಆರ್ ದಾಖಲಿಸಿರುವ ಪೊಲೀಸರು ತನಿಖೆಯನ್ನು ಮುಂದುವರೆಸಿದ್ದಾರೆ.
ಇದೇ ವೇಳೆ ವಿವಾದಿತ ಪುಸ್ತಕದ ಪ್ರತಿಗಳನ್ನೂ ಕೂಡ ವಶಕ್ಕೆ ಪಡೆದಿರುವ ಪೊಲೀಸರು, ಅದರಲ್ಲಿನ ವಿವಾದಿತ ಅಂಶಗಳ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಜನರ ಧಾರ್ಮಿಕ ಭಾವನೆಗಳೂ ಹಾಗೂ ನಂಬಿಕೆಗಳಿಗೆ ಧಕ್ಕೆ ತರುವುದೂ ಕೂಡ ಕ್ರಿಮಿನಲ್ ಮೊಕದ್ದಮೆ ವ್ಯಾಪ್ತಿಗೆ ಬರುತ್ತದೆ. ನ್ಯಾಯಾಲಯದಲ್ಲಿ ಪ್ರಕರಣ ಸಾಬೀತಾದಲ್ಲಿ ಕನಿಷ್ಠ 3 ವರ್ಷ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಹೆಸರು ಹೇಳಲಿಚ್ಛಿಸದ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.
ಡಾ.ಬಿ.ಆರ್.ಅಂಬೇಡ್ಕರ್ ಅವರು ಬರೆದಿರುವ ಸಂವಿಧಾನದಲ್ಲಿ ಜನರಲ್ಲಿ ಮೂಢನಂಬಿಕೆ ಹಾಗೂ ಮೌಢ್ಯಗಳನ್ನು ಬಿತ್ತಬಾರದು ಎಂದು ಸ್ಪಷ್ಟವಾಗಿ ಬರೆಯಲಾಗಿದೆ. ಆದರೆ, ಕೆಲ ಪಟ್ಟಭದ್ರರು, ಜನರ ಭಾವನೆಗಳನ್ನು ಸ್ವಾರ್ಥಕ್ಕಾಗಿ ಬಳಸಿಕೊಳ್ಳುವ ಮೂಲಕ ಹಾದಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ನಾನು ಮಾಡಿದ್ದೇನೆ. ಇದರಲ್ಲಿ ನನಗೆ ಯಾವುದೇ ಭಯವಿಲ್ಲ ಎಂದು ಭಗವಾನ್ ತಿಳಿಸಿದ್ದಾರೆ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications