ಹೊಸ ವರ್ಷದ ಸಂಭ್ರಮ; ಮೈಸೂರಲ್ಲಿ ನಿಷೇಧಾಜ್ಞೆ ಜಾರಿ

ಮೈಸೂರು, ಡಿಸೆಂಬರ್ 30: ಮೈಸೂರು ನಗರ ವ್ಯಾಪ್ತಿಯಲ್ಲಿ ಕೋವಿಡ್-19 ಹರಡುವುದನ್ನು ನಿಯಂತ್ರಿಸಲು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಹೊಸ ವರ್ಷಾಚರಣೆ ಸಂದರ್ಭದಲ್ಲಿ ಜನರ ಸುರಕ್ಷತೆ ದೃಷ್ಟಿಯಿಂದ ನಗರ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಡಿಸೆಂಬರ್ 31ರ ಸಂಜೆ 6ಗಂಟೆಯಿಂದ ಜನವರಿ 1ರ ಬೆಳಗ್ಗೆ 6ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ. ಈ ಅವಧಿಯಲ್ಲಿ ಸಾರ್ವಜನಿಕ ರಸ್ತೆಗಳಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ಜನರು ಸೇರುವುದು ಹಾಗೂ ಮೈಸೂರು ನಗರದ ಯಾವುದೇ ರಸ್ತೆಗಳಲ್ಲಿ ಮತ್ತು ತೆರೆದ ಜಾಗಗಳಲ್ಲಿ ಗುಂಪು ಸೇರಿ ಹೊಸ ವರ್ಷಾಚಷರಣೆ ಮಾಡುವಂತಿಲ್ಲ.

ಹೋಟೆಲ್, ಮಾಲ್, ರಸ್ಟೋರೆಂಟ್, ಕ್ಲಬ್, ಪಬ್, ಕ್ಲಬ್ ಹೌಸ್ ಅಥವಾ ಇದೇ ರೀತಿಯ ಯಾವುದೇ ತರಹದ ಮನರಂಜನಾ ಸ್ಥಳಗಳಲ್ಲಿ ಹೊಸ ವರ್ಷಾಚರಣೆ ಸಂಬಂಧ ಯಾವುದೇ ರೀತಿಯ ವಿಶೇಷ ಕಾರ್ಯಕ್ರಮಗಳು, ಮನೋರಂಜನಾ ಕೂಟಗಳು, ಡಿಜೆಗಳು, ಸಂಗೀತ ಸಂಜೆ /ಬ್ಯಾಂಡ್ ಮತ್ತು ನೃತ್ಯ ಕಾರ್ಯಕ್ರಮಗಳನ್ನು ಆಯೋಜಿಸಬಾರದು.

Prohibitory Order Issued In City From December 31st

ಈ ಸ್ಥಳಗಳಲ್ಲಿ ಕೋವಿಡ್-19 ಮಾರ್ಗಸೂಚಿಗಳನ್ವಯ ಯಾವುದೇ ಸಮಯದಲ್ಲಿ ಸಾಮರ್ಥ್ಯದ 50%ಮೀರದಂತೆ ಗ್ರಾಹಕರಿಗೆ ಅವಕಾಶ ಕಲ್ಪಿಸಿ ದೈನಂದಿನ ವ್ಯಾಪಾರ ಚಟುವಟಿಕೆಗಳನ್ನು ನಡೆಸಬಹುದಾಗಿದೆ.

ಹೋಟೆಲ್, ಮಾಲ್, ರೆಸ್ಟೋರೆಂಟ್, ಕ್ಲಬ್, ಕ್ಲಬ್ ಹೌಸ್ ಆಡಳಿತ ಮಂಡಳಿಯವರು ಮುಂಗಡವಾಗಿ ಕಾಯ್ದಿರಿಸಿದ ಅತಿಥಿ/ಆಹ್ವಾನಿತರಿಗೆ ಮಾತ್ರ ಪ್ರವೇಶ ನೀಡುವಂತೆ ವ್ಯವಸ್ಥೆ ಮಾಡಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಮಳಿಗೆ/ ಸಂಸ್ಥೆಯ ಹೊರಗೆ ಸಾರ್ವಜನಿಕರು ಪ್ರವೇಶಕ್ಕಾಗಿ ಗುಂಪು ಸೇರಿದಂತೆ ಆಡಳಿತ ಮಂಡಳಿಯವರು ಕ್ರಮ ವಹಿಸಬೇಕು.

ಜಿಲ್ಲಾಡಳಿತ ಹೊರಡಿಸಿರುವ ಕೋವಿಡ್ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಬೇಕು. ಹೋಟೆಲ್, ಮಾಲ್, ರೆಸ್ಟೋರೆಂಟ್, ಕ್ಲಬ್, ಪಬ್, ಮತ್ತು ಕ್ಲಬ್ ಹೌಸ್ ಇತ್ಯಾದಿ ವ್ಯಾಪಾರ ಮಳಿಗೆಗಳು ರಾತ್ರಿ 11.30ಕ್ಕೆ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಬೇಕು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+