ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರಿನ ಭೌಗೋಳಿಕ ಮಹತ್ವದ ಉತ್ಪನ್ನಗಳ ರಫ್ತಿಗೆ ಉತ್ತೇಜನ: ಜಿಲ್ಲಾಧಿಕಾರಿ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಡಿಸೆಂಬರ್ 4: ಮೈಸೂರು ಜಿಲ್ಲೆಯಲ್ಲಿ ಭೌಗೋಳಿಕ ಮಹತ್ವ ಹೊಂದಿರುವ ನಂಜನಗೂಡು ನಂಜನಗೂಡು ರಸಬಾಳೆ, ಮೈಸೂರು ವಿಳ್ಯೆದೆಲೆ, ಮೈಸೂರು ಸಿಲ್ಕ್ ಸೀರೆ ಮುಂತಾದ ಉತ್ಪನ್ನಗಳ ರಫ್ತಿಗೆ ಉತ್ತೇಜನ ನೀಡಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಹೇಳಿದರು.

ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೈಗಾರಿಕೆಗಳಿಗೆ ಸಂಬಂಧಿಸಿದ ಏಕಗವಾಕ್ಷಿ ಸಮಿತಿ ಸಭೆ, ಕೈಗಾರಿಕೆಗಳ ಕುಂದುಕೊರತೆ ಸಭೆ ಹಾಗೂ ರಫ್ತು ಉತ್ತೇಜನ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಮಾತನಾಡಿದರು.

 ಮೈಸೂರು ಡಿಸಿ ರೋಹಿಣಿ ಸಿಂಧೂರಿ ಪರ ಪ್ರತಾಪ್ ಸಿಂಹ ಮಾತು ಮೈಸೂರು ಡಿಸಿ ರೋಹಿಣಿ ಸಿಂಧೂರಿ ಪರ ಪ್ರತಾಪ್ ಸಿಂಹ ಮಾತು

ಮೈಸೂರಿನಿಂದ ಹೆಚ್ಚು ರಫ್ತು ಮಾಡುವ ಬಗ್ಗೆ ಯೋಜನೆ ರೂಪಿಸಿ, ವರದಿ ತಯಾರಿಸಿ ಡಿಸೆಂಬರ್ ಅಂತ್ಯದ ಒಳಗೆ ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿದರು.

Mysuru: Promoting The Export of Geographically Significant Products: DC Rohini Sindhuri

ಕೈಗಾರಿಕಾಭಿವೃದ್ಧಿ ವಲಯಗಳಲ್ಲಿ ಕೆಲವು ನಿವೇಶನಗಳಿಗೆ ಅಧಿಕ ಬೆಲೆ ನಿಗದಿಪಡಿಸಲಾಗಿದೆ, ಅದನ್ನು ಸರಿಪಡಿಸಬೇಕು ಎಂದು ಕೈಗಾರಿಕೋದ್ಯಮಿಗಳು ಮನವಿ ಮಾಡಿದರು. ಈ ಬಗ್ಗೆ ಪರಿಶೀಲಿಸುವಂತೆ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಿಗೂ ತಿಳಿಸಿದರು.

Mysuru: Promoting The Export of Geographically Significant Products: DC Rohini Sindhuri

ಕೈಗಾರಿಕೋದ್ಯಮಿಗಳ ಕುಂದು ಕೊರತೆ ಆಲಿಸುವ ಸಭೆಯನ್ನು ಪ್ರತಿ ತಿಂಗಳ ಡಿ.ಐ‌.ಸಿ.ಯ ಜಂಟಿ ನಿರ್ದೇಶಕರೇ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

English summary
District Collector Rohini Sindhuri said that the Mysuru district should promote the export of products such as, Nanjanagudu Banana and Mysore silk saree.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X