ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರಿನಲ್ಲಿ ಮೇ 19ರಿಂದ ತೆರಿಗೆ ಪಾವತಿಸಬಹುದು: ಗುರುದತ್ ಹೆಗಡೆ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಮೇ 16: ಮೇ 19ರಿಂದ ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯ ವಲಯ ಕಚೇರಿಗಳಲ್ಲಿ ಆಸ್ತಿ ತೆರಿಗೆ ಪಾವತಿಸಲು ಅವಕಾಶ ಕಲ್ಪಿಸಲಾಗುವುದು ಎಂದು ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾದ ಗುರುದತ್ ಹೆಗಡೆ ಅವರು ತಿಳಿಸಿದ್ದಾರೆ.

ಕೊರೊನಾ ಸೋಂಕು ಮೈಸೂರು ಜಿಲ್ಲೆಯಲ್ಲಿ ಪೂರ್ಣ ಪ್ರಮಾಣದಲ್ಲಿ ಗುಣವಾದ ನಿಟ್ಟಿನಲ್ಲಿ ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಫೇಸ್‍ಬುಕ್ ಪುಟದ ಮೂಲಕ ಮಾತನಾಡಿದ ಅವರು, ಮಂಗಳವಾರದಿಂದ ಆಸ್ತಿ ತೆರೆಗೆ ಪಾವತಿಸಬಹುದಾಗಿದ್ದು, ಜುಲೈವರೆಗೂ ತೆರಿಗೆ ಪಾವತಿಸಲು ಕಾಲಾವಕಾಶ ನೀಡಲಾಗಿದೆ. ಸಾರ್ವಜನಿಕರು ಜನದಟ್ಟಣೆಗೆ ಅವಕಾಶವಿಲ್ಲದಂತೆ ತೆರಿಗೆ ಪಾವತಿಸಬೇಕು. ಅಲ್ಲದೆ ನೀರಿನ ತೆರಿಗೆಯನ್ನು ಆನ್ ಲೈನ್ ಮೂಲಕ ಪಾವತಿಸಲು ಕ್ರಮವಹಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಐಟಿ ರಿಟರ್ನ್ಸ್ ಸಲ್ಲಿಕೆ ದಿನಾಂಕ ವಿಸ್ತರಣೆ ಏನು ಲಾಭ? ಐಟಿ ರಿಟರ್ನ್ಸ್ ಸಲ್ಲಿಕೆ ದಿನಾಂಕ ವಿಸ್ತರಣೆ ಏನು ಲಾಭ?

Tax Can Be Payed In Mysuru From May 19 Informed Gurudath Hegade

ಈಗಾಗಲೇ ಮೈಸೂರು ನಗರದಲ್ಲಿ ಎಲ್ಲಾ ಅಗತ್ಯ ವಸ್ತುಗಳ ಮಾರಾಟ ಮಾಡಲು ಅನುವು ಮಾಡಿಕೊಡಲಾಗಿದೆ. ಅಂಗಡಿಯಲ್ಲಿ ಗ್ರಾಹಕರು ಸಾರ್ವಜನಿಕ ಅಂತರ ಕಾಯ್ದುಕೊಳ್ಳುವಂತೆ ಮಾಲೀಕರೇ ಎಚ್ಚರ ವಹಿಸಬೇಕು ಎಂದು ತಿಳಿಸಿದರು. ಇನ್ನು ಮುಂದೆಯೂ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಇಲ್ಲವಾದಲ್ಲಿ ದಂಡವನ್ನು ಹೆಚ್ಚಿಸಲಾಗುವುದು ಎಂದರು.

English summary
Tax can be payed in Mysuru from may 19, informed mysuru city corporation commissioner Gurudath Hegade,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X