Elephant Arjuna: ಮೈಸೂರಿನಲ್ಲಿ ದಸರಾ ಆನೆ 'ಅರ್ಜುನ' ಸ್ಮಾರಕ, ವಿಶೇಷತೆಗಳು
ಮೈಸೂರು, ಜನವರಿ 16: ಮೈಸೂರು ದಸರಾ ಎಂದಾಕ್ಷಣ ನೆನಪಿಗೆ ಬರುವುದು ದಸರಾ ಆನೆ 'ಅರ್ಜುನ'. 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಆನೆ 2023ರಲ್ಲಿ ಕಾಡಾನೆ ಹಿಡಿಯುವ ಕಾರ್ಯಾಚರಣೆ ವೇಳೆ ಮೃತಪಟ್ಟಿತ್ತು. ಅರ್ಜುನ ಆನೆ ಸ್ಮಾರಕ ನಿರ್ಮಾಣ ಮಾಡಬೇಕು ಎಂಬ ಬೇಡಿಕೆ ಇದೆ. ಈಗ ಮೈಸೂರಿನಲ್ಲಿಯೇ ದಸರಾ ಆನೆ ಅರ್ಜುನನ ಸ್ಮಾರಕ ನಿರ್ಮಾಣವಾಗಲಿದೆ, ಅರ ವಿಶೇಷತೆಗಳು ಹೀಗಿವೆ.
'ಅರ್ಜುನ' ಆನೆ ಸ್ಮಾರಕ ನಿರ್ಮಾಣದ ಕುರಿತು ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭೇಟಿ ಮಾಡಿ ಪ್ರಸ್ತಾವನೆ ಸಲ್ಲಿಕೆ ಮಾಡಿದ್ದಾರೆ. ಈ ಕುರಿತು ಪೋಸ್ಟ್ ಹಾಕಿರುವ ಅವರು, ಮೈಸೂರಿನ ಪರಂಪರೆಯ ಸಂರಕ್ಷಣೆ ದಸರಾ ಆನೆ ಅರ್ಜುನ ಹೆಸರಿನ ಸ್ಮಾರಕ ಮತ್ತು ಯೋಗ ವಸ್ತುಸಂಗ್ರಹಾಲಯಕ್ಕಾಗಿ ಸಲ್ಲಿಸಿರುವ ಪ್ರಸ್ತಾವನೆಗಳ ವಿವರ ನೀಡಿದ್ದಾರೆ.

ಮೈಸೂರಿನ ಶ್ರೀಮಂತ ಪರಂಪರೆಯನ್ನು ಗೌರವಿಸುವ ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸುವ ಎರಡು ಪ್ರಮುಖ ಯೋಜನೆಗಳನ್ನು ಕಾರ್ಯಗತಗೊಳಿಸಲು ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ ಯೋಜನೆಗಳ ಕುರಿತು ವಿವರಗಳ ಸಮೇತ ಪ್ರಸ್ತಾವನೆಯನ್ನು ಸಲ್ಲಿಸಿದ್ದೇನೆ ಎಂದು ತಿಳಿಸಿದ್ದಾರೆ.
ದಸರಾ ಆನೆ ಅರ್ಜುನ ಸ್ಮಾರಕ: ಬನ್ನಿಮಂಟಪದ ಎಲ್ಐಸಿ ವೃತ್ತದ ಬಳಿ ಪ್ರಸ್ತಾಪಿಸಲಾದ ದಸರಾ ಆನೆ ಅರ್ಜುನ ಸ್ಮಾರಕವು 2012 ರಿಂದ 2019 ರವರೆಗೆ ಚಿನ್ನದ ಅಂಬಾರಿಯನ್ನು ಹೊತ್ತು ಮೈಸೂರು ದಸರಾ ಮೆರವಣಿಗೆಯನ್ನು ಮುನ್ನಡೆಸಿದ ದಸರಾ ಆನೆ 'ಅರ್ಜುನ'ಗೆ ಗೌರವ ಸಲ್ಲಿಸುವ ಪ್ರಸ್ತಾವನೆಯಾಗಿದೆ.
ಈ ಸ್ಮಾರಕವು 'ಅರ್ಜುನ'ನ ಭವ್ಯ ಪ್ರತಿಮೆ. ಮೈಸೂರಿನ ದಸರಾ ಆನೆಗಳೊಂದಿಗಿನ ಬಾಂಧವ್ಯವನ್ನು ವಿವರಿಸುವ ಐತಿಹಾಸಿಕ ಫಲಕಗಳು. ಸೌರ ಬೆಳಕು, ಮಳೆನೀರು ಕೊಯ್ಲು ಮತ್ತು ಭೂದೃಶ್ಯ ಉದ್ಯಾನಗಳಂತಹ ಪರಿಸರ ಸ್ನೇಹಿ ವೈಶಿಷ್ಟ್ಯಗಳನ್ನು ಒಳಗೊಂಡಿರುತ್ತದೆ.
ಈ ಯೋಜನೆಯು ಮೈಸೂರು ಮತ್ತು ಅದರ ಪ್ರಸಿದ್ಧ ದಸರಾ ಆನೆಗಳ ನಡುವಿನ ಭಾವನಾತ್ಮಕ ಸಂಪರ್ಕವನ್ನು ಗೌರವಿಸುವ ಪ್ರಮುಖ ಪ್ರವಾಸಿ ಸ್ಥಳವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಸಂಸದ ಯದುವೀರ್ ಒಡೆಯರ್ ಹೇಳಿದ್ದಾರೆ.
ದಸರಾ ಆನೆ ಅರ್ಜುನ ಮೃತಪಟ್ಟಿದ್ದು ಹಾಸನ ಜಿಲ್ಲೆಯಲ್ಲಿ. ಆನೆ ಸಾವನ್ನಪ್ಪಿದ ಜಾಗದಲ್ಲಿಯೂ ಈಗಾಗಲೇ ಸ್ಮಾರಕ ನಿರ್ಮಾಣ ಮಾಡಲಾಗುತ್ತಿದೆ. ಈ ಯೋಜನೆಗೆ ಶಂಕುಸ್ಥಾಪನೆ ಮಾಡಲಾಗಿದೆ. ಮೈಸೂರಿನಲ್ಲಿಯೂ ಅರ್ಜುನ ಆನೆ ಸ್ಮಾರಕ ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಲಾಗಿತ್ತು.
ದಸರಾ ಆನೆ ಅರ್ಜುನ ಸಾವು: 2023ರ ಡಿಸೆಂಬರ್‌ನಲ್ಲಿ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಯಸಳೂರು ಬಾಳೆಕೆರೆ ಅರಣ್ಯ ಪ್ರದೇಶದಲ್ಲಿ ಕಾಡಾನೆಗಳನ್ನು ಸೆರೆ ಹಿಡಿಯುವ ಕಾರ್ಯಾಚರಣೆ, ರೇಡಿಯೋ ಕಾಲರ್ ಅಳವಡಿಕೆ ವೇಳೆ ದುರಂತ ನಡೆಯಿತು. ಕಾಡಾನೆ ದಾಳಿಯಲ್ಲಿ ದಸರಾ ಆನೆ 'ಅರ್ಜುನ' ಆನೆ ಮೃತಪಟ್ಟಿತು.
ಅರ್ಜುನನ ನೇತೃತ್ವದಲ್ಲಿ 4 ಆನೆಗಳ ಸಹಾಯದಿಂದ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಚರಣೆ ಆರಂಭಿಸಿದ್ದರು. ಪುಂಡಾನೆಗೆ ಅರಿವಳಿಕೆ ಚುಚ್ಚು ಮದ್ದು ನೀಡುವಾಗ ಅದು ಅರ್ಜುನನ ಮೇಲೆ ದಾಳಿ ಮಾಡಿತ್ತು. ಆಗ ಉಳಿದ ಆನೆಗಳು ಹಿಮ್ಮೆಟ್ಟಿದವು. ಒಂಟಿ ಸಲಗದ ಜೊತೆ ಕಾಳಗಕ್ಕಿಳಿದ ಅರ್ಜುನ ಅರಣ್ಯ ಇಲಾಖೆ ಅಧಿಕಾರಿಗಳ ಜೀವ ಉಳಿಸಿತು.
ಕಾಳಗದಲ್ಲಿ ಅರ್ಜುನ ಆನೆ ಸಾವನ್ನಪ್ಪಿತ್ತು. ಅರ್ಜುನ ಆನೆ ಮೈಸೂರು ದಸರಾದಲ್ಲಿ 8 ಬಾರಿ ಚಿನ್ನದ ಅಂಬಾರಿಯನ್ನು ಹೊತ್ತಿತ್ತು. ಆದ್ದರಿಂದ ಈಗ ಸ್ಮಾರಕ ನಿರ್ಮಾಣ ಮಾಡಲಾಗುತ್ತಿದೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications