ಮೈಸೂರಿನಲ್ಲಿ ಬಾಡಿ ಮಸಾಜ್ ನೆಪದಲ್ಲಿ ನಡೆಯುತ್ತಿತ್ತು ವೇಶ್ಯಾವಾಟಿಕೆ ದಂಧೆ
ಮೈಸೂರು, ಮಾರ್ಚ್ 6: ಮೈಸೂರಿನಲ್ಲಿ ವೇಶ್ಯಾವಾಟಿಕೆ ದಂಧೆ ದಿನದಿಂದ ದಿನಕ್ಕೆ ಬೇರೆ ಬೇರೆ ರೀತಿಯಲ್ಲಿ ನಡೆಯುತ್ತಿದೆ. ಪೊಲೀಸರು ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದರೂ ಜಾಮೀನಿನ ಮೇಲೆ ಹೊರಬಂದು ಮತ್ತೆ ಅದೇ ದಂಧೆಯನ್ನು ಕೆಲವರು ನಡೆಸುತ್ತಿದ್ದಾರೆ.
ಕೆಲವು ದಿನಗಳ ಹಿಂದೆ ನಗರದ ಪ್ರತಿಷ್ಠಿತ ಬಡಾವಣೆ ವಿಜಯನಗರದಲ್ಲಿನ ಮನೆಯೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆಯನ್ನು ಪತ್ತೆ ಹಚ್ಚಿ ಗೀತಾ, ರಾಧಾ ಮತ್ತು ರಾಮಣ್ಣ ಎಂಬುವರನ್ನು ವಶಕ್ಕೆ ಪಡೆಯಲಾಗಿತ್ತು. ಗಿರಾಕಿಯಾಗಿ ಬಂದಿದ್ದ ವೆಂಕಟೇಶ ಎಂಬಾತನನ್ನೂ ಬಂಧಿಸಲಾಗಿತ್ತು. ಇವರು ಬೇರೆ ಬೇರೆ ಹೆಸರುಗಳಲ್ಲಿ ಮನೆ ಪಡೆದು ಅಲ್ಲಿಗೆ ಮಹಿಳೆಯರನ್ನು ಕರೆಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿರುವುದು ಬೆಳಕಿಗೆ ಬಂದ ನಂತರ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆಗೆ ಕಡಿವಾಣ ಹಾಕಿದ್ದರು.

ಇದೀಗ ಮನೆಗಳಲ್ಲಿ ಬಿಟ್ಟು, ಬಾಡಿ ಮಸಾಜ್ ನೆಪದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ನಗರದ ವಿ.ವಿ.ಪುರಂನಲ್ಲಿನ ಮಸಾಜ್ ಪಾರ್ಲರ್ ನಲ್ಲಿ ಮಹಿಳೆಯರನ್ನು ಕರೆಸಿ ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ನಗರದ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.












Click it and Unblock the Notifications