• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಡಿಕೆಶಿ ಬಂಧನ; ಮೈಸೂರು- ಬೆಂಗಳೂರು ಮಾರ್ಗದಲ್ಲಿ ಪಯಣಿಸದಿರುವುದೇ ಒಳಿತು

|

ಮೈಸೂರು, ಸೆಪ್ಟೆಂಬರ್ 4: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬಂಧನ ಖಂಡಿಸಿ ಇಂದು ಬೆಂಗಳೂರು, ಮೈಸೂರು, ರಾಮನಗರ, ತುಮಕೂರು, ಮಂಡ್ಯ ಸೇರಿದಂತೆ ರಾಜ್ಯದ ಹಲವೆಡೆ ಪ್ರತಿಭಟನೆಗೆ ಕರೆ ನೀಡಿದ್ದು, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಡಿಕೆಶಿ ಬೆಂಬಲಿಗರು ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.

ಡಿಕೆಶಿ ಬಂಧನ; ದ್ವೇಷದ ರಾಜಕಾರಣ ಎಂದು ಬೆಳಗಾವಿಯಲ್ಲಿ ಪ್ರತಿಭಟನೆ

ಕನಕಪುರ, ರಾಮನಗರವೂ ಅಕ್ಷರಶಃ ಬಂದ್ ಆಗಿದೆ. ಬಸ್, ಬೈಕುಗಳಿಗೆ ಬೆಂಕಿ ಹಚ್ಚಿದ್ದು, ಈ ಹಿನ್ನೆಲೆಯಲ್ಲಿ ರಾಮನಗರ ಜಿಲ್ಲೆಯ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆ ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ.

ರಾಮನಗರ, ಬೆಂ.ಗ್ರಾಮಾಂತರ, ಬೆಂಗಳೂರು ನಗರ, ದಕ್ಷಿಣ ವಲಯದ ಮೈಸೂರು, ಮಂಡ್ಯ, ಚಾಮರಾಜನಗರಕ್ಕೆ ಬಿಗಿ ಭದ್ರತೆ ಒದಗಿಸಿದ್ದು, ಇಬ್ಬರು ಐಜಿಪಿಗಳಿಗೆ ಸೂಚನೆ ನೀಡಿ ಡಿಜಿಪಿ ನೀಲಮಣಿ ರಾಜು ಬೆಂಗಳೂರು-ಮೈಸೂರು, ಕನಕಪುರ-ಬೆಂಗಳೂರು ಹೆದ್ದಾರಿಗಳಲ್ಲಿ ಬಂದೋಬಸ್ತ್ ಕೈಗೊಂಡಿದ್ದಾರೆ. ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಅಭಿಮಾನಿಗಳು ರಸ್ತೆಗಿಳಿದಿದ್ದಾರೆ.

ದಳವಾಯಿ ಕೋಡಿಹಳ್ಳಿಯಲ್ಲಿ ಗ್ರಾಮಸ್ಥರು ಕನಕಪುರ- ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ರಸ್ತೆ ತಡೆಯಿಂದ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಹಾಗಾಗಿ ಮೈಸೂರು ಕಡೆ ಪ್ರಯಾಣ ಬೆಳೆಸುವವವರು ಕೊಂಚ ಎಚ್ಚರದಿಂದಿದ್ದರೆ ಒಳಿತು.

English summary
Protest is going on at Mysuru region due to D K Shivkumar arrest. Peoples are planning to come mysuru region should change their thought.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X