ಪ್ರವಾಸಿಗರ ಗಮನಕ್ಕೆ; 2 ದಿನ ಮೈಸೂರು ಅರಮನೆಗೆ ಸಾರ್ವಜನಿಕರ ಪ್ರವೇಶ ನಿರ್ಬಂಧ
ಮೈಸೂರು, ಜುಲೈ 31; ಮೈಸೂರಿಗೆ ಭೇಟಿ ನೀಡುವ ಪ್ರವಾಸಿಗರ ಗಮನಕ್ಕೆ. ಎರಡು ದಿನಗಳ ಕಾಲ ಮೈಸೂರು ಅರಮನೆಗೆ ಸಾರ್ವಜನಿಕರ ಭೇಟಿ ನಿಷೇಧಿಸಿ ಮೈಸೂರು ಅರಮನೆ ಆಡಳಿತ ಮಂಡಳಿ ಆದೇಶ ಹೊರಡಿಸಿದೆ.
ಆಗಸ್ಟ್ 1ರ ಮಂಗಳವಾರ ಮತ್ತು ಆಗಸ್ಟ್ 2ರ ಬುಧವಾರ ಮೈಸೂರು ಅರಮನೆಗೆ ಸಾರ್ವಜನಿಕರ ಭೇಟಿಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಆಗಸ್ಟ್ 2ರಂದು ನಡೆಯಬೇಕಿದ್ದ ಧ್ವನಿ ಮತ್ತು ಬೆಳಕು ಕಾರ್ಯಕ್ರಮವನ್ನು ಸಹ ರದ್ದುಗೊಳಿಸಲಾಗಿದೆ.

ಎರಡು ದಿನಗಳ ಕಾಲ ಮೈಸೂರು ಅರಮನೆಗೆ ಜನರ ಭೇಟಿ ಮಾತ್ರವಲ್ಲ, ಭದ್ರತಾ ದೃಷ್ಟಿಯಿಂದ ಅರಮನೆ ಸುತ್ತಮುತ್ತ ಡ್ರೋನ್ ಹಾರಾಟವನ್ನು ಸಹ ಮೈಸೂರು ಪೊಲೀಸರು ನಿರ್ಬಂಧಿಸಿ ಆದೇಶ ಹೊರಡಿಸಿದ್ದಾರೆ.
ನಿರ್ಬಂಧ ಏಕೆ?; ಜಿ20 ಶೃಂಗ ಸಭೆಯಲ್ಲಿ ಪಾಲ್ಗೊಳ್ಳುವ ಗಣ್ಯರು, ವಿವಿಧ ದೇಶಗಳ ಪ್ರತಿನಿಧಿಗಳು ಮೈಸೂರು ಅರಮನೆಗೆ ಭೇಟಿ ನೀಡುವ ಹಿನ್ನಲೆಯಲ್ಲಿ ಸಾರ್ವಜನಿಕರ ಭೇಟಿಯನ್ನು ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ.
43 ದೇಶಗಳ ಪ್ರತಿನಿಧಿಗಳು, ಜಿ20 ಸಮಿತಿಯ ಸದಸ್ಯರು ಮೈಸೂರು ನಗರಕ್ಕೆ ಆಗಮಿಸುತ್ತಿದ್ದಾರೆ. ಸೋಮವಾರದಿಂದ ಬುಧವಾರದ ತನಕ ನಗರದಲ್ಲಿ ನಡೆಯುವ ಥಿಂಕ್ 20 ಸಮ್ಮಿಟ್ ಸಭೆಯಲ್ಲಿ ಎಲ್ಲರೂ ಪಾಲ್ಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ಮೈಸೂರು ಅರಮನೆಗೆ ಸಹ ಭೇಟಿಯನ್ನು ನೀಡಲಿದ್ದಾರೆ.
ಜಿ20 ಶೃಂಗ ಸಭೆಯು ಸೆಪ್ಟೆಂಬರ್ ತಿಂಗಳಿನಲ್ಲಿ ನವದೆಹಲಿಯಲ್ಲಿ ನಡೆಯಲಿದೆ. ಇದಕ್ಕೆ ಪೂರಕವಾಗಿ ಹಲವಾರು ಥಿಂಕ್ 20 ಸಮ್ಮಿಟ್‌ಗಳು ನಡೆಯುತ್ತಿದ್ದು, ವಿವಿಧ ದೇಶಗಳ ಪ್ರತಿನಿಧಿಗಳು ಪಾಲ್ಗೊಳ್ಳುತ್ತಿದ್ದಾರೆ.
ಭಾರತವು 100ನೇ ಶೃಂಗಸಭೆಯ ಆತಿಥ್ಯವಹಿಸಲಿದೆ. 2022 ನವೆಂಬರ್ 16ರಂದು ಬಾಲಿಯಲ್ಲಿ ನಡೆದ ಜಿ20 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಜಿ20 ಅಧ್ಯಕ್ಷತೆಯನ್ನು ಹಸ್ತಾಂತರಿಸಿದ ನಂತರ, ಒಂದು ವರ್ಷದ ಜಿ20 ಅಧ್ಯಕ್ಷತೆಯು 2022ರ ಡಿಸೆಂಬರ್ 1ರಂದು ಪ್ರಾರಂಭಗೊಂಡಿದೆ. 2023ರ ನವೆಂಬರ್ 30ರವರೆಗೆ ಮುಂದುವರಿಯಲಿದೆ.
ಭಾರತದ ಜಿ20 ಅಧ್ಯಕ್ಷತೆಯ ಧ್ಯೇಯವಾಕ್ಯ 'ವಸುಧೈವ ಕುಟುಂಬಕಂ' ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯವನ್ನು ಬಿಂಬಿಸು ಲಾಂಛನವನ್ನು ಈಗಾಗಲೇ ಅನಾವರಣಗೊಳಿಸಲಾಗಿದೆ. ಭಾರತದ ರಾಷ್ಟ್ರಧ್ವಜದ ಬಣ್ಣಗಳ ಮೂಲಕ ವಿನ್ಯಾಸಗೊಳಿಸಲಾದ ಲಾಂಛನ ಇದಾಗಿದೆ.
ಭಾರತದ ಜಿ-20 ಅಧ್ಯಕ್ಷತೆಯ ಮೂರನೇ ಸಂಸ್ಕೃತಿ ಕಾರ್ಯಕಾರಿ ಗುಂಪಿನ ಸಭೆ ಹಂಪಿಯಲ್ಲಿ ಜುಲೈ ತಿಂಗಳಿನಲ್ಲಿ ನಡೆದಿತ್ತು. ಈ ಸಭೆಯಲ್ಲಿ ಪಾಲ್ಗೊಂಡ ಹಲವು ದೇಶಗಳ ಗಣ್ಯರು ಹಂಪಿಯಿಂದ ಮೈಸೂರಿಗೆ ಆಗಮಿಸುತ್ತಿದ್ದಾರೆ. ಮೂರು ದಿನಗಳ ಕಾಲ ನಗರದಲ್ಲಿ ನಡೆಯುವ ಥಿಂಕ್ 20 ಸಮ್ಮಿಟ್ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಹಂಪಿಯ ಸಭೆಗೂ ಮೊದಲು ವಾರಾಣಸಿಯಲ್ಲಿ ಕೃಷಿ ಮುಖ್ಯ ವಿಜ್ಞಾನಿಗಳ (ಎಂಎಸಿಎಸ್) ಸಭೆ, ಗೋವಾದಲ್ಲಿ 2ನೇ ಆರೋಗ್ಯ ಕಾರ್ಯ ಗುಂಪಿನ ಸಭೆ, ಹೈದರಾಬಾದ್‌ನಲ್ಲಿ 2ನೇ ಡಿಜಿಟಲ್ ಆರ್ಥಿಕತೆಯ ಕಾರ್ಯಗುಂಪಿನ ಸಭೆ ಮತ್ತು ಶಿಲ್ಲಾಂಗ್‌ನಲ್ಲಿ ಬಾಹ್ಯಾಕಾಶ ಆರ್ಥಿಕ ನಾಯಕರ ಪೂರ್ವಭಾವಿ ಸಭೆ ಸಹ ನಡೆದಿದೆ.
ಜಿ20 ಗುಂಪಿನಲ್ಲಿ 19 ದೇಶಗಳಿವೆ. ಅರ್ಜೆಂಟೀನಾ, ಆಸ್ಟ್ರೇಲಿಯಾ, ಬ್ರೆಜಿಲ್, ಕೆನಡಾ, ಚೀನಾ, ಫ್ರಾನ್ಸ್, ಜರ್ಮನಿ, ಭಾರತ, ಇಂಡೋನೇಷ್ಯಾ, ಇಟಲಿ, ಜಪಾನ್, ಕೊರಿಯಾ ಗಣರಾಜ್ಯ, ಮೆಕ್ಸಿಕೊ, ರಷ್ಯಾ, ಸೌದಿ ಅರೇಬಿಯಾ, ದಕ್ಷಿಣ ಆಫ್ರಿಕಾ, ಟರ್ಕಿ, ಯುನೈಟೆಡ್ ಕಿಂಗ್ಡಮ್ ಮತ್ತು ಅಮೆರಿಕ ಸಂಯುಕ್ತ ಸಂಸ್ಥಾನ ಮತ್ತು ಐರೋಪ್ಯ ಒಕ್ಕೂಟವನ್ನು ಇದು ಒಳಗೊಂಡಿದೆ.
ಭಾರತದ ವೈವಿಧ್ಯತೆ, ಸಂಪ್ರದಾಯಗಳು ಮತ್ತು ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಜಿ20 ಗಣ್ಯರಿಗೆ ಪರಿಚಯಿಸಲು ಸಹ ಪ್ರತಿನಿಧಿಗಳಿಗೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಅಲ್ಲದೇ ಸಿರಿಧಾನ್ಯ ಆಧಾರಿತ ಭಕ್ಷ್ಯಗಳನ್ನು ಭೋಜನದ ಪಟ್ಟಿಯಲ್ಲಿ ಸೇರಿಸಲಾಗಿದೆ.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications