Get Updates
Get notified of breaking news, exclusive insights, and must-see stories!

ಮೈಸೂರು: ತೆರಿಗೆ ಹಣ ಅಧಿಕಾರಿಗಳ ವೈಯಕ್ತಿಕ ಬ್ಯಾಂಕ್ ಖಾತೆಗೆ; ಪಂಚಾಯಿತಿ ಅಧಿಕಾರಿಗಳ ಕರ್ಮಕಾಂಡ

ಮೈಸೂರಿನ ಶ್ರೀರಾಂಪುರ ಪಟ್ಟಣ ಪಂಚಾಯಿತಿಯಲ್ಲಿ ನಾಲ್ಕಕ್ಕೂ ಹೆಚ್ಚು ಅಧಿಕಾರಿಗಳು ಮತ್ತು ಸಿಬ್ಬಂದಿ ಸಾರ್ವಜನಿಕರ ತೆರಿಗೆ ಹಣವನ್ನು ವೈಯಕ್ತಿಕ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆ ಮಾಡಿಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ಪಂಚಾಯಿತಿಯ ಡೇಟಾ ಎಂಟ್ರಿ ಆಪರೇಟರ್ ನಮ್ರತಾ ಅವರು ತೆರಿಗೆ ಹಣವನ್ನು ಅನಧಿಕೃತವಾಗಿ ಸಂಗ್ರಹಿಸಿರುವುದು ಶ್ರೀರಾಂಪುರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸುರೇಶ್ ಅವರು ನೀಡಿದ ವರದಿಯಲ್ಲಿ ದಾಖಲಾಗಿದೆ. 2020ರಲ್ಲಿ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸಿದ ನಂತರ ನಡೆದ ಪ್ರಕರಣ ಇದಾಗಿದೆ.

Public Tax Funds Misappropriated in Srirampur s Pattana Panchayat

ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಬನ್ನೂರು ಕಂದಾಯ ಅಧಿಕಾರಿ ಬಸವರಾಜು ಮತ್ತು ಶ್ರೀರಾಂಪುರ ಪಟ್ಟಣ ಪಂಚಾಯಿತಿ ಪ್ರಥಮ ದರ್ಜೆ ಸಹಾಯಕ ರಘುನಂದನ್ ನೇತೃತ್ವದಲ್ಲಿ ತನಿಖಾ ತಂಡ ರಚಿಸಲಾಗಿದೆ. ಪರಿಶೀಲನೆ ವೇಳೆ ಪ್ರಕರಣದಲ್ಲಿ ಸುಮಾರು 1.25 ಲಕ್ಷ ರೂ.ಗಳನ್ನು ಈ ರೀತಿ ಸಂಗ್ರಹಿಸಿರುವುದು ಬೆಳಕಿಗೆ ಬಂದಿದೆ ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶ (ಡಿಯುಡಿಎಲ್)ದ ಯೋಜನಾ ನಿರ್ದೇಶಕಿ ಬಿ.ಶುಭಾ ತಿಳಿಸಿದರು.

ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಬಿ.ಶುಭಾ ಅವರು 15 ದಿನಗಳ ಹಿಂದೆ ನಡೆಸಿದ ವಾಡಿಕೆ ತಪಾಸಣೆಯಲ್ಲಿ ಅಕ್ರಮ ಬೆಳಕಿಗೆ ಬಂದಿದೆ. ಖಾತಾ ನೀಡಿಕೆ, ವರ್ಗಾವಣೆ ಹಾಗೂ ಇನ್ನಿತರ ಮೂಲಗಳಿಂದ ಸಂದಾಯವಾದ ಹಣವನ್ನು ನೌಕರರ ಖಾತೆಗೆ ವರ್ಗಾಯಿಸಲಾಗಿದೆ. ಡಿಯುಡಿಸಿ ಯೋಜನಾ ನಿರ್ದೇಶಕರು ನಗದು ಲೆಡ್ಜರ್ಗಳು ಮತ್ತು ರಸೀದಿ ಅನ್ನು ಪರಿಶೀಲಿಸಿ ಬ್ಯಾಂಕ್‌ನಲ್ಲಿ ಠೇವಣಿ ವಾಡಿದ ಹಣಕ್ಕೆ ತಾಳೆ ಮಾಡಿ ವರದಿ ಸಲ್ಲಿಸುವಂತೆ ಪಂಚಾಯಿತಿ ಮುಖ್ಯಾಧಿಕಾರಿ ಸುರೇಶ್ ಅವರಿಗೆ ಸೂಚಿಸಿದ್ದಾರೆ.

ನೋಟಿಸ್ ಜಾರಿ

ಘಟನೆಗೆ ಪರೋಕ್ಷವಾಗಿ ಕಾರಣಕರ್ತರಾಗಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಬಿಲ್ ಕಲೆಕ್ಟರ್ ಕುಮಾರಸ್ವಾಮಿ, ಕಂದಾಯ ಅಧಿಕಾರಿಗಳಾದ ಉದಯ್ ಭಾಸ್ಕರ್, ಶಕೀಲ್ ಅಹಮ್ಮದ್ ಹಾಗೂ ಪರಿಶೀಲಿಸಬೇಕಾದ ಜವಾಬ್ದಾರಿ ನಿರ್ವಹಣೆ ಮಾಡದ ಕಾರಣಕ್ಕೆ ಈ ಹಿಂದಿನ ಮುಖ್ಯಾಧಿಕಾರಿ ಶ್ರೀಧರ್ ಅವರಿಗೂ ಮುಂದಿನ ಏಳು ದಿನದೊಳಗೆ ಕಾರಣ ನೀಡುವಂತೆ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ಯೋಜನಾ ನಿರ್ದೇಶಕಿ ಬಿ.ಶುಭಾ ತಿಳಿಸಿದ್ದಾರೆ.

ಶ್ರೀರಾಂಪುರ ಪಟ್ಟಣ ಪಂಚಾಯಿತಿಯ ತೆರಿಗೆ ಹಣದ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ವಿರುದ್ಧ ಎ್ಐಆರ್ ದಾಖಲಿಸಲು ಹಾಗೂ ಪರೋಕ್ಷವಾಗಿ ಕಾರಣರಾದ ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಡಿಸಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+