ಮೈಸೂರಲ್ಲಿ ಮಂಗಳಮುಖಿಯರ ಶೌಚಾಲಯ, ದೇಶದಲ್ಲೇ ಪ್ರಥಮ?
ಮೈಸೂರು, ನವೆಂಬರ್ 23 : ಪ್ರತ್ಯೇಕ ಶೌಚಾಲಯವಿಲ್ಲದೆ ಕಿರಿಕಿರಿ, ಮುಜುಗರ ಅನುಭವಿಸುತ್ತಿದ್ದ ಮಂಗಳಮುಖಿಯರಿಗೆ ಮೈಸೂರಿನಲ್ಲಿ ಪರಿಹಾರ ಸಿಕ್ಕಿದೆ. ಅವರಿಗಾಗಿಯೇ ಪ್ರತ್ಯೇಕವಾದ ಮತ್ತು ಸುಸಜ್ಜಿತವಾದ ಶೌಚಾಲಯವನ್ನು ಮೈಸೂರಿನಲ್ಲಿ ಆರಂಭಿಸಲಾಗಿದೆ. ಇದು ಕರ್ನಾಟಕದಲ್ಲಿ ಮಾತ್ರವಲ್ಲ ದೇಶದಲ್ಲಿಯೇ ಪ್ರಥಮ!
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಮಂಗಳಮುಖಿಯರ ಸಂಖ್ಯೆ ಹೆಚ್ಚಾಗುತ್ತಿದೆ. ಎಲ್ಲೆಂದರಲ್ಲಿ ಅಡ್ಡಾಡುವ ಇವರು ಶೌಚದ ವಿಚಾರಕ್ಕೆ ಬಂದಾಗ ಮಾತ್ರ ಯಾತನೆ ಅನುಭವಿಸುವಂತಾಗಿತ್ತು. ನಗರದಲ್ಲಿ ಹಲವು ಶೌಚಾಲಯಗಳಿದ್ದರೂ ಅತ್ತ ಪುರುಷರ, ಇತ್ತ ಮಹಿಳೆಯರ ಶೌಚಾಲಯಕ್ಕೆ ಹೋಗಲಾಗದೆ ತಳಮಳ, ನೋವು ಅನುಭವಿಸುತ್ತಿದ್ದರು.
ಮಹಿಳೆಯರ ಶೌಚಾಲಯಕ್ಕೆ ಹೋದರೆ ಮುಜುಗರಗೊಳ್ಳುತ್ತಿದ್ದ ಮಹಿಳೆಯರು ಬೈದು ಹೊರಗೆ ಅಟ್ಟುತ್ತಿದ್ದರು. ಗಂಡಸರ ಶೌಚಾಲಯದೊಳಗೆ ಹೋದರೆ ಮಂಗಳಮುಖಿಯರೇ ಮಾನಸಿಕ ಹಿಂಸೆ ಅನುಭವಿಸಬೇಕಾಗಿತ್ತು. ಶೌಚಾಲಯದ ನಿರ್ವಹಣೆ ಹೊತ್ತವರು ತೃತೀಯ ಲಿಂಗಿಗಳು ಶೌಚಾಲಯದತ್ತ ಸುಳಿಯದಂತೆ ನೋಡಿಕೊಳ್ಳುತ್ತಿದ್ದರು. ಇದೆಲ್ಲದರ ತೊಂದರೆಯಿಂದಾಗಿ ಮಂಗಳಮುಖಿಯರು ನಿರ್ಜನ ಪ್ರದೇಶ ಹುಡುಕಿಕೊಂಡು ಹೋಗಿ ಅಲ್ಲಿ ದೇಹಬಾಧೆಯನ್ನು ನೀಗಿಸಿಕೊಳ್ಳುತ್ತಿದ್ದರು. ['ನಾವು ಮನುಷ್ಯರು, ನಮ್ಮನ್ನು ಘನತೆಯಿಂದ ಬದುಕಲು ಬಿಡಿ']

ಇಡೀ ದೇಶದಾದ್ಯಂತ ಸ್ವಚ್ಛತಾ ಆಂದೋಲನ ಹಮ್ಮಿಕೊಂಡು ಜನರಿಗೆ ಶೌಚಾಲಯದ ಅರಿವು ಮೂಡಿಸುತ್ತಿದ್ದರೆ, ಇತ್ತ ತೃತೀಯ ಲಿಂಗಿಗಳಿಗೆ ಎಲ್ಲೂ ಪ್ರತ್ಯೇಕ ಶೌಚಾಲಯದ ವ್ಯವಸ್ಥೆ ಇಲ್ಲದಿರುವ ಬಗ್ಗೆ ಮತ್ತು ಆ ವಿಚಾರದಲ್ಲಿ ಅನುಭವಿಸುತ್ತಿರುವ ತೊಂದರೆ ಬಗ್ಗೆ ಮಂಗಳಮುಖಿಯರು ಜಿಪಂ ಸಭೆಯಲ್ಲಿ ಪ್ರಸ್ತಾಪಿಸಿದ್ದರು. ಶೌಚಾಲಯದ ವ್ಯವಸ್ಥೆಯನ್ನು ಮಾಡಿಕೊಡುವಂತೆ ಜಿಪಂ ಅಧ್ಯಕ್ಷರಿಗೆ ಮನವಿ ಸಲ್ಲಿಸಿದ್ದರು.
ಇದಕ್ಕೆ ಸ್ಪಂದಿಸಿದ ಜಿಪಂ ಅಧ್ಯಕ್ಷೆ ಪುಷ್ಪಾ ಅಮರ್‌ನಾಥ್ ಅವರು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಸಾರ್ವಜನಿಕ ಸ್ಥಳವಾದ ಬಸ್ ಮತ್ತು ರೈಲ್ವೆ ನಿಲ್ದಾಣದಲ್ಲಿ ಶೌಚಾಲಯ ನಿರ್ಮಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು. ಅದರಂತೆ ಮೈಸೂರು ನಗರ ಬಸ್ ನಿಲ್ದಾಣದಲ್ಲಿ ಶೌಚಾಲಯ ನಿರ್ಮಿಸುವ ಕಾರ್ಯಕ್ಕೆ ಮುಂದಾದ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಅದನ್ನು ಪೂರ್ಣಗೊಳಿಸಿ ಮಂಗಳಮುಖಿಯರ ಉಪಯೋಗಕ್ಕೆ ನೀಡಿದ್ದಾರೆ.
ಈ ಸೌಲಭ್ಯದಿಂದ ಮಂಗಳಮುಖಿಯರು (ಲೈಂಗಿಕ ಅಲ್ಪಸಂಖ್ಯಾತರು) ಖುಷಿಯಾಗಿದ್ದಾರೆ. ಗ್ರಾಮಾಂತರ ಬಸ್ ನಿಲ್ದಾಣ ಮತ್ತು ರೈಲ್ವೆ ನಿಲ್ದಾಣದಲ್ಲಿಯೂ ನಿರ್ಮಿಸಿದರೆ ಇನ್ನಷ್ಟು ಅನುಕೂಲವಾಗುತ್ತದೆ ಎಂಬ ಅನಿಸಿಕೆಯನ್ನು ವ್ಯಕ್ತಪಡಿಸಿದ್ದಾರೆ. [ಪಬ್ಲಿಕ್ ಟಾಯ್ಲೆಟ್ ನಿರ್ಮಾಣದಲ್ಲಿ ಕರ್ನಾಟಕ ನಂ.5]
ಈಗಾಗಲೇ ಮೈಸೂರಿನಲ್ಲಿ ಸುಮಾರು 3 ಸಾವಿರ ಮಂಗಳಮುಖಿಯರಿದ್ದು ಅವರ ಪೈಕಿ 1250 ಮಂದಿ ಮೈಸೂರು ನಗರದಲ್ಲೇ ವಾಸ ಮಾಡುತ್ತಿದ್ದಾರೆ. ಹೀಗಾಗಿ ಅವರಿಗೆ ಪ್ರತ್ಯೇಕ ಶೌಚಾಲಯ ನಿರ್ಮಿಸಿರುವುದು ಪ್ರಶಂಸನೀಯ. ಅದು ಏನೇ ಇರಲಿ ಇದುವರೆಗೆ ಮಂಗಳಮುಖಿಯರಿಗೆ ಪ್ರತ್ಯೇಕ ಶೌಚಾಲಯವಿಲ್ಲ ಎಂಬ ಕೊರಗು ಮೈಸೂರಿನಲ್ಲಿ ನೀಗಿದಂತಾಗಿದೆ.
-
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ












Click it and Unblock the Notifications