• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಪುಲ್ವಾಮಾ ದಾಳಿ; ಮೈಸೂರಲ್ಲಿ ಹುತಾತ್ಮ ಯೋಧರ ಸ್ಮರಣೆ

By ಮೈಸೂರು ಪ್ರತಿನಿಧಿ
|

ಮೈಸೂರು, ಫೆಬ್ರವರಿ 14; ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಫೆಬ್ರವರಿ 14ರಂದು ನಡೆದ ಉಗ್ರರ ದಾಳಿಯಲ್ಲಿ ಸಿಆರ್‌ಪಿಎಫ್ ಯೋಧರು ಹುತಾತ್ಮರಾಗಿದ್ದರು. ಈ ದಾಳಿ ನಡೆದು ಇಂದಿಗೆ ಎರಡು ವರ್ಷ ಕಳೆದಿದೆ. ದೇಶದ ಜನರು ಹುತಾತ್ಮರಾಧ ಯೋಧರನ್ನು ಸ್ಮರಿಸಿಕೊಳ್ಳುತ್ತಿದ್ದಾರೆ.

ಭಾನುವಾರ ಮೈಸೂರು ನಗರದ ಫೀಲ್ಡ್ ಮಾರ್ಷಲ್ ಕೆ. ಎಂ. ಕಾರ್ಯಪ್ಪ ವೃತ್ತದಲ್ಲಿ ಅಪೂರ್ವ ಸ್ನೇಹ ಬಳಗ ಹಾಗೂ ಪ್ರಜ್ಞಾವಂತ ನಾಗರಿಕ ವೇದಿಕೆ ವತಿಯಿಂದ ದೇಶ ಪ್ರೇಮ ದಿನ ಹಾಗೂ ಪುಲ್ವಾಮಾ ದಾಳಿ ಕರಾಳ ದಿನ ಆಚರಿಸಲಾಯಿತು.

ಪುಲ್ವಾಮಾ ದಾಳಿ; ಹುತಾತ್ಮ ಗುರು ಸಮಾಧಿಗೆ ಪ್ರತ್ಯೇಕ ಪೂಜೆ ಪುಲ್ವಾಮಾ ದಾಳಿ; ಹುತಾತ್ಮ ಗುರು ಸಮಾಧಿಗೆ ಪ್ರತ್ಯೇಕ ಪೂಜೆ

ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರ ಭಾವಚಿತ್ರ ಹಿಡಿದು ಅವರ ತ್ಯಾಗ ಬಲಿದಾನವನ್ನು ಸ್ಮರಿಸಲಾಯಿತು. ಪ್ರೇಮಿಗಳ ದಿನಾಚರಣೆಗೆ ಧಿಕ್ಕಾರ, ವಿಶ್ವ ದೇಶ ಪ್ರೇಮಿಗಳಿಗೆ ಜಯವಾಗಲಿ, ಭಾರತ್ ಮಾತಾಕಿ ಜೈ, ವಂದೇ ಮಾತರಂ, ವೀರ ಯೋಧರು ಅಮರರಾಗಲಿ. ಸೈನಿಕರ ದಿನಾಚರಣೆ ಗೆ ಜಯವಾಗಲಿ ಎಂಬ ಘೋಷಣೆಗಳನ್ನು ಕೂಗಲಾಯಿತು.

ಪುಲ್ವಾಮಾ ದಾಳಿ ಕುರಿತು ಸತ್ಯ ಬಾಯ್ಬಿಟ್ಟ ಮಂತ್ರಿಗೆ ಪಾಕ್ ಪ್ರಧಾನಿ ಸಮನ್ಸ್ ಪುಲ್ವಾಮಾ ದಾಳಿ ಕುರಿತು ಸತ್ಯ ಬಾಯ್ಬಿಟ್ಟ ಮಂತ್ರಿಗೆ ಪಾಕ್ ಪ್ರಧಾನಿ ಸಮನ್ಸ್

ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣ್ ಗೌಡ ಮಾತನಾಡಿ, "ಭಾರತ ದೇಶ ಪುರಾತನವಾದದ್ದು, ಪ್ರೇಮಿಗಳ ದಿನಾಚರಣೆ ನಮ್ಮ ಸಂಸ್ಕೃತಿಯಲ್ಲ. ಪ್ರೀತಿ ಪ್ರೇಮ ಎನ್ನುವುದು ತಂದೆ-ತಾಯಿ, ಗುರು-ಹಿರಿಯರು, ದೇಶದ ಬೆನ್ನಲುಬಾದ ಸೈನಿಕರು ಮತ್ತು ರೈತರ ಮೇಲೆ ಇರಬೇಕು" ಎಂದರು.

 ಪುಲ್ವಾಮಾ ದಾಳಿ ನಾವು ಮಾಡಿದ್ದೆಂದು ಹೇಳಿಯೇ ಇಲ್ಲ: ಪಾಕ್ ಸಚಿವ ಯೂಟರ್ನ್ ಪುಲ್ವಾಮಾ ದಾಳಿ ನಾವು ಮಾಡಿದ್ದೆಂದು ಹೇಳಿಯೇ ಇಲ್ಲ: ಪಾಕ್ ಸಚಿವ ಯೂಟರ್ನ್

ಅಮಿತ್ ಶಾ ನಮನ; ಕೇಂದ್ರ ಗೃಹ ಸಚಿವ ಅಮಿತ್ ಶಾ ಪುಲ್ವಾಮಾ ದಾಳಿಯಲ್ಲಿ ಮೃತಪಟ್ಟ ಸಿಆರ್‌ಪಿಎಫ್ ಯೋಧರಿಗೆ ನಮನ ಸಲ್ಲಿಸಿದರು. "ಈ ದಾಳಿಯಲ್ಲಿ ಮೃತಪಟ್ಟವರ ತ್ಯಾಗವನ್ನು ಭಾರತದ ಜನರು ಎಂದೂ ಮರೆಯುವುದಿಲ್ಲ" ಎಂದರು.

ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜೈಷ್-ಎ-ಮೊಹಮ್ಮದ್ ಪುಲ್ವಾಮಾದಲ್ಲಿ ಸಿಆರ್‌ಪಿಎಫ್ ಯೋಧರು ತೆರಳುತ್ತಿದ್ದ ಬಸ್‌ಗೆ ಸ್ಫೋಟಕ ತುಂಬಿದ ಕಾರನ್ನು ಡಿಕ್ಕಿ ಹೊಡೆಸಿ ಆತ್ಮಾಹುತಿ ದಾಳಿ ನಡೆಸಿತ್ತು. ಈ ದಾಳಿಯಲ್ಲಿ 40 ಯೋಧರು ಹುತಾತ್ಮರಾಗಿದ್ದರು.

English summary
Various organisations remembered the martyrs of Pulwama attack on Sunday at Cariappa circle, Mysuru. Today 2nd anniversary of Pulwama attack.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X