ಮೈಸೂರಿನ ನೂತನ ಮೇಯರ್ ಆಗಿ ಪುಷ್ಪಲತಾ ಜಗನ್ನಾಥ್ ಆಯ್ಕೆ

ಮೈಸೂರು, ನವೆಂಬರ್.17: ಮೈಸೂರಿನ ನೂತನ ಮೇಯರ್ ಆಗಿ ಪುಷ್ಪಲತಾ ಜಗನ್ನಾಥ್ ಆಯ್ಕೆಯಾಗಿದ್ದಾರೆ. ಚುನಾವಣಾ ಅಧಿಕಾರಿ ವಿ.ಯಶ್ವಂತ್ ನೇತೃತ್ವದಲ್ಲಿ ನಡೆದ ಚುನಾವಣೆಯಲ್ಲಿ ಕೈ ಎತ್ತುವ ಮೂಲಕ ಮೇಯರ್ ಆಯ್ಕೆ ಪ್ರಕ್ರಿಯೆ ನಡೆದಿದೆ.

ಕಾಂಗ್ರೆಸ್, ಜೆಡಿಎಸ್ ಬೆಂಬಲದೊಂದಿಗೆ ನಡೆದ ಚುನಾವಣಾ ಆಯ್ಕೆ ಪ್ರಕ್ರಿಯೆಯಲ್ಲಿ 48 ಮತಗಳನ್ನು ಪಡೆದ ಪುಷ್ಪಲತಾ ಜಗನ್ನಾಥ್ ನೂತನ ಮೇಯರ್ ಆಗಿ ಆಯ್ಕೆಯಾಗಿದ್ದಾರೆ.

ಬಿಜೆಪಿ ಪಕ್ಷದ ಸುನಂದ ಪಾಲನೇತ್ರ 24 ಮತ ಪಡೆದಿದ್ದಾರೆ.

Pushpalatha Jagannath is the new Mayor of Mysore

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಪಕ್ಷದ ಮೇಯರ್ ಅಭ್ಯರ್ಥಿಯಾಗಿ ಪುಷ್ಪಲತಾ ಜಗನ್ನಾಥ್, ಉಪಮೇಯರ್ ಸ್ಥಾನಕ್ಕೆ ಜೆಡಿಎಸ್ ನ ಶಫಿ ಅಹಮ್ಮದ್ ಶನಿವಾರ ಬೆಳಗ್ಗೆ (ನವೆಂಬರ್. 17) ನಾಮಪತ್ರ ಸಲ್ಲಿಸಿದ್ದರು. ಹಾಗೆಯೇ ಬಿಜೆಪಿಯ ಮೇಯರ್ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಸುನಂದ ಹಾಗೂ ಉಪಮೇಯರ್ ಸ್ಥಾನಕ್ಕೆ ಸತೀಶ್ ನಾಮಪತ್ರ ಸಲ್ಲಿಸಿದ್ದರು.

65 ಸದಸ್ಯ ಬಲದ ಪಾಲಿಕೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಒಟ್ಟು 37, ಬಿಜೆಪಿ 22 ಸ್ಥಾನಗಳನ್ನು ಹೊಂದಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+