ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಧಾನ ಪರಿಷತ್ ಚುನಾವಣೆಗೆ ಪುಟ್ಟಣ್ಣ ಬಿಜೆಪಿ ಅಭ್ಯರ್ಥಿ: ಯಡಿಯೂರಪ್ಪ

|
Google Oneindia Kannada News

ಮೈಸೂರು, ನವೆಂಬರ್ 26: ಉಪ ಚುನಾವಣೆ ಹೊಸ್ತಿಲಲ್ಲೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ.

'ಮುಂಬರುವ ವಿಧಾನಪರಿಷತ್ ಚುನಾವಣೆಯಲ್ಲಿ ಪುಟ್ಟಣ್ಣ ಅವರೇ ಬಿಜೆಪಿ ಅಭ್ಯರ್ಥಿ' ಎಂದು ಘೋಷಣೆ ಮಾಡಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುಟ್ಟಣ್ಣ ಅವರು ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಮೂರು ಬಾರಿ ಜೆಡಿಎಸ್‌ನಿಂದ ಪ್ರತಿನಿಧಿಸಿದ್ದರು. ಅವರು ಗೆಲ್ಲುವ ಅಭ್ಯರ್ಥಿ ಈ ಬಾರಿ ಬಿಜೆಪಿಯಿಂದ ಪ್ರತಿನಿಧಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

 ನಾನು ಮತ್ತೆ ಸಿಎಂ ಆಗ್ತೀನಿ ಇದು ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ: ಸಿದ್ದರಾಮಯ್ಯ ನಾನು ಮತ್ತೆ ಸಿಎಂ ಆಗ್ತೀನಿ ಇದು ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ: ಸಿದ್ದರಾಮಯ್ಯ

''ಸಿದ್ದರಾಮಯ್ಯ ಅವರು ವಿರೋಧ ಪಕ್ಷ ಸ್ಥಾನದಲ್ಲೇ ಇರಬೇಕು'' ಎಂದು ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಹೇಳಿದ್ದಾರೆ. ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಯಡಿಯೂರಪ್ಪ ಅವರು ವಿರೋಧ ಪಕ್ಷ ಸ್ಥಾನದಲ್ಲೇ ಇರುತ್ತಾರೆ, ಮಧ್ಯಂತರ ಚುನಾವಣೆ ಬರುವ ಸಾಧ್ಯತೆಯೇ ಇಲ್ಲ ಎಂದು ಹೇಳಿದ್ದಾರೆ.

ವಿಧಾನ ಪರಿಷತ್ ಚುನಾವಣೆಯಲ್ಲಿ ಪುಟ್ಟಣ್ಣ ಬಿಜೆಪಿ ಅಭ್ಯರ್ಥಿ

ವಿಧಾನ ಪರಿಷತ್ ಚುನಾವಣೆಯಲ್ಲಿ ಪುಟ್ಟಣ್ಣ ಬಿಜೆಪಿ ಅಭ್ಯರ್ಥಿ

ಮುಂಬರುವ ವಿಧಾನಪರಿಷತ್ ಚುನಾವಣೆಯಲ್ಲಿ ಪುಟ್ಟಣ್ಣ ಅವರೇ ಬಿಜೆಪಿ ಅಭ್ಯರ್ಥಿ' ಎಂದು ಘೋಷಣೆ ಮಾಡಿದ್ದಾರೆ. ನಾನು ಪ್ರಚಾರಕ್ಕಾಗಿ ಏನನ್ನು ಹೇಳುತ್ತಿಲ್ಲ, 15ಕ್ಕೆ 15 ಸ್ಥಾನ ಗೆಲ್ಲುವ ಭರವಸೆ ಇದೆ, ಎಲ್ಲವನ್ನೂ ಅಳೆದು ತೋಗಿಯೇ ಮಾತನಾಡುತ್ತಿದ್ದೇನೆ. ಕಾಂಗ್ರೆಸ್ ಮುಕ್ತ ರಾಜ್ಯವನ್ನು ನಿರ್ಮಾಣ ಮಾಡುತ್ತೇವೆ ಎಂದು ಭರವಸೆ ವ್ಯಕ್ತಪಡಿಸಿದರು.

ಮಧ್ಯಂತರ ಚುನಾವಣೆ ಇಲ್ಲ

ಮಧ್ಯಂತರ ಚುನಾವಣೆ ಇಲ್ಲ

ರಾಜ್ಯದ ಜನರಿಗೆ ಚುನಾವಣೆ ಬೇಡವಾಗಿದೆ, ಯಾವುದೇ ಕಾರಣಕ್ಕೂ ಮಧ್ಯಂತರ ಚುನಾವಣೆ ನಡೆಯುವುದಿಲ್ಲ, ರಾಜ್ಯದ ಜನತೆ ಬಿಜೆಪಿಯನ್ನು ಬೆಂಬಲಿಸುತ್ತಾರೆ ಎನ್ನುವ ನಂಬಿಕೆ ನನಗಿದೆ. ಹಾಗೆಯೇ ಸಿದ್ದರಾಮಯ್ಯ ಅವರು ವಿರೋಧ ಪಕ್ಷ ಸ್ಥಾನದಲ್ಲೇ ಮುಂದುವರೆಯಲಿದ್ದಾರೆ ಎಂದು ಹೇಳಿದರು.

ಸುಮಲತಾ ಆಪ್ತರನ್ನು ಭೇಟಿ ಮಾಡಿದ ಯಡಿಯೂರಪ್ಪ

ಸುಮಲತಾ ಆಪ್ತರನ್ನು ಭೇಟಿ ಮಾಡಿದ ಯಡಿಯೂರಪ್ಪ

ಕೆಆರ್‌ ಪೇಟೆ ಉಪ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸುವಂತೆ ಸುಮಲತಾ ಬೆಂಬಲಿಗರಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಮನವಿ ಮಾಡಿದ್ದಾರೆ. ವಿಮಾನ ನಿಲ್ದಾಣದಲ್ಲಿ ಸಂಸದೆ ಸುಮಲತಾ ಅಂಬರೀಶ್ ಆಪ್ತರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.

ಸಿದ್ದರಾಮಯ್ಯ ಮಾತಿಗೆ ಬಿಡಿಗಾಸು ಕಿಮ್ಮತ್ತಿಲ್ಲ

ಸಿದ್ದರಾಮಯ್ಯ ಮಾತಿಗೆ ಬಿಡಿಗಾಸು ಕಿಮ್ಮತ್ತಿಲ್ಲ

ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರ ಮಾತಿಗೆ ಜನರು ಬಿಡಿಗಾಸಿನ ಕಿಮ್ಮತ್ತು ನೀಡುತ್ತಿಲ್ಲ.ಮಧ್ಯಂತರ ಚುನಾವಣೆ ಬರುವುದು, ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗುವುದು ಎಲ್ಲವೂ ಕನಸಿನ ಮಾತು. ಈ ಬಾರಿಯ ಉಪ ಚುನಾವಣೆಯಲ್ಲಿ ನಾವು 15ಕ್ಕೆ 15ಸ್ಥಾನಗಳನ್ನೂ ಗೆಲ್ಲುತ್ತೇವೆ ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅವರ ಆಸೆ ಈಡೇರುವುದಿಲ್ಲ ಎಂದು ತಿಳಿಸಿದರು.

English summary
Chief Minister BS Yeddyurappa says Puttanna is Candidate for next council elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X