ಮಂಡ್ಯ ಜೆಡಿಎಸ್ ಭದ್ರಕೋಟೆ ಎಂದು ಮತ್ತೆ ಸಾಬೀತಾಗಿದೆ: ಪುಟ್ಟರಾಜು
ಮೈಸೂರು, ನವೆಂಬರ್. 06: ಮಂಡ್ಯ ಲೋಕಸಭಾ ಕ್ಷೇತ್ರ ಉಪಚುನಾವಣಾ ಫಲಿತಾಂಶದ ಮೂಲಕ ಜಿಲ್ಲೆ ಜೆಡಿಎಸ್ ಪಕ್ಷದ ಭದ್ರಕೋಟೆ ಎಂಬುದನ್ನು ಮತ್ತೊಮ್ಮೆ ಸಾಬೀತು ಪಡಿಸಿದೆ ಎಂದು ಸಣ್ಣ ನೀರಾವರಿ ಸಚಿವ ಪುಟ್ಟರಾಜು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್-ಜೆಡಿಎಸ್ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡ ಬಳಿಕ ಮಂಡ್ಯದಲ್ಲಿ ಒಮ್ಮತದ ಅಭ್ಯರ್ಥಿ ನಿಲ್ಲಿಸಲಾಗಿತ್ತು. ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಶಿವರಾಮೇಗೌಡ ಬಹುಮತದಿಂದ ವಿಜಯ ಸಾಧಿಸಿದ್ದಾರೆ.
ಇದು ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ನಾಯಕತ್ವಕ್ಕೆ ಜನ ನೀಡಿರುವ ಆಶೀರ್ವಾದ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಕಳೆದ ಬಾರಿ ಒಟ್ಟಾರೆ ಎಂಟು ವಿಧಾನಸಭಾ ಕ್ಷೇತ್ರಗಳಲ್ಲೂ ಜೆಡಿಎಸ್ 2, 80,000 ಮತಗಳ ಮುನ್ನಡೆ ಸಾಧಿಸಿತ್ತು. ಅದೇ ರೀತಿ ಈ ಚುನಾವಣೆಯಲ್ಲಿ ಮತದಾರರು ಜೆಡಿಎಸ್ ಗೆ ಗೆಲುವು ಸಾಧಿಸಲು ಸಹಕರಿಸಿದ್ದು ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.












Click it and Unblock the Notifications