ಮೈಸೂರು ನಗರದ ಹೃದಯ ಭಾಗದಲ್ಲಿ ಹೆಬ್ಬಾವು ಸೆರೆ
ಮೈಸೂರು, ಸೆಪ್ಟೆಂಬರ್ 13: ಮೈಸೂರು ನಗರದ ಜನನಿಬಿಡ ಪ್ರದೇಶವಾದ ಕುವೆಂಪು ನಗರದಲ್ಲಿ ಶನಿವಾರ ರಾತ್ರಿ ಬೃಹತ್ ಗಾತ್ರದ ಹೆಬ್ಬಾವು ಕಾಣಿಸಿಕೊಂಡು ಆತಂಕ ಮೂಡಿಸಿತು.
ಮೈಸೂರಿನ ಕುವೆಂಪು ನಗರದ ಎಂ ಬ್ಲಾಕ್ ಸಮೀಪದಲ್ಲಿರುವ ಪಂಚಮಂತ್ರ ರಸ್ತೆ ಬದಿಯಲ್ಲಿ ಅಂದಾಜು 7 ರಿಂದ 8 ಅಡಿಗಳಷ್ಟು ಉದ್ದದ ಹೆಬ್ಬಾವು ಕಾಣಿಸಿಕೊಂಡಿದ್ದು, ನಂತರ ಉರಗ ತಜ್ಞರಿಂದ ಸೆರೆ ಹಿಡಿಯಲಾಗಿದೆ.
ರಸ್ತೆ ಬದಿಯಲ್ಲಿ ಭಾರೀ ಗಾತ್ರದ ಹೆಬ್ಬಾವು ಇರುವುದನ್ನು ಗಮನಿಸಿದ ಸ್ಥಳೀಯರು, ಕೂಡಲೇ ಉರಗ ತಜ್ಞ ಸ್ನೇಕ್ ಶ್ಯಾಮ್ ಅವರಿಗೆ ವಿಷಯ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಸ್ನೇಕ್ ಶ್ಯಾಮ್, ರಸ್ತೆಪಕ್ಕದ ಖಾಲಿ ಜಾಗದಲ್ಲಿದ್ದ ಗಿಡಗಳ ಮಧ್ಯದಲ್ಲಿ ಅಡಗಿ ಕುಳಿತಿದ್ದ ಹೆಬ್ಬಾವನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಹೆಬ್ಬಾವು ಸೆರೆಹಿಡಿಯಲು ಸ್ನೇಕ್ ಶ್ಯಾಮ್ ಅವರೊಂದಿಗೆ ಅವರ ಪುತ್ರ ಸೂರ್ಯ ಕೂಡ ಸಾಥ್ ನೀಡಿದರು. ಸದಾ ಜನರಿಂದ ಹಾಗೂ ವಾಹನ ದಟ್ಟಣೆ ಹೆಚ್ಚಾಗಿರುವ ಪಂಚಮಂತ್ರ ರಸ್ತೆಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಕಾಣಿಸಿಕೊಂಡಿದ್ದು, ಸ್ಥಳೀಯ ಜನರಲ್ಲಿ ಆತಂಕ ಮೂಡಿಸಿತ್ತು.












Click it and Unblock the Notifications