ಮೈಸೂರಿನಿಂದ ಕೇರಳದ ವಯನಾಡ್‌ಗೆ ತೆರಳಿದ ರಾಹುಲ್ ಗಾಂಧಿ
ಮೈಸೂರು: ಕೇರಳದ ವೈನಾಡು ಚುನಾವಣಾ ಪ್ರಚಾರ ತೆರಳಲು ಸೋಮವಾರ ರಾತ್ರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ಸಿನ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಮೈಸೂರಿನ ವಿಮಾನ ನಿಲ್ದಾಣಕ್ಕೆ ಬಂದಿಳಿದರು.
ವಿಮಾನ ನಿಲ್ದಾಣದ ವಿಐಪಿ ಕೊಠಡಿಯಲ್ಲಿ ಮೈಸೂರಿನ ಮೈಲಾರಿ ದೋಸೆ ಸೇವಿಸಿ ಸುಮಾರು ಅರ್ಧ ಗಂಟೆಗಳ ಕಾಲ ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ.ಬಿ.ಜೆ. ವಿಜಯಕುಮಾರ್ ಅವರೊಂದಿಗೆ ಮೈಸೂರು ಹಾಗೂ ಕೊಡಗು ಲೋಕಸಭಾ ಕ್ಷೇತ್ರ ಮತ್ತು ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದ ಚುನಾವಣಾ ವರದಿ ಪಡೆದರು. ಇದೇ ಸಂದರ್ಭದಲ್ಲಿ ರಾಷ್ಟ್ರೀಯ ವಿದ್ಯಾರ್ಥಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಾಗೇಶ್ ಕರಿಯಪ್ಪ ಜೊತೆಗಿದ್ದರು.

ರಾಹುಲ್ ಗಾಂಧಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದರು. ಚುನಾವಣೆ ಹಿನ್ನೆಲೆ ಹಾಗೂ ಖಾಸಗಿ ಭೇಟಿಯಾದ ಹಿನ್ನೆಲೆಯಲ್ಲಿ ಮೈಸೂರು ಕಾಂಗ್ರೆಸ್ ವಲಯಕ್ಕೆ ಯಾವುದೇ ಮಾಹಿತಿ ಇಲ್ಲದ ಕಾರಣ ದೊಡ್ಡ ಕಾಂಗ್ರೆಸ್ ಮುಖಂಡರ ದಂಡು ವಿಮಾನ ನಿಲ್ದಾಣದಲ್ಲಿ ಕಾಣಲಿಲ್ಲ.
ಈ ವೇಳೆ ಮುಕ್ಕಾಲು ಗಂಟೆಗಳ ಕಾಲ ಏರ್‌ಪೋರ್ಟ್‌ನಲ್ಲಿದ್ದ ರಾಹುಲ್ ಗಾಂಧಿ ಅವರು ಬಳಿಕ ವೈನಾಡುವಿಗೆ ಹೆಲಿಕಾಪ್ಟರ್‌ನಲ್ಲಿ ತೆರಳಿದರು.
ಲೋಕಸಭಾ ಚುನಾವಣೆ ಪ್ರಚಾರ ಸಂಬಂಧ ಕೇರಳದ ವೈನಾಡುವಿಗೆ ಭೇಟಿ ನೀಡುವ ಮುನ್ನ ಮೈಸೂರಿಗೆ ಆಗಮಿಸಿದ್ದ ರಾಹುಲ್ ಗಾಂಧಿ ಅವರು ಲೋಕಸಭಾ ಚುನಾವಣೆಯ ಬಗ್ಗೆ ಮಾಹಿತಿ ಪಡೆದರು. ಅಲ್ಲದೇ ಸಿಎಂ ಸಿದ್ದರಾಮಯ್ಯನವರ ಆರೋಗ್ಯವನ್ನು ಸಹ ರಾಹುಲ್ ಗಾಂಧಿ ವಿಚಾರಿಸಿದರು ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯ್ ಕುಮಾರ್ ತಿಳಿಸಿದ್ದಾರೆ.












Click it and Unblock the Notifications