ಮಾ. 24ರಂದು ಮೈಸೂರಿನಲ್ಲಿ ರಾಹುಲ್ ಗಾಂಧಿ ಪ್ರಚಾರ
ಮೈಸೂರು, ಮಾರ್ಚ್ 21 : ಜೆಡಿಎಸ್ ನ ಭದ್ರ ಕೋಟೆಯಾಗಿರುವ ಮೈಸೂರು ವಿಭಾಗದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮಾರ್ಚ್ 24ರಂದು ಪ್ರವಾಸ ಮಾಡಲಿದ್ದಾರೆ .
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮೈಸೂರು ಭಾಗದಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದು, ಮಾ.24ರಂದು ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಶೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವರು. ನಂತರ ಮಹಾರಾಣಿ ಕಾಲೇಜಿನ ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸುವರು.
'ದುರ್ಗೆ' ಇಂದಿರಾ ಗೆದ್ದಿದ್ದ ಕಾಫಿ ನಾಡಲ್ಲಿ ಹೆಜ್ಜೆ ಮೂಡಿಸಿದ ರಾಹುಲ್
ಬಳಿಕ ಹೆಲಿಕಾಪ್ಟರ್ ನಲ್ಲಿ ಚಾಮರಾಜನಗರಕ್ಕೆ ತೆರಳುವರು. ಅಲ್ಲಿಂದ ಯಳಂದೂರು, ಕೊಳ್ಳೇಗಾಲಕ್ಕೆ ಭೇಟಿ ನೀಡಿ, ನಂತರ ಮಳವಳ್ಳಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸುವರು. ಬಳಿಕ ಮೈಸೂರಿಗೆ ಬಂದು ತಂಗುವರು. ಮಾ.25ರ ಬೆಳಿಗ್ಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಮತ್ತು ಹಿರಿಯ ಮುಖಂಡರ ಸಭೆಯಲ್ಲಿ ಪಾಲ್ಗೊಳ್ಳುವರು.
In Pics: ರೊಸಾರಿಯೋ ಚರ್ಚ್, ದರ್ಗಾ, ಕುದ್ರೋಳಿ ದೇವಾಲಯಕ್ಕೆ ರಾಹುಲ್ ಭೇಟಿ
ಮಧ್ಯಾಹ್ನ 12.30ಕ್ಕೆ ಹೆಲಿಕಾಪ್ಟರ್ ನಲ್ಲಿ ಕೆ.ಆರ್.ಪೇಟೆಗೆ ತೆರಳುವರು. ಬಳಿಕ ಪಾಂಡವಪುರ, ಶ್ರೀರಂಗಪಟ್ಟಣಕ್ಕೆ ಭೇಟಿ ನೀಡುವರು. ಸಂಜೆ 4.30ಕ್ಕೆ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ಬೃಹತ್ ರ್ಯಾಲಿಯಲ್ಲಿ ಪಾಲ್ಗೊಳ್ಳುವರು. ನಂತರ ಹೊಸದಿಲ್ಲಿಗೆ ವಾಪಸಾಗುವರು.
ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !