ದೀಪಾಲಂಕಾರದಿಂದ ಕಂಗೊಳಿಸುತ್ತಿದೆ ಮೈಸೂರಿನ ರೈಲ್ವೆ ಮ್ಯೂಸಿಯಂ

ಮೈಸೂರು, ಅಕ್ಟೋಬರ್ 15: ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ರೈಲ್ವೆ ಮ್ಯೂಸಿಯಂ ವಿದ್ಯುತ್ ದೀಪಗಳೊಂದಿಗೆ ಝಗಮಗಿಸುತ್ತಿದೆ.

ರೈಲ್ವೆ ಮ್ಯೂಸಿಯಂನ ಹೊರಾಂಗಣ ಮತ್ತು ಒಳಾಂಗಣದಲ್ಲಿ ವಿಶೇಷ ಎಲ್ ಇಡಿ ದೀಪಾಲಂಕಾರ ಮಾಡಲಾಗುತ್ತಿದೆ. ಉಗಿಬಂಡಿ, ಟಾಯ್ ರೈಲು, ರೈಲ್ ಬಸ್, ತರಬೇತಿ ಬೋಗಿಗಳಿಗೆ ದೀಪಾಲಂಕಾರ ಮಾಡಲಾಗಿದ್ದು, ಅ.17 ರಿಂದ 26ರವರೆಗೆ ದೀಪಾಲಂಕಾರದ ವ್ಯವಸ್ಥೆ ಇರಲಿದೆ. ಬೆಳಿಗ್ಗೆ 10 ರಿಂದ ರಾತ್ರಿ 8 ಗಂಟೆಯವರೆಗೆ ಪ್ರವಾಸಿಗರು ಭೇಟಿ ನೀಡಲು ಅವಕಾಶವನ್ನು ಕಲ್ಪಿಸಲಾಗಿದೆ. ದೊಡ್ಡವರಿಗೆ 50 ರೂ., 5-12 ವರ್ಷದ ಮಕ್ಕಳಿಗೆ 20 ರೂ. ಪ್ರವೇಶ ಶುಲ್ಕವಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

Mysuru: Railway Museum Decorated With Lighting On Behalf Of Dasara

ಮೈಸೂರು ವಿವಿಗೆ ದೀಪಾಲಂಕಾರ: ಮೈಸೂರು ವಿಶ್ವವಿದ್ಯಾನಿಲಯದ ಕಾರ್ಯಸೌಧ ಕ್ರಾಫರ್ಡ್ ಭವನವೂ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿದೆ. ಕ್ರಾಫರ್ಡ್ ಭವನದ ಆವರಣದಲ್ಲಿರುವ ಗಿಡಗಳ ಮೇಲೆ ಸಣ್ಣ ವಿದ್ಯುತ್ ದೀಪಗಳನ್ನು ಹಾಕಲಾಗಿದೆ.

Mysuru: Railway Museum Decorated With Lighting On Behalf Of Dasara

ದಸರಾ ಹಿನ್ನೆಲೆಯಲ್ಲಿ ನಗರದ ಪ್ರಮುಖ ವೃತ್ತಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗಿದ್ದು, ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+