ಮೈಸೂರು ರೈಲ್ವೆ ನಿಲ್ದಾಣದಲ್ಲೂ ಪ್ಲಾಟ್ ಫಾರಂ ಟಿಕೆಟ್ ದರ ಹೆಚ್ಚಳ

ಮೈಸೂರು, ಸೆಪ್ಟೆಂಬರ್ 29: ಬೆಂಗಳೂರಿನಲ್ಲಿ ಈಚೆಗೆ ರೈಲ್ವೆ ಪ್ಲಾಟ್‌ಫಾರಂ ಟಿಕೆಟ್ ದರವನ್ನು ಹೆಚ್ಚಳ ಮಾಡಲಾಗಿದ್ದು, ಇದೀಗ ಮೈಸೂರನಲ್ಲೂ ಪ್ಲಾಟ್ ಫಾರಂ ಟಿಕೆಟ್ ದರವನ್ನು ಏರಿಸಲಾಗಿದೆ.

ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣ ಸಾರ್ವಜನಿಕರ ಹಿತದೃಷ್ಟಿಯಿಂದ ಮೈಸೂರು ನಿಲ್ದಾಣದಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಪ್ಲಾಟ್‌ಫಾರ್ಮ್ ಟಿಕೆಟ್ ಶುಲ್ಕವನ್ನು 50 ರೂ.ಗೆ ಹೆಚ್ಚಿಸಲಾಗಿದ್ದು, ಈ ನಿಯಮ ಡಿಸೆಂಬರ್‌ 31 ರವರೆಗೆ ಜಾರಿಯಲ್ಲಿರಲಿದೆ ಎಂದು ತಿಳಿದುಬಂದಿದೆ.

ಸಾರ್ವಜನಿಕರು ಅನವಶ್ಯಕವಾಗಿ ಪ್ಲಾಟ್‌ಫಾರ್ಮ್‌ ಪ್ರವೇಶಿಸುವುದನ್ನು ನಿಯಂತ್ರಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಶುಲ್ಕ ಹೆಚ್ಚಳದಿಂದ ಪ್ಲಾಟ್‌ಫಾರ್ಮ್‌ಗಳಲ್ಲಿ ಜನದಟ್ಟಣೆ ತಪ್ಪಿಸಬಹುದು ಎಂಬ ಉದ್ದೇಶ ಇದರ ಹಿಂದಿದೆ.

Mysuru: Railway Platform Ticket Price Increased To 50 Rs

ಕೆಎಸ್ ಆರ್, ಬೆಂಗಳೂರು ಕಂಟೋನ್ಮೆಂಟ್ ಮತ್ತು ಯಶವಂತಪುರ ರೈಲ್ವೆ ನಿಲ್ದಾಣಗಳಲ್ಲಿ ಪ್ಲಾಟ್ ಫಾರಂ ಟಿಕೆಟ್ ದರವನ್ನು 10 ರಿಂದ 50 ರೂಪಾಯಿಗೆ ಹೆಚ್ಚಿಸಲಾಗಿತ್ತು. ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ರೈಲ್ವೆ ನಿಲ್ದಾಣಗಳಲ್ಲಿ ಜನಸಂದಣಿ ನಿಯಂತ್ರಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಬೆಂಗಳೂರು ಸೇರಿದಂತೆ ದೇಶದ ಕೆಲವು ರೈಲ್ವೆ ನಿಲ್ದಾಣಗಳಲ್ಲಿ ಪ್ಲಾಟ್‌ಫಾರ್ಮ್‌ ಟಿಕೆಟ್ ದರವನ್ನು ಸೆಪ್ಟೆಂಬರ್ 12ರಿಂದ ಬರೋಬ್ಬರಿ ಐದು ಪಟ್ಟು ಹೆಚ್ಚಿಸಿತ್ತು. ಕೇಂದ್ರ ವಲಯದಲ್ಲಿ ಮುಂಬೈ (ಸಿಎಸ್ ‌ಟಿ), ಭೂಸಾವಲ್, ನಾಗ್ಪುರ, ಸೋಲಾಪುರ, ಪುಣೆ - ಐದು ವಿಭಾಗಗಳನ್ನು ಒಳಗೊಂಡ ಎಲ್ಲಾ ನಿಲ್ದಾಣಗಳನ್ನು ಒಳಗೊಂಡಂತೆ ದೇಶದ ಸುಮಾರು 250 ರೈಲ್ವೆ ನಿಲ್ದಾಣಗಳಲ್ಲಿ ಪ್ಲಾಟ್ ಫಾರಂ ಶುಲ್ಕವನ್ನು ಹೆಚ್ಚಿಸಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+