'ಮ್ಯಾನ್ ವರ್ಸಸ್ ವೈಲ್ಡ್' ಚಿತ್ರೀಕರಣ ಮುಗಿಸಿ ರಜನಿ ವಾಪಸ್

ಮೈಸೂರು, ಜನವರಿ 28 : ಸೂಪರ್ ಸ್ಟಾರ್ ರಜನಿಕಾಂತ್ 'ಮ್ಯಾನ್ ವರ್ಸಸ್ ವೈಲ್ಡ್' ಕಾರ್ಯಕ್ರಮದ ಚಿತ್ರೀಕರಣ ಮುಕ್ತಾಯಗೊಳಿಸಿದರು. ಬಂಡೀಪುರದಲ್ಲಿ ಬೇರ್ ಗ್ರಿಲ್ಸ್ ಜೊತೆಗೆ ಚಿತ್ರೀಕರಣ ಮುಗಿಸಿ ಚೆನ್ನೈಗೆ ಮರಳಿದರು.

ಮಂಗಳವಾರ ಬೇರ್ ಗ್ರಿಲ್ಸ್ ಜೊತೆಗಿನ 'ಮ್ಯಾನ್ ವರ್ಸಸ್ ವೈಲ್ಡ್' ಕಾರ್ಯಕ್ರಮದ ಚಿತ್ರೀಕರಣಕ್ಕೆ ರಜನಿಕಾಂತ್ ಬಂಡೀಪುರಕ್ಕೆ ಆಗಮಿಸಿದ್ದರು. ಚಿತ್ರೀಕರಣವನ್ನು ಪೂರ್ಣಗೊಳಿಸಿ ಸಂಜೆ 8 ಗಂಟೆಯ ವಿಮಾನದಲ್ಲಿ ಅವರು ಚೆನ್ನೈಗೆ ವಾಪಸ್ ಆದರು.

ಚಿತ್ರೀಕರಣದ ವೇಳೆ ರಜನಿಕಾಂತ್ ಗಾಯಗೊಂಡಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಚೆನ್ನೈ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ರಜನಿಕಾಂತ್, "ಚಿತ್ರೀಕರಣ ಮುಕ್ತಾಯಗೊಂಡಿದೆ. ಕೆಲವು ತರಚು ಗಾಯಗಳಾಗಿವೆ. ನಾನು ಸುರಕ್ಷಿತವಾಗಿದ್ದೇನೆ" ಎಂದು ಸ್ಪಷ್ಟನೆ ನೀಡಿದರು.

Rajinikanth

ಇಂಗ್ಲೆಡ್ ಮೂಲದ ಸಾಕ್ಷ್ಯಚಿತ್ರ ತಯಾರಕ ಬೇರ್ ಗ್ರಿಲ್ಸ್ ಹಿಂದೆ ಪ್ರಧಾನಿ ನರೇಂದ್ರ ಮೋದಿ ಜೊತೆಗೆ 'ಮ್ಯಾನ್ ವರ್ಸಸ್ ವೈಲ್ಡ್' ಕಾರ್ಯಕ್ರಮ ಮಾಡಿದ್ದರು. ಈಗ ರಜನಿಕಾಂತ್ ಜೊತೆ ಕಾರ್ಯಕ್ರಮ ಮಾಡಿದ್ದು, ಅದನ್ನು ಬಂಡೀಪುರದಲ್ಲಿ ಚಿತ್ರೀಕರಿಸಲಾಗಿದೆ.

ಕಾಡು ಪ್ರಾಣಿಗಳಿಗೆ ಯಾವುದೇ ತೊಂದರೆ ಮಾಡಬಾರದು. ಹೆಚ್ಚು ಶಬ್ದ ಮಾಡಬಾರದು ಎಂಬ ಷರತ್ತಿನ ಅನ್ವಯ ಮಂಗಳವಾರ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿತ್ತು. ಗುರುವಾರ ಬಾಲಿವುಡ್ ನಟ ಅಕ್ಷಯ್ ಕುಮಾರ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+