ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಜ್ಯದಲ್ಲಿ ಎಷ್ಟು ಜನ ಮಹಾನ್ ನಾಯಕರು ಇದ್ದಾರೆ?; ಎಚ್‌ಡಿಕೆ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಮಾರ್ಚ್ 14; " ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಡಿ. ಕೆ. ಶಿವಕುಮಾರ್ ಅವರ ಹೆಸರು ಯಾರು ಹೇಳಿದ್ದಾರೆ?. ಅವರ ಹೆಸರನ್ನು ಅವರೇ ಏಕೆ ಮುಂದೆ ಬಿಟ್ಟುಕೊಂಡಿದ್ದಾರೆ?. ಅವರೇ ಮಾಡಿದ್ದಾರೆ ಅಂತ ಯಾರಾದರು ಹೇಳಿದ್ದಾರಾ?. ರಾಜ್ಯದಲ್ಲಿ ಎಷ್ಟು ಜನ ಮಹಾನ್ ನಾಯಕರು ಇದ್ದಾರೆ?" ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಪ್ರಶ್ನಿಸಿದರು.

ಭಾನುವಾರ ಮೈಸೂರಿನಲ್ಲಿ ಮಾತನಾಡಿದ ಅವರು, "ರಾಜ್ಯದಲ್ಲಿ ಎಷ್ಟೋ ಜನ ಮಹಾನ್ ನಾಯಕರು ಇಲ್ಲ. ಬಿಜೆಪಿಯಲ್ಲೇ ಒಬ್ಬರು ಮಹಾನ್ ನಾಯಕರು ಬೆಳೆಯುತ್ತಿದ್ದಾರೆ. ಯಾವ ಮಹಾನ್ ನಾಯಕರು? ಅಂತ ಹೇಳಿದ್ದಾರೆ ಗೊತ್ತಿಲ್ಲ" ಎಂದರು.

ಸಿಡಿ ಪ್ರಕರಣ; ಯುವತಿ ಮನೆಗೆ ಪೊಲೀಸರ ನೋಟಿಸ್ ಸಿಡಿ ಪ್ರಕರಣ; ಯುವತಿ ಮನೆಗೆ ಪೊಲೀಸರ ನೋಟಿಸ್

"ಇವರು ತಾವೇ ಅಂತ ಯಾಕೆ ಅಂದುಕೊಂಡರೋ ಅದು ಗೊತ್ತಿಲ್ಲ. ಡಿ. ಕೆ. ಶಿವಕುಮಾರ್ ಅವರಿಗೆ ಇರುವ ಅನುಭವ ನಮಗೂ ಇಲ್ಲ. ನಿನ್ನೆ ದುಡುಕಿ ಅವರ ಹೆಸರನ್ನು ಅವರೇ ಹೇಳಿದ್ದಾರೆ. ಯಾಕೆ ಈ ಪ್ರಕರಣಕ್ಕೆ ಅವರ ಹೆಸರು ಸಿಲುಕಿಸಿಕೊಳ್ಳಲು ಹೊರಟಿದ್ದಾರೆ? ಗೊತ್ತಿಲ್ಲ" ಎಂದು ಕುಮಾರಸ್ವಾಮಿ ಹೇಳಿದರು.

ಸಿಡಿ ಗರ್ಲ್ ಹೇಳಿಕೆ: ಪರದೆ ಹಿಂದಿನ ಅಸಲಿ ಸತ್ಯವೇನು? ಸಿಡಿ ಗರ್ಲ್ ಹೇಳಿಕೆ: ಪರದೆ ಹಿಂದಿನ ಅಸಲಿ ಸತ್ಯವೇನು?

Ramesh Jarkiholi CD HD Kumaraswamy On DK Shivakumar Name

"ಈ ಪ್ರಕರಣವನ್ನು ಎಲ್ಲರೂ ಹುಡುಗಾಟಿಕೆಯಾಗಿ ತೆಗೆದುಕೊಂಡಿದ್ದಾರೆ. ಯಾರಿಗೂ ಗಂಭೀರತೆ ಇಲ್ಲ, ಇದರಿಂದ ರಾಜ್ಯದ ಗೌರವ ಹಾಳಾಗುತ್ತಿದೆ. ರಾಜ್ಯದ ಗೌರವ ಉಳಿಸಲು ನಿಷ್ಪಕ್ಷಪಾತ ತನಿಖೆ ಮಾಡಬೇಕು" ಎಂದು ಕುಮಾರಸ್ವಾಮಿ ಆಗ್ರಹಿಸಿದರು.

ರಮೆಶ್ ಜಾರಕಿಹೊಳಿ ಸಿಡಿ ಸ್ಫೋಟ ಪ್ರಕರಣದ ತನಿಖೆಗೆ ಚೆಕ್‌ಮೇಟ್ ! ರಮೆಶ್ ಜಾರಕಿಹೊಳಿ ಸಿಡಿ ಸ್ಫೋಟ ಪ್ರಕರಣದ ತನಿಖೆಗೆ ಚೆಕ್‌ಮೇಟ್ !

"ಸಂತ್ರಸ್ತ ಮಹಿಳೆಗೆ ಯಾರಿಂದ ರಕ್ಷಣೆ ಸಿಗಬೇಕಿತ್ತೋ ಅದು ಸಿಕ್ಕಿದೆ. ಸರ್ಕಾರದಿಂದ ಅವಳನ್ನು ಹುಡುಕಲು ಆಗದಿದ್ದರೂ, ಹಿಂದೆ ಇರುವವರು ಎಲ್ಲಾ ಬಗೆಯ ರಕ್ಷಣೆ ಕೊಟ್ಟಿದ್ದಾರೆ. ಸರ್ಕಾರಕ್ಕೆ ನಿನ್ನೆ ಆಕೆ ವೀಡಿಯೋ ರೆಕಾರ್ಡ್ ಕಳುಹಿಸಿದ್ದಾಳೆ. ಬೇರೆ ಯಾರಾದರೂ ರೆಕಾರ್ಡ್ ಮಾಡಿ ಕಳುಹಿಸಿದ್ದಾರೋ? ಎಂಬುವುದು ತನಿಖೆಯಿಂದ ಹೊರ ಬರಬೇಕು" ಎಂದರು.

"ರಕ್ಷಣೆಯನ್ನು ಸರ್ಕಾರ ಕೊಟ್ಟಿದಿಯೋ?, ರಮೇಶ್ ಜಾರಕಿಹೊಳಿ ವಿರುದ್ಧ ಇರುವವರು ಕೊಟ್ಟಿದ್ದಾರೋ? ಗೊತ್ತಿಲ್ಲ. ಸರ್ಕಾರ ರಚನೆಗೆ ಈತನ ಸಹಾಯ ಪಡೆದವರು, ಈತನ ಸ್ಪೀಡ್ ಕಟ್ ಮಾಡೋಕೆ ಮಾಡಿದ್ದಾರೋ? ನನಗೆ ಗೊತ್ತಿಲ್ಲ" ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

"ಅಧಿಕಾರಿಗಳು ಯಾವುದೇ ಪ್ರಭಾವಕ್ಕೆ ಒಳಗಾಗಬಾರದು. ಇದರಿಂದ ರಾಜ್ಯದ ಗೌರವ ಹಾಳಾಗುತ್ತಿದೆ. ಗೌರವ ಉಳಿಸಲು ನಿಷ್ಪಕ್ಷಪಾತ ತನಿಖೆ ಮಾಡಬೇಕು. ಯಾವುದೇ ತನಿಖೆ ಸರ್ಕಾರದಿಂದ ನಡೆದಾಗ ತಾರ್ಕಿಕ ಅಂತ್ಯ ಕಾಣಲ್ಲ" ಎಂದು ಹೇಳಿದರು.

English summary
CD which lead to the resignation of minister Ramesh Jarkiholi is most discussing topic in Karnataka politics. Former chief minister H. D. Kumaraswamy comment on the issue.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X